ಉಡುಪಿ: ಸ್ವರ್ಣ ನದಿಗೆ ಬಾಗಿನ ಅರ್ಪಿಸಿದ ಸಚಿವ ಸುನಿಲ್ ಕುಮಾರ್
ಉಡುಪಿ: ಉಡುಪಿಯ ಜೀವನದಿಯಾದ ಸ್ವರ್ಣ ನದಿಗೆ ಶೀಂಬ್ರ ಸಿದ್ಧಿವಿನಾಯಕ ದೇವಸ್ಥಾನದ ಬಳಿಯ ಕೃಷ್ಣಾಂಗಾರಕ ಸ್ನಾನಘಟ್ಟದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಇಂದು ಬಾಗಿನ ಅರ್ಪಿಸಿದರು. ಸಚಿವರಿಗೆ ಪತ್ನಿ ಪ್ರಿಯಾಂಕ ಸಾಥ್ ನೀಡಿದರು. ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮರಾವ್, ಎಸ್ಪಿ ವಿಷ್ಣುವರ್ಧನ್, ಎಡಿಸಿ ಸದಾಶಿವ ಪ್ರಭು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರದ […]
ದತ್ತಪೀಠ: ಹಿಂದೂಗಳ ಭಾವನೆಗೆ ಧಕ್ಕೆಯಾಗದಂತೆ ನಿರ್ಣಯ; ಸಚಿವ ಸುನಿಲ್ ಕುಮಾರ್
ಉಡುಪಿ: ದತ್ತಪೀಠದ ವಿಚಾರದಲ್ಲಿ ನೂರಾರು ವರ್ಷಗಳಿಂದ ಇರುವ ಹಿಂದೂಗಳ ಭಾವನೆಗೆ ಧಕ್ಕೆ ಬಾರದಂತೆ ಸರ್ಕಾರ ನಿರ್ಣಯಗಳನ್ನು ಕೈಗೊಳ್ಳಲಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಹಿಂದುಗಳ ಭಾವನೆಗಳನ್ನು ಅರ್ಥಮಾಡಿಕೊಂಡು ಕೆಲಸ ಮಾಡುವ ಸರ್ಕಾರ. ಹೀಗಾಗಿ ದತ್ತಪೀಠದ ವಿಷಯದಲ್ಲಿ ಯಾವುದೇ ವಿಳಂಬ ಮಾಡುವ ಪ್ರಶ್ನೆ ಇಲ್ಲ. ಕೋರ್ಟ್ ಆದೇಶದನ್ವಯ ಅನುಷ್ಟಾನಕ್ಕೆ ತರುತ್ತೇವೆ. ಅಲ್ಲಿರುವ ಉಳಿದ ಸಂಗತಿಗಳನ್ನು ಸೇರಿಸಿಕೊಂಡು ದತ್ತಪೀಠದ ಕುರಿತು ಒಳ್ಳೆಯ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ […]
ಕಾರ್ಕಳದಲ್ಲಿ ‘ಯಕ್ಷರಂಗಾಯಣ’ ನಿರ್ಮಾಣ: ಸಚಿವ ಸುನಿಲ್ ಕುಮಾರ್
ಉಡುಪಿ: ಕಾರ್ಕಳದ ಕೋಟಿ- ಚೆನ್ನಯ್ಯ ಥೀಮ್ ಪಾರ್ಕ್ ಆವರಣದಲ್ಲಿ ಎರಡು ಎಕರೆ ಜಾಗದಲ್ಲಿ ಯಕ್ಷರಂಗಾಯಣ ನಿರ್ಮಾಣ ಮಾಡಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಹೇಳಿದರು. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಸದ್ಯ ಒಟ್ಟು ಐದು ರಂಗಾಯಣ ಕಾರ್ಯನಿರ್ವಹಿಸುತ್ತಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಒಳಗೊಂಡಂತೆ ಕರಾವಳಿ ಭಾಗಕ್ಕೆ ಒಂದು ರಂಗಾಯಣ ಬೇಕೆಂಬ ಬೇಡಿಕೆ ಬಹಳ ವರ್ಷಗಳಿಂದ ಇದೆ. ಈ ನಿಟ್ಟಿನಲ್ಲಿ ಯಕ್ಷಗಾನ, ನಾಟಕ ಮತ್ತು […]
ರಾಜಸ್ಥಾನ್ ವಿರುದ್ಧ ಕೆಕೆಆರ್ ಗೆದ್ದರೆ; ಮುಂಬೈ ಪ್ಲೇಆಫ್ ಪ್ರವೇಶಿಸಲು ಸನ್ ರೈಸರ್ಸ್ ವಿರುದ್ಧ ಈ ಅಂತರದಲ್ಲಿ ಗೆಲ್ಲಲೇಬೇಕು.!
ಉಡುಪಿ: ಪ್ರಸಕ್ತ ಐಪಿಎಲ್ ಟಿ20 ಟೂರ್ನಿ ಅಂತಿಮ ಘಟ್ಟಕ್ಕೆ ತಲುಪಿದ್ದು, ಇನ್ನು ಕೆಲವೇ ಲೀಗ್ ಹಂತದ ಪಂದ್ಯಗಳು ಬಾಕಿ ಇವೆ. ಈಗಾಗಲೇ ಡೆಲ್ಲಿ, ಚೆನ್ನೈ ಹಾಗೂ ಬೆಂಗಳೂರು ತಂಡಗಳು ಪ್ಲೇ ಆಫ್ ಹಂತಕ್ಕೆ ತಲುಪಿವೆ. ಸದ್ಯ ಪ್ಲೇ ಆಫ್ ಪ್ರವೇಶಿಸಲಿರುವ ನಾಲ್ಕನೇ ತಂಡದ ಸ್ಥಾನಕ್ಕಾಗಿ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಐದನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಎರಡೂ ತಂಡಗಳು ಸಹ ತಲಾ 12 ಅಂಕಗಳನ್ನು […]
ಉಡುಪಿ: ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಕೂಡಲೇ ಬಂಧಮುಕ್ತಿಗೊಳಿಸದಿದ್ದರೆ ಉಗ್ರ ಪ್ರತಿಭಟನೆಯ ಎಚ್ಚರಿಕೆ
ಉಡುಪಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಹಾಗೂ ಶೀಘ್ರವೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಲಖಿಂಪುರ್ ನಲ್ಲಿ ನಡೆದ ಹಿಂಸಾಚಾರದಲ್ಲಿ ಮೃತರಾದ ರೈತರ ಕುಟುಂಬಗಳಿಗೆ ಸ್ವಾಂತನ ಹೇಳಲು ಪ್ರಿಯಾಂಕ ಗಾಂಧಿ ತೆರಳಿದ್ದರು. ಈ ವೇಳೆ ಅವರನ್ನು ಪೊಲೀಸರು ಅಡ್ಡಗಟ್ಟಿ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ಅವಕಾಶ ನೀಡದೆ ಬಂಧಿಸಿರುವುದು ಖಂಡನೀಯ. ಅವರನ್ನು ಕೂಡಲೇ ಬಿಡುಗಡೆ […]