ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಪಡಿತರ ಸ್ಥಗಿತ: ಸಚಿವ ಮಾಧುಸ್ವಾಮಿ

ಬೆಂಗಳೂರು: ಕೋವಿಡ್ ಸೋಂಕನ್ನು ನಿಯಂತ್ರಿಸಲು ಲಸಿಕೆ ಹಾಕಿಸಿಕೊಳ್ಳುವುದು ಅನಿವಾರ್ಯವಾಗಿದೆ. ಈಗ ಎಲ್ಲ ಕಡೆ ಲಸಿಕೆ ಲಭ್ಯವಿದೆ. ಆದರೂ ಪಡೆದುಕೊಳ್ಳಲು ಮುಂದೆ ಬರುತ್ತಿಲ್ಲ. ಹೀಗಾಗಿ ಲಸಿಕೆ ಹಾಕಿಸಿಕೊಳ್ಳದವರಿಗೆ ಪಡಿತರ ನೀಡುವುದನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದೇವೆ ಎಂದು ಕಾನೂನು ಸಚಿವ ಜೆ.ಸಿ‌. ಮಾಧುಸ್ವಾಮಿ ಹೇಳಿದ್ದಾರೆ. ಕೊರೊನಾ ಸೋಂಕು ಯಾವ ಸಮಯದಲ್ಲಿ ಬೇಕಾದರೂ ಹೆಚ್ಚಾಗಬಹುದು. ಹೀಗಾಗಿ ಕೊರೊನಾ ನಿಯಂತ್ರಿಸಲು ಈಗಿನಿಂದಲೇ ಕ್ರಮ ಕೈಗೊಳ್ಳದಿದ್ದರೆ ಮಂದೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದಿದ್ದಾರೆ.

ಕೋವಿಡ್ ಹೆಚ್ಚಳ: ಮನೆಯ ಒಳಗೂ ಇಡೀ ದಿನ ಮಾಸ್ಕ್ ಧರಿಸಲು ಸೂಚನೆ

ಐಜ್ವಾಲ್: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಮನೆಯ ಒಳಗೂ ಇಡೀ ದಿನ, ಪ್ರತಿ ದಿನ (24/7) ಮಾಸ್ಕ್ ಧರಿಸುವಂತೆ ಸೂಚಿಸಿದೆ. ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮಕೈಗೊಂಡಿದ್ದು, ಮನೆ ಮಂದಿಯೆಲ್ಲ ಜತೆಯಾಗಿ ಕುಳಿತುಕೊಂಡು ಊಟ ಮಾಡದಂತೆಯೂ ಸಲಹೆ ನೀಡಿದೆ. ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಕೋವಿಡ್ ಪಾಸಿಟಿವಿಟಿ ದರ ಶೇ 15ರಿಂದ 30ರ ನಡುವೆ ಇರುವ ಕಾರಣ ಸರ್ಕಾರ ಈ ಕ್ರಮಗಳನ್ನು ಕೈಗೊಂಡಿದೆ. ಊಟ ಮಾಡುವ ಸಮಯ ಹೊರತುಪಡಿಸಿ ಮತ್ತೆಲ್ಲಾ ಸಂದರ್ಭದಲ್ಲಿಯೂ […]

ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಮುಂದಿನ ಐದು ದಿನ ಧಾರಾಕಾರ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅ.13 ರಿಂದ 15ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿ ಗಾಳಿ ಹಾಗೂ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಆರೆಂಜ್ ಅಲರ್ಟ್‌?: ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ […]