ದಸರಾ ಬಳಿಕ 1ರಿಂದ 5ನೇ ತರಗತಿ ಆರಂಭ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಉಡುಪಿ: ಒಂದರಿಂದ ಐದನೇ ತರಗತಿಯ ಮಕ್ಕಳಿಗೆ ದಸರಾ ಹಬ್ಬದ ಬಳಿಕ ಶಾಲಾ ತರಗತಿಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಉಡುಪಿಯಲ್ಲಿ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಶಾಲಾ ಹಾಜರಾತಿ ಕಡ್ಡಾಯಗೊಳಿಸಿಲ್ಲ. ದಸರಾ ಮುಗಿದ ತಕ್ಷಣ 1 ರಿಂದ 5ನೇ ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಅವರಿಗೂ ಹಾಜರಾತಿ ಕಡ್ಡಾಯವಿಲ್ಲ ಎಂದರು. ಶಾಲೆ ಆರಂಭಗೊಂಡರೂ ಆಫ್ ಲೈನ್, ಆನ್ ಲೈನ್ ತರಗತಿಗಳು ನಡೆಯಲಿವೆ. ಗ್ರಾಮೀಣ ಭಾಗದಲ್ಲಿ ಶೇ.90ರಷ್ಟು ಹಾಜರಾತಿ […]
ಕೊಡವೂರು: ಕೊಪ್ಪಳ ತೋಟ ಪರಿಸರದ ನೂತನ ಕಾಂಕ್ರಿಟ್ ರಸ್ತೆ ಉದ್ಘಾಟನೆ
ಕೊಡವೂರು: ಕೊಡವೂರು ವಾರ್ಡಿನ ಕೊಪ್ಪಳ ತೋಟ ಪರಿಸರದ ನೂತನ ಕಾಂಕ್ರಿಟ್ ರಸ್ತೆಯನ್ನು ಹಿರಿಯ ಮುಖಂಡ ವಿಜಯ್ ಬಂಗೇರ ಅವರು ಉದ್ಘಾಟಿಸಿದರು. ಸ್ಥಳೀಯರ ಬೇಡಿಕೆಯಂತೆ ಶಾಶ್ವತವಾದ ರಸ್ತೆಯನ್ನು ನಿರ್ಮಿಸಿಕೊಡಲಾಯಿತು. ಜನತೆಯ ಬಹುದಿನಗಳ ಬೇಡಿಕೆ ಇದಾಗಿದ್ದು, ಸರಿಯಾದ ರಸ್ತೆ ಇಲ್ಲದೆ ಸಂಚಾರಕ್ಕೆ ತುಂಬಾ ತೊಂದರೆಯಾಗಿದ್ದು ಮಳೆಗಾಲದ ಸಮಯದಲ್ಲಿ ಗುಂಡಿ ಬಿದ್ದ ರಸ್ತೆಯಲ್ಲಿ ಸಂಚರಿಸುವುದು ತುಂಬಾ ಕಷ್ಟದ ಕೆಲಸವೇ ಆಗಿತ್ತು. ಸ್ಥಳೀಯರ ಬೇಡಿಕೆಯಂತೆ ಮನವಿ ಸಲ್ಲಿಸಿ ಆದಷ್ಟು ಬೇಗ ರಸ್ತೆಯನ್ನು ನಿರ್ಮಿಸಲು ಸಹಕರಿಸಿದ ನಗರ ಸಭಾ ಸದಸ್ಯರಾದ ವಿಜಯ್ ಕೊಡವೂರು ಇವರಿಗೆ […]
ಹೆಬ್ರಿಯಲ್ಲಿ ನೂತನ ಗೋಶಾಲೆಗೆ ಭೂಮಿ ಪೂಜೆ
ಹೆಬ್ರಿ: ಕಳೆದ ಸುಮಾರು ಇಪ್ಪತ್ತು ವರ್ಷಗಳಿಂದ ರಾಜ್ಯದ ಕರಾವಳಿ ಪ್ರದೇಶದಲ್ಲಿ ಗೋಶಾಲೆಗಳನ್ನು ಸ್ಥಾಪಿಸಿ, ಕಸಾಯಿಖಾನೆಗೆ ಸಾಗುತ್ತಿದ್ದ ಅಥವಾ ಒಂದಿಲ್ಲೊಂದು ಕಾರಣದಿಂದ ಅನಾಥವಾದ ಸಾವಿರಾರು ಹಸುಗಳನ್ನು ಪೋಷಿಸುವ ಮಹತ್ಕಾರ್ಯವನ್ನು ಸಮಾಜದ ಸದ್ಭಕ್ತರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಸುತ್ತಿರುವ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಈ ಕ್ರಾಂತಿಕಾರ್ಯದಲ್ಲಿ ಶುಕ್ರವಾರ ಮತ್ತೊಂದು ಹೆಜ್ಜೆಯನ್ನಿಟ್ಟಿದ್ದಾರೆ . ಶ್ರೀ ಮಠದ ಭಕ್ತರಾಗಿರುವ ಶ್ರೀ ಪದ್ಮನಾಭ ಆಚಾರ್ಯರು ಹೆಬ್ರಿಯ ಗಿಲ್ಲಾಳಿಯಲ್ಲಿ ತಮ್ಮ ಪೂರ್ವಜರಿಂದ ಬಳುವಳಿಯಾಗಿ ಬಂದ ಏಳು ಎಕರೆ ಭೂಮಿಯನ್ನು ಈ ಉದ್ದೇಶಲ್ಲಾಗಿ ದಾನವಾಗಿ […]
ಉಡುಪಿ: ಅ.10ರಂದು ಸೇವೆ ಮತ್ತು ಸಮರ್ಪಣ ಅಭಿಯಾನದ ಸಮಾರೋಪ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಸೆ.17ರಿಂದ ಅ.7ರ ವರೆಗೆ ಜಿಲ್ಲೆಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದ ‘ಸೇವೆ ಮತ್ತು ಸಮರ್ಪಣ ಅಭಿಯಾನ’ದ ಸಮಾರೋಪ ಸಭೆಯು ಅ.10 ರ ಭಾನುವಾರ ಮಧ್ಯಾಹ್ನ ಗಂಟೆ 3ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಮಾರೋಪ ಸಭೆಯನ್ನು ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಅಭಿಯಾನದ ಸಮಾರೋಪ ಸಭೆಯ ಬಳಿಕ ಜಿಲ್ಲಾ ಬಿಜೆಪಿ, ಜಿಲ್ಲಾ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ, ಜಿಲ್ಲಾ ಮಹಿಳಾ […]
ಉಡುಪಿ ಮಲಬಾರ್ ಗೋಲ್ಡ್‌ನಿಂದ 29 ವಸತಿರಹಿತರಿಗೆ ₹26 ಲಕ್ಷ ರೂ. ಸಹಾಯಧನ ವಿತರಣೆ
ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಸಿಎಸ್‌ಆರ್ ಯೋಜನೆಯಡಿಯಲ್ಲಿ 29 ಅರ್ಹ ವಸತಿ ರಹಿತ ಕುಟುಂಬಗಳಿಗೆ ಒಟ್ಟು 26ಲಕ್ಷ ರೂ. ಸಹಾಯಧನದ ಚೆಕ್ ವಿತರಣಾ ಸಮಾರಂಭವು ಶುಕ್ರವಾರ ಮಲಬಾರ್ ಗೋಲ್ಡ್ ಉಡುಪಿ ಮಳಿಗೆಯಲ್ಲಿ ನಡೆಯಿತು. ಫಲಾನುಭವಿಗಳಿಗೆ ಚೆಕ್ ವಿತರಿಸಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಮಾತನಾಡಿ, ಮಲಬಾರ್ ಗೋಲ್ಡ್ ಆರ್ಥಿಕ ವ್ಯವಹಾರದ ಜೊತೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವುದು ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ. ಆರ್ಥಿಕ, ಶೈಕ್ಷಣಿಕ ಸಾಮಾಜಿಕವಾಗಿ ನೆರವು ನೀಡುವ ಮೂಲಕ […]