ನಾಳೆ (ಅ.10) ಕಟಪಾಡಿ ಸಹಕಾರಿ ವ್ಯವಸಾಯಿಕ ಸಂಘದ ನೂತನ ಪ್ರಧಾನ ಕಚೇರಿ ಕಟ್ಟಡ “ಸಹಕಾರ ಸೌಧ” ಉದ್ಘಾಟನೆ
ಕಟಪಾಡಿ: ಕಟಪಾಡಿ ಸಹಕಾರಿ ವ್ಯವಸಾಯಿಕ ಸಂಘದ ನೂತನ ಪ್ರಧಾನ ಕಚೇರಿ ಕಟ್ಟಡ “ಸಹಕಾರ ಸೌಧ”ದ ಉದ್ಘಾಟನಾ ಸಮಾರಂಭ ನಾಳೆ (ಅ.10) ಬೆಳಿಗ್ಗೆ 10.30ಕ್ಕೆ ಎನ್.ಎಚ್. 66, ಕೆನರಾ ಬ್ಯಾಂಕ್ ಹಿಂಬದಿ, ಕಟಪಾಡಿ ಇಲ್ಲಿ ನಡೆಯಲಿದೆ. ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ನೂತನ ಕಟ್ಟಡವನ್ನು ಉದ್ಘಾಟಿಸುವರು. ಕಟಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಇಂದುಶೇಖರ್ ಸುವರ್ಣ ಅಧ್ಯಕ್ಷತೆ ವಹಿಸುವರು. ಇಂಧನ ಸಚಿವ ವಿ. ಸುನಿಲ್ ಕುಮಾರ್ ಸಭಾಂಗಣ ಉದ್ಘಾಟಿಸುವರು. ಶಾಖಾ ಕಚೇರಿಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ […]
ಉಡುಪಿ: ಗೃಹ ಸಚಿವರಿಂದ ಪೊಲೀಸ್ ವಸತಿಗೃಹ ಉದ್ಘಾಟನೆ
ಉಡುಪಿ: ಉಡುಪಿ ಮಿಷನ್ ಕಾಂಪೌಂಡ್ ಬಳಿ 10 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ 56 ಮನೆಗಳನ್ನು ಒಳಗೊಂಡ ನೂತನ ಪೊಲೀಸ್ ವಸತಿ ಸಮುಚ್ಛಯವನ್ನು ರಾಹ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಉದ್ಘಾಟಿಸಿದರು. ರಾಜ್ಯದಲ್ಲಿ ಗೃಹ ಇಲಾಖೆ ವತಿಯಿಂದ 2025 ರೊಳಗೆ 10000 ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾರ್ಯ ನಡೆಯುತ್ತಿದ್ದು, 200 ಕೋಟಿ ರೂ ವೆಚ್ಚದಲ್ಲಿ 100 ನೂತನ ಪೊಲೀಸ್ ಠಾಣೆಗಳ ನಿರ್ಮಾಣ ಹಾಗೂ 140 ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಪೊಲೀಸ್ ಇಲಾಖೆಯ ಬಲವರ್ಧನೆಗೆ ಎಲ್ಲಾ […]
ಪೊಲೀಸ್ ಇಲಾಖಾ ನೇಮಕಾತಿ: ಮಧ್ಯವರ್ತಿಗಳ ಆಮಿಷಕ್ಕೆ ಬಲಿಯಾಗಬೇಡಿ; ಗೃಹ ಸಚಿವ ಆರಗ ಜ್ಞಾನೇಂದ್ರ
ಉಡುಪಿ: ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿ ಮತ್ತು ನಿಯಮಗಳ ಅನುಸಾರ ನಡೆಸಲಾಗುತ್ತಿದೆ. ಹೀಗಾಗಿ ಕೆಲಸ ಕೊಡಿಸುತ್ತೇವೆಂದು ಬರುವ ಮಧ್ಯವರ್ತಿಗಳ ಆಮಿಷಕ್ಕೆ ಯಾರು ಬಲಿಯಾಗಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಉಡುಪಿಯಲ್ಲಿ ನೂತನ ಪೊಲೀಸ್ ವಸತಿ ಸಮುಚ್ಛಯವನ್ನು ಇಂದು ಉದ್ಘಾಟಿಸಿ ಮಾತನಾಡಿದರು. ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ 947 ಸಬ್ ಇನ್‌ಸ್ಪೆಕ್ಟರ್‌ಗಳು ಹಾಗೂ 4000 ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿ ನಡೆಯುತ್ತಿವೆ. ನೇಮಕಾತಿ ಪ್ರಕ್ರಿಯೆಗಳ ಭಾಗವಾಗಿ ನಡೆಯುತ್ತಿರುವ ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆಗಳು, […]
ರೈಲ್ವೆಯಲ್ಲಿ 4103 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ: ಸೌಥ್ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 4103 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ: ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್, ಪ್ಲಂಬರ್, ಪೇಂಟರ್ ಹುದ್ದೆಗಳ ನೇಮಕಾತಿ ನಡೆಯಲಿದೆ ಒಟ್ಟು ಹುದ್ದೆಗಳ ಸಂಖ್ಯೆ: 4103 ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ತರಬೇತಿ ಭತ್ಯೆ: ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು. ವಯೋಮಿತಿ ಸಡಿಲಿಕೆ: ಅಕ್ಟೋಬರ್ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ […]
ಎರಡನೇ ಬಾರಿಗೆ ಫೇಸ್ ಬುಕ್, ಇನ್ಸ್ಟಾಗ್ರಾಮ್ ಆ್ಯಪ್ ಗಳ ಸರ್ವರ್ ಡೌನ್: ಕ್ಷಮೆಯಾಚನೆ
ಹೊಸದಿಲ್ಲಿ: ಸಾಮಾಜಿಕ ಜಾಲತಾಣದ ಪ್ರಭಾವಿ ಆ್ಯಪ್ ಗಳಾದ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಆ್ಯಪ್ ಗಳ ಸರ್ವರ್ ಮತ್ತೆ ಡೌನ್ ಆಗಿದೆ. ಇದಕ್ಕಾಗಿ ಫೇಸ್ ಬುಕ್ ತನ್ನ ಗ್ರಾಹಕರಲ್ಲಿ ಕ್ಷಮೆಯಾಚಿಸಿದೆ. ಈ ಬಗ್ಗೆ ಫೇಸ್‌ಬುಕ್ ರಾತ್ರಿ 12 ಗಂಟೆಗೆ ಟ್ವೀಟ್ ಮಾಡಿದ್ದು, ನಮ್ಮ ಆ್ಯಪ್‌ಗಳು ಮತ್ತು ಉತ್ಪನ್ನಗಳನ್ನು ಬಳಸುವಲ್ಲಿ ಕೆಲವರಿಗೆ ತೊಂದರೆಯಾಗುತ್ತಿದೆ ಎಂದು ನಮಗೆ ತಿಳಿದಿದೆ. ಸಾಧ್ಯವಾದಷ್ಟು ಬೇಗನೆ ಸಾಮಾನ್ಯ ಸ್ಥಿತಿಗೆ ಮರಳಲು ನಾವು ಕೆಲಸ ಮಾಡುತ್ತಿದ್ದೇವೆ ಮತ್ತು ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಹೇಳಿದೆ. ಸೋಮವಾರವಷ್ಟೇ […]