ಕೋವಿಡ್: ರಾಜ್ಯದ ಆರು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲು

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 589 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಕೋವಿಡ್–19 ದೃಢಪಟ್ಟವರ ಒಟ್ಟು ಸಂಖ್ಯೆ 29,76,589ರಷ್ಟಾಗಿದೆ. ರಾಜ್ಯದಲ್ಲಿ ಇಂದು 13 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದು, ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,807ಕ್ಕೆ ಏರಿದೆ ಇದೇ ಅವಧಿಯಲ್ಲಿ 887 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ. ಈವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 29,26,284 ರಷ್ಟಾಗಿದೆ. ರಾಜ್ಯದಲ್ಲಿ ಸದ್ಯ 12,469 ಸಕ್ರಿಯ ಪ್ರಕರಣಗಳಿವೆ. ಕೋವಿಡ್ ದೃಢಪಡುತ್ತಿರುವ ಶೇಕಡಾವಾರು ಪ್ರಮಾಣ 0.46 ರಷ್ಟಾಗಿದ್ದು, ಸಾವಿನ […]

ಹಿರಿಯ ನಾಗರಿಕರನ್ನು ಗೌರವದಿಂದ ನೋಡಿಕೊಳ್ಳಬೇಕು: ಶಾಸಕ ರಘುಪತಿ ಭಟ್

ಉಡುಪಿ: ಕುಟುಂಬದಲ್ಲಿ ಹಾಗೂ ಸಮಾಜದಲ್ಲಿ ಹಿರಿಯ ನಾಗರಿಕರನ್ನು ನಿರ್ಲಕ್ಷಿಸದೇ, ಅವರನ್ನು ಗೌರವದಿಂದ ನೋಡಿಕೊಳ್ಳುವ ವಾತಾವರಣವನ್ನು ಸೃಷ್ಠಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು. ಉಡುಪಿ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಸ್ಪತ್ರೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ವಕೀಲರ ಸಂಘ (ರಿ) ಉಡುಪಿ ಹಿರಿಯ ನಾಗರಿಕರ ಸಂಸ್ಥೆಗಳು ಉಡುಪಿ, ಉಡುಪಿ […]

ಪೆರ್ಡೂರು ಗ್ರಾಪಂನಲ್ಲಿ ಅಭಿವೃದ್ಧಿ ಕಾರ್ಯ ನಿಂತು ಹೋಗಿದ್ದು, ಆಡಳಿತ ವ್ಯವಸ್ಥೆ ನಿಷ್ಕ್ರಿಯಗೊಂಡಿದೆ: ಗ್ರಾಪಂ ಉಪಾಧ್ಯಕ್ಷ ಚೇತನ್ ಶೆಟ್ಟಿ ಆರೋಪ

ಪೆರ್ಡೂರು: ಪೆರ್ಡೂರು ಗ್ರಾಪಂ ಅಧ್ಯಕ್ಷರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕಡತಗಳ ಕೆಲಸ ಕಾರ್ಯಗಳು ಆಗದೆ ಸಾರ್ವಜನಿಕರು ನಿತ್ಯ ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಸಾಮಾನ್ಯ ಸಭೆ, ಕ್ರಿಯಾಯೋಜನೆ ತಯಾರಾಗದೆ ಕಳೆದ ಒಂದು ತಿಂಗಳಿನಿಂದ ಗ್ರಾಪಂ ಆಡಳಿತ ಸಂಪೂರ್ಣ ನಿಷ್ಕ್ರಿಯಗೊಂಡಿದೆ ಎಂದು ಪೆರ್ಡೂರು ಗ್ರಾಪಂ ಉಪಾಧ್ಯಕ್ಷ ಚೇತನ್ ಶೆಟ್ಟಿ ಆರೋಪಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿದೆ. ಜನರ ಪರ ನಿಲ್ಲಬೇಕಾದ ಸ್ಥಳೀಯಾಡಳಿತ, ಜನಪ್ರತಿನಿಧಿಗಳು ರಾಜಕೀಯ ಮಾಡುತ್ತಿದ್ದಾರೆ. […]

ಗಂಗೊಳ್ಳಿ: ಗೋ ಹತ್ಯೆ ವಿರೋಧಿಸಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬಹೃತ್ ಪ್ರತಿಭಟನಾ ಜಾಥಾ, ಸಭೆ

ಕುಂದಾಪುರ: ಗೋ ಹತ್ಯೆ ವಿರೋಧಿಸಿ ಮತ್ತು ಗೋ ಹಂತಕರನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಹಿಂದೂ ಸಂಘಟನೆಗಳ ವತಿಯಿಂದ ಶುಕ್ರವಾರ ಗಂಗೊಳ್ಳಿಯಲ್ಲಿ ಬೃಹತ್ ಪ್ರತಿಭಟನಾ ಜಾಥಾ ಮತ್ತು ಸಭೆ ನಡೆಯಿತು. ಪ್ರತಿಭಟನಾ ಸಭೆಯನ್ನು‌ ಉದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ್ಯದ ಪ್ರಧಾನ ಕಾರ್ಯದರ್ಶಿ ಟಿ.ಕೆ. ಉಲ್ಲಾಸ್ ಅವರು, ಗಂಗೊಳ್ಳಿಯಲ್ಲಿ ಅಮಾನುಷವಾಗಿ ಮತ್ತು ಭಯಾನಕ ರೀತಿಯಲ್ಲಿ ಗೋವುಗಳನ್ನು ವಧೆಗೊಳಿಸಿ, ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ವಿಕೃತಿ ಮೆರೆದಿದ್ದಾರೆ. ಇದು […]

ಉಡುಪಿ: ಅ. 4ರಂದು ರಾಷ್ಟ್ರೀಯ ಅಪ್ರೆಂಟಿಷಿಪ್ ಮೇಳ

ಉಡುಪಿ: ಉಡುಪಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಅಕ್ಟೋಬರ್ 4 ರಂದು ಬೆಳಿಗ್ಗೆ 10 ಗಂಟೆಗೆ ರಾಷ್ಟಿಯ ಅಪ್ರೆಂಟಿಷಿಪ್ ಮೇಳ ಕಾರ್ಯಕ್ರಮವನ್ನು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಗತಿ ನಗರ ಮಣಿಪಾಲದಲ್ಲಿ ಆಯೋಜಿಸಲಾಗಿದೆ. ಅಪ್ರೆಂಟಿಷಿಪ್ ಮೇಳಕ್ಕೆ ಐ.ಟಿ.ಐ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಹಾಜರಾಗಲು https://docs.google.com/forms/d/e/1FAlpQLScJf4NjbDSTkZ_As2ynoW2yWCgeP3J6X6OGR36k4DLiW7q0g/viewform ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಅಪ್ರೆಂಟಿಷಿಪ್ ತರಬೇತಿ ಮೇಳದಲ್ಲಿ ಕಂಪೆನಿ ಹಾಗೂ ಕೈಗಾರಿಕ ಸಂಸ್ಥೆಗಳು ಭಾಗವಹಿಸಲು https://docs.google.com/forms/d/e/1FAlpQLSfb5RDQeEbZBGvrodVqFD1GVllCL2HutN9WycETG1mAhmk_pQ/viewform ಗೂಗಲ್ ಲಿಂಕ್ ಅಥವಾ ಮೇಳದಂದು ಸಂಸ್ಥೆಯಲ್ಲಿ ಶಿಶಿಕ್ಷ ಮೂಲಕ ನೋಂದಾಣಿ […]