ಜ್ಞಾನಸುಧಾ: ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ

ಕಾರ್ಕಳ: ಅಜೆಕಾರ್ ಪದ್ಮ ಗೋಪಾಲ್‌ಎಜ್ಯುಕೇಶನ್ ಟ್ರಸ್ಟ್(ರಿ.), ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಗಳ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎನ್.ಸಿ.ಸಿ. ಘಟಕಗಳು ಹಾಗೂ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ಸಂಯುಕ್ತಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮಂಗಳವಾರ ಜ್ಞಾನಸುಧಾ ಆವರಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಅಜೆಕಾರ್ ಪದ್ಮ ಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಟ್ರಸ್ಟಿ ಶ್ರೀ ಕರುಣಾಕರ ಶೆಟ್ಟಿ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಶಿಬಿರದಲ್ಲಿ ಹೃದಯರೋಗ, ಕಿವಿ, ಮೂಗು, ಗಂಟಲು, ಕಿಡ್ನಿ, ಕಣ್ಣಿನ ಪೊರೆಯ ಉಚಿತ ತಪಾಸಣೆ ಜರುಗಿದ್ದು, […]

ಪ್ರವಾಸೋದ್ಯಮ ನೀತಿಯಲ್ಲಿ ಕರಾವಳಿಗೆ ವಿಶೇಷ ಒತ್ತು: ಸಿಎಂ ಬೊಮ್ಮಾಯಿ

ಉಡುಪಿ: ರಾಜ್ಯ ಸರ್ಕಾರ ರೂಪಿಸುತ್ತಿರುವ ಪ್ರವಾಸೋದ್ಯಮ ನೀತಿಯಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು, ಉಡುಪಿ ಕುಂತಲ ನಗರದಲ್ಲಿ ಇಂದು ಉದ್ಯಮಿಗಳೊಂದಿಗೆ ನಡೆಸಿದ ಚಾಯ್ ಪೆ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಉದ್ಯೋಗ ಆಧಾರಿತ ಪ್ರೋತ್ಸಾಹ ನೀತಿಯನ್ನು ಜಾರಿಗೊಳಿಸಲು ಹಾಗೂ ಯುವ ಉದ್ಯಮಿಗಳಿಗೆ ಉದ್ಯಮ ಸ್ಥಾಪಿಸಲು ಪೂರಕವಾದ ವಾತಾವರಣ ಸೃಷ್ಟಿಸಲಾಗುವುದು ಎಂದರು.

ಕರಾವಳಿ ತೀರದ 500 ಮೀಟರ್ ವ್ಯಾಪ್ತಿಯಲ್ಲಿರುವ ನಿರ್ಬಂಧ ತೆರವಿಗೆ ಕ್ರಮ; ಸಿಎಂ ಬೊಮ್ಮಾಯಿ

ಉಡುಪಿ: ರಾಜ್ಯದ ಕರಾವಳಿ ದಂಡೆಯಿಂದ 500 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ವಾಣಿಜ್ಯ ಮತ್ತು ಆರ್ಥಿಕ ಚಟುವಟಿಕೆಗಳನ್ನು ನಡೆಸದಂತೆ ವಿಧಿಸಲಾಗಿರುವ ನಿರ್ಬಂಧವನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿ ಕುಂತಲ ನಗರದಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘ ಆಯೋಜಿಸಿದ್ದ ಕನ್ವೆನ್ಷನ್ ಸೆಂಟರ್ ಮತ್ತು ತರಬೇತಿ ಕೇಂದ್ರ ಕೇಂದ್ರವನ್ನು ಇಂದು ಉದ್ಘಾಟಿಸಿ, ಬಳಿಕ ಉದ್ಯಮಿಗಳೊಂದಿಗೆ ನಡೆಸಿದ ಚಾಯ್ ಪೆ ಚರ್ಚಾ ಕಾರ್ಯಕ್ರಮದಲ್ಲಿ ಈ ವಿಷಯ ತಿಳಿಸಿದರು. ನಮ್ಮ ಪಕ್ಕದ ರಾಜ್ಯಗಳಾದ ಕೇರಳ ಮತ್ತು ಗೋವಾದಲ್ಲಿ ಕರಾವಳಿ […]

ಇಂಡಿಯನ್ ಆಯಿಲ್ ಕಾರ್ಪೊರೇಶನ್‌: 469 ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮುಂಬೈ: ಇಂಡಿಯನ್ ಆಯಿಲ್ ಕಾರ್ಪೊರೇಶನ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ 469 ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಟ್ರೇಡ್‌ ಅಪ್ರೆಂಟಿಸ್‌ಗಳ ಸಂಖ್ಯೆ: 469 ಟ್ರೇಡ್‌ಗಳು: ಫಿಟ್ಟರ್‌, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್, ಮೆಕಾನಿಕ್‌, ಇನ್‌ಸ್ಟ್ರೂಮೆಂಟ್ ಮೆಕಾನಿಕ್‌, ಮೆಕಾನಿಸ್ಟ್ ಟ್ರೇಡ್‌ ವಿದ್ಯಾರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ, ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ: ಅಕ್ಟೋಬರ್‌  2021ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 28 ವರ್ಷ ವಯಸ್ಸಾಗಿರಬೇಕು. ಅರ್ಜಿ ಶುಲ್ಕ: ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ನೇಮಕಾತಿ: ಕೌಶಲ್ಯ ಅಥವಾ ಲಿಖಿತ ಪರೀಕ್ಷೆ […]

ಉಡುಪಿ: ಅಂತರ್ ಜಿಲ್ಲಾ ಕಳ್ಳನ ಬಂಧನ; ₹4.33 ಲಕ್ಷ ನಗದು, ಎರಡು ಬೈಕ್ ವಶ

ಉಡುಪಿ: ನಗರದ ಮಂಜುನಾಥ ಕಣ್ಣಿನ ಆಸ್ಪತ್ರೆಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಭೇದಿಸಿದ ಉಡುಪಿ ನಗರ ಠಾಣಾ ಪೊಲೀಸರು ಓರ್ವ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಕಳ ತಾಲೂಕಿನ ಸುರೇಶ್‌ ಪೂಜಾರಿ ಬಂಧಿತ ಆರೋಪಿ. ಈತನನ್ನು ಉಡುಪಿ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ಬಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಒಟ್ಟು ₹4.33 ಲಕ್ಷ ನಗದು, ಎರಡು ಬೈಕ್, ಎರಡು ಮೊಬೈಲ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಏನಿದು ಪ್ರಕರಣ: ಇತ್ತೀಚೆಗೆ ಉಡುಪಿ ನಗರದ ಮಂಜುನಾಥ ಕಣ್ಣಿನ ಆಸ್ಪತ್ರೆಯ ಶೆಟರ್‌ನ ಬೀಗ […]