ಮಗನ ಮೇಲೆ ಗುಂಡು ಹಾರಿಸಿ ತಂದೆ: ಕೆಲಸದಾಳು ಬಚಾವ್

ಮಂಗಳೂರು: ತಂದೆಯೇ ತನ್ನ‌ ಮಗನ ಮೇಲೆ ಗುಂಡು ಹಾರಿಸಿದ ಘಟನೆ ಮಂಗಳೂರಿನ ಮೋರ್ಗನ್ಸ್ ಗೇಟ್ ಬಳಿ ಇಂದು ಸಂಜೆ ಸಂಭವಿಸಿದೆ. ಬಾಲಕ ಸುಧೀಂದ್ರ (14) ತಲೆಗೆ ಗುಂಡು ತಗುಲಿದ್ದು, ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೋರ್ಗನ್ ಗೇಟ್ ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ.ಲಿ. ಸಂಸ್ಥೆಯ ಮಾಲೀಕ ರಾಜೇಶ್ ಪ್ರಭು ಗುಂಡು ಹಾರಿಸಿದ ತಂದೆ. ಇವರ ಕಚೇರಿಗೆ ಕೆಲಸದವರೊಬ್ಬರು ಸಂಬಳ ಕೇಳಲು ಬಂದಿದ್ದು, ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದು ಗಲಾಟೆ ನಡೆದಿದೆ. ಈ ವೇಳೆ ಸಿಟ್ಟಿಗೆದ್ದ […]

ಬಿಜೆಪಿ ಶಿರ್ವ ಶಕ್ತಿಕೇಂದ್ರದ ವತಿಯಿಂದ ಯೋಧ ರಾಜೇಂದ್ರ ಪಾಟ್ಕರ್ ಅವರಿಗೆ ಸನ್ಮಾನ

ಶಿರ್ವ: ಬಿಜೆಪಿ ಶಿರ್ವ ಶಕ್ತಿಕೇಂದ್ರದ ವತಿಯಿಂದ ನಡೆದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ಸ್ಥಳೀಯ ಯೋಧ ರಾಜೇಂದ್ರ ಪಾಟ್ಕರ್ ಅವರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಹಾಗೂ ಹಿರಿಯರಾದ ವಸಂತ ಶೆಣೈ ಶಿರ್ವ, ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀನಿವಾಸ ಶೆಣೈ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ […]

ಕರ್ನಾಟಕ ತುಳುಸಾಹಿತ್ಯ ಅಕಾಡೆಮಿಯಿಂದ ಮಲಬಾರ್ ಗೋಲ್ಡ್ ಸಂಸ್ಥೆಯ ಹಫೀಸ್ ರೆಹಮಾನ್ ಅವರಿಗೆ ಸನ್ಮಾನ

ಉಡುಪಿ: ಕೊರೊನಾ ಸಂಕಷ್ಟಕಾಲದಲ್ಲಿ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯ ಸುಮಾರು 200 ಕ್ಕೂ ಹೆಚ್ಚು ಕಲಾವಿದರಿಗೆ, ದೈವಾರಾಧನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ, ಆಹಾರ ಧಾನ್ಯದ ಕಿಟ್ ಗಳನ್ನು ನೀಡಿ ಸಹಕರಿಸಿದ ಉಡುಪಿಯ ಮಲಬಾರ್ ಗೋಲ್ಡ್ & ಡೈಮಂಡ್ ಸಂಸ್ಥೆಯ ಸಾಮಾಜಿಕ ಕಳಕಳಿಯನ್ನು ಗುರುತಿಸಿ ಕರ್ನಾಟಕ ತುಳುಸಾಹಿತ್ಯ ಅಕಾಡೆಮಿ ವತಿಯಿಂದ ಮಲಬಾರ್ ಗೋಲ್ಡ್ ಸಂಸ್ಥೆಯ ಮುಖ್ಯಸ್ಥರಾದ ಹಫೀಜ್ ರೆಹಮಾನ್ ಅವರಿಗೆ ಅಭಿನಂದನಾ ಪತ್ರವನ್ನು ನೀಡಿ ಗೌರವಿಸಲಾಯಿತು. ಈ ವೇಳೆ ಗೆಸ್ಟ್ ರಿಲೇಶನ್ ಹೆಡ್ ರಾಘವೇಂದ್ರ ನಾಯಕ್ ಜತೆಗಿದ್ದರು. ತುಳುಸಾಹಿತ್ಯ ಅಕಾಡೆಮಿಯ […]

ಶಿರ್ಲಾಲು ಗ್ರಾಪಂ ಸಭೆಯಲ್ಲಿ ಮಾರಾಮಾರಿ: ಕುಡಿಯುವ ನೀರಿಗಾಗಿ ಹೊಡೆದಾಡಿಕೊಂಡ ಗ್ರಾಮಸ್ಥರು

ಅಜೆಕಾರು: ಶಿರ್ಲಾಲು ಗ್ರಾಮ ಪಂಚಾಯತ್ ನ ಪ್ರಥಮ ಗ್ರಾಮ ಸಭೆಯಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪುಗಳು ಹೊಡೆದಾಡಿಕೊಂಡ ಘಟನೆ ಇಂದು ನಡೆದಿದೆ. ಸಭೆಯಲ್ಲಿ ಮುಂಡ್ಲಿ ಗ್ರಾಮದ ಮಹಿಳೆಯೊಬ್ಬರು ಕುಡಿಯುವ ನೀರು ಒದಗಿಸುವಂತೆ ಮನವಿ ಮಾಡಿದರು. ಇದಕ್ಕೆ ಪಂಚಾಯತ್ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಗ್ರಾಮಸ್ಥರ ಮಧ್ಯೆ ಎರಡು ಗುಂಪುಗಳಾಗಿ ಮಾರ್ಪಟ್ಟಿದ್ದು, ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಬಳಿಕ ಗಲಾಟೆ ಅಜೆಕಾರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಗಲಾಟೆಯಲ್ಲಿ ಭಾಗಿಯಾದವರನ್ನು ಠಾಣೆಗೆ ಕರೆದುಕೊಂಡು […]

ಕಾಪು: ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಕುತ್ಯಾರು ಪಂಚಾಯತ್ ವ್ಯಾಪ್ತಿಯ ಕಳತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಪ್ರಸನ್ನ ಆಚಾರ್ಯ, ಪ್ರಶಾಂತ ಆಚಾರ್ಯ, ಶಾಂತ ಪೂಜಾರಿ ಹಾಗೂ ಡೇನಿಸ್ ಅವರು ಕಳತ್ತೂರು ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಧ್ವಜ ಸ್ವೀಕರಿಸಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಹಾಗೂ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವ್ಯಕ್ತಿ ಪ್ರಾಧಿಕಾರ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ […]