ಶಿರ್ವ: ಉದ್ಯಮಿ, ಸಮಾಜಸೇವಕ ಸೈಮನ್ ಡಿಸೋಜ ಆತ್ಮಹತ್ಯೆ

ಶಿರ್ವ: ಸಾಫ್ಟ್ ವೇರ್ ಉದ್ಯಮಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವದಲ್ಲಿ ನಡೆದಿದೆ. ಮೃತರನ್ನು ಉದ್ಯಮಿ ಶಿರ್ವ ನಿವಾಸಿ ಸೈಮನ್ ಡಿಸೋಜ (57) ಎಂದು ಗುರುತಿಸಲಾಗಿದೆ. ಇವರು ಸುಮಾರು 25 ವರ್ಷಗಳ ಕಾಲ ಸೌದಿ ಅರೇಬಿಯಾದಲ್ಲಿ ಸಾಫ್ಟ್‌ ವೇರ್‌ ಉದ್ಯಮಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಬಳಿಕ ಊರಿಗೆ ಆಗಮಿಸಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಅವರು ಸೋಮವಾರ ತಮ್ಮ ಮನೆಯ ಆವರಣದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮಂದಾರ್ತಿ: 19ನೇ ವರ್ಷದ ಸಂಭ್ರಮದಲ್ಲಿ ನ್ಯೂ ಶ್ರೀ ಕಾಳಿಕಾಂಬಾ ಜ್ಯುವೆಲ್ಲರ್ಸ್

ಮಂದಾರ್ತಿ: ಇಲ್ಲಿನ ನ್ಯೂ ಶ್ರೀ ಕಾಳಿಕಾಂಬಾ ಜ್ಯುವೆಲ್ಲರ್ಸ್ ನ 19ನೇ ವಾರ್ಷಿಕೋತ್ಸವದ ಪ್ರಯುಕ್ತ ನಾಳೆ (12) ಗಣಹೋಮ ಮತ್ತು ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಂದಾರ್ತಿ ದುರ್ಗಾಪರಮೇಶ್ವರಿ ವಾಣಿಜ್ಯ ಸಂಕೀರ್ಣದಲ್ಲಿರುವ ನ್ಯೂ ಶ್ರೀ ಕಾಳಿಕಾಂಬಾ ಜ್ಯುವೆಲ್ಲರ್ಸ್ ಆಭರಣ ಮಳಿಗೆಯಲ್ಲಿ ಮಂಗಳವಾರ ಬೆಳಿಗ್ಗೆ 8.30ರಿಂದ ಗಣಹೋಮ ಹಾಗೂ ಪೂಜಾ ಕಾರ್ಯಕ್ರಮಗಳು ನೆರವೇರಲಿದೆ.

ಕೆಪಿಟಿಸಿಎಲ್ ನ 1899 ಹುದ್ದೆಗಳ ಭರ್ತಿಗೆ ಚಾಲನೆ- ಸಚಿವ ಸುನಿಲ್ ಕುಮಾರ್

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಇಂದು ಅದರ ಮೊದಲ ಹಂತವಾಗಿ ಸಾಂಕೇತಿಕವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗುತ್ತಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ದ ಸಭಾಂಗಣದಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡಿ […]

ನದಿಗೆ ಹಾರಿ ಡೆಂಟಲ್ ಕ್ಲಿನಿಕ್ ನ ಉದ್ಯೋಗಿ ಆತ್ಮಹತ್ಯೆ

ವಿಟ್ಲ: ಭಾನುವಾರ ಸಂಜೆಯಿಂದ ನಾಪತ್ತೆಯಾಗಿದ್ದ ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ಅವರ ಪುತ್ರಿ ನಿಶ್ಮಿತಾ(22 ) ಅವರ ಮೃತದೇಹ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪವಿರುವ ಕೆರೆಯಲ್ಲಿ ಇಂದು ಪತ್ತೆಯಾಗಿದೆ. ಈಕೆ ಡೆಂಟಲ್ ಕ್ಲಿನಿಕ್ ವೊಂದರಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ಸಂಜೆಯಿಂದ ಕಾಣೆಯಾಗಿದ್ದಳು. ಇಂದು ಮುಂಜಾನೆ ಕೆರೆಯಲ್ಲಿ ನಿಶ್ಮಿತಾ ಅವರ ಮೃತದೇಹ ಪತ್ತೆಯಾಗಿದೆ. ಡೆತ್ ನೋಟ್ ಮತ್ತು ಮೊಬೈಲ್ ಕೂಡ ಮೃತದೇಹ ದೊರೆತ ಸ್ಥಳದಲ್ಲಿ ಪತ್ತೆಯಾಗಿದ್ದು, ಡೆತ್ ನೋಟ್ ನಲ್ಲಿ ಕೆಲವರ ಹೆಸರು ಉಲ್ಲೇಖಿಸಿದ್ದಾಳೆ […]

ಶಿರ್ವ: ನೀರುಪಾಲಾಗಿದ್ದ ದೈವ ನರ್ತಕನ ಶವ ಪತ್ತೆ

ಶಿರ್ವ: ಇಲ್ಲಿನ ನಡಿಬೆಟ್ಟು ಅಣೆಕಟ್ಟು ಬಳಿ ಮೀನು ಹಿಡಿಯಲು ಹೋಗಿ ಆಕಸ್ಮಿಕವಾಗಿ ಜಾರಿಬಿದ್ದು ನೀರು ಪಾಲಾದ ದೈವ ನರ್ತಕ, ಶಿರ್ವ ಮಟ್ಟಾರು  ನಿವಾಸಿ ದಿಲೀಪ್ (30) ಅವರ ಶವ ಸೋಮವಾರ ಮಧ್ಯಾಹ್ನ ಅಣೆಕಟ್ಟು ಬಳಿ ಪತ್ತೆಯಾಗಿದೆ. ಉಡುಪಿ ಅಗ್ನಿಶಾಮಕ ದಳದ ಠಾಣಾಧಿಕಾರಿ ಸತೀಶ್ ಎನ್. ನೇತೃತ್ವದಲ್ಲಿ ಸತೀಶ್ ಮತ್ತು ಸಿಬ್ಬಂದಿ ಹಾಗೂ ಮಲ್ಪೆಯ ಮುಳುಗುತಜ್ಞ ಈಶ್ವರ್ ಸತತ 4 ಗಂಟೆ ಗಳ ಕಾಲ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ. ಭಾನುವಾರ ರಾತ್ರಿ ಬೆಳಕಿನ ಅಡಚಣೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. […]