ಕುಂದಾಪುರ: ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನಿಂದ ಐದನೇ ಮನೆ ಹಸ್ತಾಂತರ
ಕುಂದಾಪುರ: ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ , ಉಪ್ಪುಂದ ಇದರ ವತಿಯಿಂದ ಕಾಳವರದ ನರಿ ಕೋಡ್ಲು ನಿವಾಸಿ ದಿ. ಸತೀಶ್ ಪೂಜಾರಿ ಅವರ ಕುಟುಂಬಕ್ಕೆ ನೂತನ ಮನೆ ಹಸ್ತಾಂತರಿಸಲಾಯಿತು. ದಿ. ಸತೀಶ್ ಪೂಜಾರಿ ನೂತನ ಮನೆ ನಿರ್ಮಾಣ ಮಾಡುವ ಕನಸು ಕಂಡಿದ್ದರು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ಮನೆ ಪೂರ್ಣವಾಗುವ ಮೊದಲೇ ಅವರು ಅಕಾಲಿಕ ಮರಣ ಹೊಂದಿದರು. ಇದರಿಂದ ಮನೆಯವರು ಮನೆ ನಿರ್ಮಾಣ ಮಾಡಲು ಸಾಧ್ಯವಾಗದೆ ತೀವ್ರ ಕಷ್ಟಕ್ಕೆ ಸಿಲುಕಿದರು. ಈ ವಿಷಯ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ (ರಿ.)ನ […]
ಬಿಜೆಪಿ ಯುವಮೋರ್ಚಾ ಕಾಪು ಮಂಡಲ ವತಿಯಿಂದ ಪ್ಲಾಸ್ಟಿಕ್ ಮುಕ್ತ ಅಭಿಯಾನ; ಬಟ್ಟೆ ಚೀಲಗಳ ವಿತರಣೆ
ಕಾಪು: ಬಿಜೆಪಿ ಯುವಮೋರ್ಚಾ ಕಾಪು ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಜಿಯವರ 71ನೇ ಜನ್ಮದಿನದ ಪ್ರಯುಕ್ತ “ಸೇವೆ ಮತ್ತು ಸಮರ್ಪಣೆ” ಅಭಿಯಾನದ ಅಂಗವಾಗಿ ಕಾಪು ಸಂತೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಮತ್ತು ಬಟ್ಟೆ ಚೀಲ ಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ ಪಿತ್ರೋಡಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ ಕುಮಾರ್ ಮೂಡುಬೆಳ್ಳೆ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ […]
ಸತತ ನಾಲ್ಕನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ನವದೆಹಲಿ: ದೇಶದಾದ್ಯಂತ ಸತತ ನಾಲ್ಕನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕಂಡಿದ್ದು, ಗರಿಷ್ಠ ಮಟ್ಟ ತಲುಪಿವೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ 30 ಪೈಸೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್‌ಗೆ ₹103.54 ಆಗಿದೆ. ಡೀಸೆಲ್ ಬೆಲೆ 35 ಪೈಸೆ ಹೆಚ್ಚಳವಾಗಿ ಪ್ರತಿ ಲೀಟರ್‌ಗೆ ₹92.12 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ₹109.54 ಕ್ಕೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ ₹99.92 ರಷ್ಟಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹107.14 ಮತ್ತು ಡೀಸೆಲ್ ಬೆಲೆ ₹97.77ಕ್ಕೆ ಏರಿದೆ.
ವಿಜಯೇಂದ್ರ ಆಪ್ತ ಗೆಳೆಯನ ಮನೆ ಮೇಲೆ ಐಟಿ ದಾಳಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಪ್ತ ಎಂಆರ್ ಉಮೇಶ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಐಟಿ ರೇಡ್ ಮಾಡಿದ ಸಂದರ್ಭದಲ್ಲಿಯೇ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ಆಪ್ತ ಗೆಳೆಯನ ಮನೆಯ ಮೇಲೆಯೂ ಐಟಿ ದಾಳಿ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಬಿ ವೈ ವಿಜಯೇಂದ್ರ ಆಪ್ತ ಹಾಗೂ ಗೆಳೆಯ ಅರವಿಂದ ಮನೆ ಮೇಲೆ ನಿನ್ನೆ ದಾಳಿ ನಡೆದಿದೆ. ಅರವಿಂದ್ ಮತ್ತು ವಿಜಯೇಂದ್ರ ಕ್ಲಾಸ್ ಮೇಟ್ಸ್. ವಸಂತ ನಗರದಲ್ಲಿ […]
IPL 2021: ಪ್ಲೇಆಫ್ ಪ್ರವೇಶಿಸಲು ಮುಂಬೈ ಇಂಡಿಯನ್ಸ್ ಮುಂದಿದೆ ಕಠಿಣ ಸವಾಲು
ಅಬುಧಾಬಿ: IPL 2021 ಟೂರ್ನಿಯ ಪ್ಲೇಆಫ್ ಹಂತಕ್ಕೆ ಪ್ರವೇಶಿಸಲು ಮುಂಬೈ ಇಂಡಿಯನ್ಸ್ ಮುಂದೆ ಬೆಟ್ಟದಷ್ಟು ಸವಾಲು ಇದೆ. ಐದು ಬಾರಿಯ ಚಾಂಪಿಯನ್ ಆಗಿರುವ ಮುಂಬೈ ಸದ್ಯ ವಿಷಮ ಸ್ಥಿತಿಯಲ್ಲಿದೆ. ಪ್ಲೇ ಆಫ್ ಕನಸು ಬಹುತೇಕ ಕಮರಿ ಹೋಗಿದ್ದು, ಇಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕೊನೆಯ ಲೀಗ್ ಪಂದ್ಯ ಆಡಲಿದೆ. ನಿರೀಕ್ಷೆಗೂ ಮೀರಿದ ರನ್‌ರೇಟ್‌ನೊಂದಿಗೆ ಗೆದ್ದರೆ ಮಾತ್ರ ಪ್ಲೇ ಆಫ್ ಹಂತ ತಲುಪಲು ಸಾಧ್ಯ. ಮುಂಬೈ ಇಂಡಿಯನ್ಸ್ ಪ್ಲೇ ಆಫ್ ತಲುಪಬೇಕಾದರೆ ಏನು ಮಾಡಬೇಕು?, ಎಷ್ಟು ಮೊತ್ತದ ಅಂತರದಲ್ಲಿ […]