ಕುಂದಾಪುರ ಶ್ರೀ ವೆಂಕಟರಮಣ ಸಮೂಹ ವಿದ್ಯಾ ಸಂಸ್ಥೆಗಳಲ್ಲಿ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ
ಕುಂದಾಪುರ: ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಸಹಯೋಗದೊಂದಿಗೆ ಗಾಂಧೀ ಹಾಗೂ ಶಾಸ್ತ್ರಿ ಜಯಂತಿ ಆಚರಣೆಯನ್ನು ಶ್ರೀ ವೆಂಕಟರಮಣ ಸಮೂಹ ವಿದ್ಯಾಸಂಸ್ಥೆಯಲ್ಲಿ ಆಚರಿಸಲಾಯಿತು. ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಥಾನೀಯ ಆಯುಕ್ತರಾದ ಕೊಗ್ಗ ಗಾಣಿಗ ಕಾರ್ಯಕ್ರಮವನ್ನು ಉದ್ಘಾಟಿಸಿ, ಗಾಂಧೀ ಹಾಗೂ ಶಾಸ್ತ್ರಿ ವಿಚಾರಧಾರೆಗಳ ಕುರಿತು ಮಾತನಾಡಿದರು. ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ನ ತರಬೇತಿ ಆಯುಕ್ತ ಆನಂದ ಅಡಿಗ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಕುರಿತು ಮಾತನಾಡಿದರು. […]
ಮಂಚಿಕೆರೆ: ಮನೆಯ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ
ಮಣಿಪಾಲ: ಮನೆಯ ಬಾಗಿಲು ಮುರಿದು ಒಳಗೆ ಪ್ರವೇಶಿಸಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ 80 ಬಡಗಬೆಟ್ಟು ಗ್ರಾಮದ ಮಂಚಿಕೆರೆ ಎಂಬಲ್ಲಿ ನಡೆದಿದೆ. ಮಂಚಿಕೆರೆ ನಾಗಬನ ಬಳಿಯ ಅಶ್ವಿನ್ ಕುಮಾರ್ ಎಂಬವರ ಮನೆಯಲ್ಲಿ ಅ.1ರ ಬೆಳಿಗ್ಗೆ 10.30ರಿಂದ ರಾತ್ರಿ 8.45 ರ ಮಧ್ಯಾವಧಿಯಲ್ಲಿ ಕಳ್ಳತನ ನಡೆದಿದೆ. ಮನೆಯ ಹಾಲಿನ ಹಿಂಭಾಗದ ಬಾಗಿಲನ್ನು ಮುರಿದು ಒಳಗೆ ಪ್ರವೇಶಿಸಿದ ಕಳ್ಳರು, ಮಾಸ್ಟರ್ ಬೆಡ್ ರೂಮ್ ನಲ್ಲಿನ ಗೋದ್ರೇಜ್ ನಲ್ಲಿಟ್ಟಿದ್ದ 72 ಗ್ರಾಂ ತೂಕದ ಹವಳದ ಬಂಗಾರದ ಸರ, […]
ಉಡುಪಿ: ಕಾಂಗ್ರೆಸ್ ನಿಂದ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಉಡುಪಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯು ಇಂದು ಕಾಂಗ್ರೆಸ್ ಭವನದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಮತ್ತು ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ವತಿಯಿಂದ ಜರಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು, ಮಹಾತ್ಮಾ ಗಾಂಧಿಯವರ ತತ್ವಾದರ್ಶಗಳನ್ನು ಓರ್ವ ವ್ಯಕ್ತಿ, ಒಂದು ಸಂಸ್ಥೆ, ಒಂದು ಪಕ್ಷ ಪಾಲಿಸಿಕೊಂಡು ಬಂದರೆ ಜೀವನ ಪಾವನವಾಗಲು ಬೇರೇನೂ ಬೇಕಾಗಿಲ್ಲ. ಮಹಾತ್ಮಾ ಗಾಂಧೀಜಿಯವರ ಅಹಿಂಸಾ ತತ್ವ ಜನಮನ್ನಣೆಗಳಿಸಿ […]
ಕೊಡಂಗೆ ಶ್ರೀರಾಮ ಭಜನಾ ಮಂದಿರದ ಸ್ಥಾಪಕ ಲಕ್ಷ್ಮಣ ಕಾಮತ್ ನಿಧನ
ಮಣಿಪಾಲ: ಕೊಡಂಗೆ ಶ್ರೀರಾಮ ಭಜನಾ ಮಂದಿರದ ಸ್ಥಾಪಕ ಕೊಡಂಗೆ ಲಕ್ಷ್ಮಣ ಕಾಮತ್ (92) ಅವರು ಸ್ವಗೃಹದಲ್ಲಿ ಶುಕ್ರವಾರ ನಿಧನ ಹೊಂದಿದರು. ಆರ್.ಎಸ್.ಬಿ ಸಮಾಜದ ಹಿರಿಯರಾದ ಇವರು ಹೆರ್ಗಾ ಗ್ರಾಮ ಪಂಚಾಯತ್ ಸದಸ್ಯರಾಗಿ ಹಾಗೂ ಕೊಡಂಗೆ ಶ್ರೀರಾಮ ಮಂದಿರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.
ಉಡುಪಿ: ರಾಮ್ ಸೇನಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೀಪಕ್ ಮೂಡುಬೆಳ್ಳೆ ರಾಜೀನಾಮೆ
ಉಡುಪಿ: ರಾಮ್ ಸೇನಾ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ದೀಪಕ್ ಮೂಡುಬೆಳ್ಳೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಸ್ವ ಇಚ್ಛೆಯಿಂದ ರಾಮ್ ಸೇನಾ ಸಂಘಟನೆಗೆ ರಾಜೀನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.