ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇಳಿಕೆ
ಬೆಂಗಳೂರು: ಸ್ಯಾಮ್‌ಸಂಗ್ ಗ್ಯಾಲಕ್ಸಿ ಸರಣಿಯಲ್ಲಿ ಬಿಡುಗಡೆಯಾಗಿದ್ದ A21s ಸ್ಮಾರ್ಟ್‌ಫೋನ್ ದರದಲ್ಲಿ ₹2,500 ಇಳಿಕೆಯಾಗಿದೆ. ಕಳೆದ ವರ್ಷದ ಜೂನ್‌ನಲ್ಲಿ ಬಿಡುಗಡೆಯಾಗಿದ್ದ ಸ್ಯಾಮ್‌ಸಂಗ್ ಗ್ಯಾಲಕ್ಸಿ A21s, 4 GB + 64 GB ಮಾದರಿಗೆ ಪರಿಷ್ಕೃತ ದರ ₹13,999 ಹಾಗೂ 6 GB + 64 GB ಆವೃತ್ತಿಗೆ ₹16,490 ದರವಿದೆ ಎಂದು ಮುಂಬೈ ಮೂಲದ ರಿಟೇಲರ್ ಆಗಿರುವ ಮಹೇಶ್ ಟೆಲಿಕಾಂ ತಿಳಿಸಿದ್ದಾರೆ. ಕಪ್ಪು, ಬಿಳಿ ಮತ್ತು ನೀಲಿ ಎಂಬ ಮೂರು ಬಣ್ಣಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ದೊರೆಯಲಿದೆ.
ಬ್ರಹ್ಮಾವರ: ಜಿ. ಶಂಕರ್ ಹುಟ್ಟುಹಬ್ಬದ ಪ್ರಯುಕ್ತ ನಾಳೆ (ಅ.5) ರಕ್ತದಾನ ಶಿಬಿರ, ಕೋವಿಡ್ ಲಸಿಕಾ ಮಹಾಮೇಳ
ಉಡುಪಿ: ಅಂಬಲಪಾಡಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ ಡಾ. ಜಿ. ಶಂಕರ್ ಅವರ ಹುಟ್ಟುಹಬ್ಬದ ಅಂಗವಾಗಿ ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಮಣಿಪಾಲ ಕೆಎಂಸಿ ರಕ್ತನಿಧಿ ವಿಭಾಗ ಹಾಗೂ ಕುಂದಾಪುರ ರೆಡ್ ಕ್ರಾಸ್ ಸೊಸೈಟಿಯ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಕೋವಿಡ್ ಲಸಿಕಾ ಮಹಾಮೇಳವು ನಾಳೆ (ಅ.5) ಬೆಳಿಗ್ಗೆ 8.30ರಿಂದ ಬ್ರಹ್ಮಾವರದ ಶ್ಯಾಮಿಲಿ ಶನಾಯದಲ್ಲಿ ನಡೆಯಲಿದೆ.
ಲಿಖಿಂಪುರ್ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ಹಾಗೂ ಪುತ್ರನ ವಿರುದ್ಧ ಮರ್ಡರ್ ಕೇಸ್ ದಾಖಲು
ನವದೆಹಲಿ: ಉತ್ತರ ಪ್ರದೇಶದ ಲಿಖಿಂಪುರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾ ಹಾಗೂ ಇವರ ಪುತ್ರ ಆಶೀಶ್ ಮಿಶ್ರಾ ವಿರುದ್ಧ ಉತ್ತರ ಪ್ರದೇಶದ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 120ಬಿ, 147, 148, 149, 279, 302, 304ಎ ಅಡಿಯಲ್ಲಿ ದೂರು ದಾಖಿಸಲಾಗಿದೆ. ಪೊಲೀಸರು ನೀಡಿರುವ ಮಾಹಿತಿಯಂತೆ ಕೇಂದ್ರ ಸಚಿವರ ಪುತ್ರನ ಕಾರು ಹರಿಸಿದ ನಂತರ ಹಿಂಸಾಚಾರ ಉಂಟಾಗಿದೆ. ಈ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ರೈತರೂ […]
ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದ ಸೇವೆ ಮತ್ತು ಸಮರ್ಪಣ ಅಭಿಯಾನ: ಕುಯಿಲಾಡಿ ಸುರೇಶ್ ನಾಯಕ್
ಹಿರಿಯಡಕ: ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮ ದಿನಾಚರಣೆಯ ಪ್ರಯುಕ್ತ ಪಕ್ಷವು ಹಮ್ಮಿಕೊಂಡಿರುವ ಸೇವೆ ಮತ್ತು ಸಮರ್ಪಣ ಅಭಿಯಾನ ಗರಿಷ್ಠ ಸೇವಾ ಕಾರ್ಯಗಳ ಮೂಲಕ ಜಿಲ್ಲೆಯಾದ್ಯಂತ ಹೊಸ ಸಂಚಲನ ಮೂಡಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆಯ ಅಂಗವಾಗಿ ಸೇವೆ ಮತ್ತು ಸಮರ್ಪಣ ಅಭಿಯಾನದಡಿ ಬಿಜೆಪಿ ಉಡುಪಿ ಜಿಲ್ಲೆ, ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಉಡುಪಿ ಜಿಲ್ಲೆ, ಅಮೋಘ ಉಡುಪಿ ಹಿರಿಯಡ್ಕ, ವೈದ್ಯಕೀಯ ಪ್ರತಿನಿಧಿಗಳ […]
ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಕಾರು ಹರಿಸಿದ ಆರೋಪ: 8 ಮಂದಿ ಮೃತ್ಯು
ಲಖನೌ: ಇಲ್ಲಿನ ಲೆಖಿಂಪುರ್ ಖೆರಿ ಬಳಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಬೆಂಗಾವಲು ಪಡೆಯ ಎರಡು ಎಸ್‌ಯುವಿ ಕಾರುಗಳು ರೈತರ ಮೇಲೆ ಹರಿಯಿತು. ಇದರಿಂದ ನಾಲ್ವರು ರೈತರು ಬಲಿಯಾದರು. ಆಕ್ರೋಶಗೊಂಡ ರೈತರು ಎರಡೂ ಎಸ್‌ಯುವಿಗಳನ್ನು ತಡೆದು ನಿಲ್ಲಿಸಿ, […]