ರವೀಂದ್ರ ಶೆಟ್ಟಿ ಬಜಗೋಳಿ ಅವರಿಗೆ ಹುಟ್ಟೂರ ಅಭಿನಂದನೆ

ಕಾರ್ಕಳ: ಕರ್ನಾಟಕ ರಾಜ್ಯ ಫೆಡರೇಶನ್‌ ಆಫ್‌ ಕ್ವಾರಿ ಮತ್ತು ಸ್ಟೋನ್‌ ಕ್ರಷರ್‌ ಓನರ್ಸ್‌ ಅಸೋಸಿಯೇಷನ್‌ ಇದರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ರವೀಂದ್ರ ಶೆಟ್ಟಿ ಬಜಗೋಳಿ ಅವರಿಗೆ ಬಜಗೋಳಿ ದಿಡಿಂಬಿರಿ ಶ್ರೀ ಗಣಪತಿ ಸಭಾಭವನದಲ್ಲಿ ಹುಟ್ಟೂರ ಅಭಿನಂದನಾ ಸಮಾರಂಭ ನಡೆಯಿತು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌ ಅವರು ರವೀಂದ್ರ ಶೆಟ್ಟಿ ಅವರನ್ನು ಊರವರ ಪರವಾಗಿ ಅಭಿನಂದಿಸಿದರು. ಬಳಿಕ ಮಾತನಾಡಿ, ರವೀಂದ್ರ ಶೆಟ್ಟಿ ಹತ್ತಾರು ರೀತಿಯ ಸವಾಲು, ಎಡರು ತೊಡರುಗಳನ್ನು ಮೀರಿ ಬೆಳೆದ ವ್ಯಕ್ತಿ.‌ […]

ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ

ನವದೆಹಲಿ: ಜಾತಿ ನಿಂದನೆ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ಯುವರಾಜ್ ಟೀಮ್ ಇಂಡಿಯಾದ ಆಟಗಾರ ರೋಹಿತ್‌ ಶರ್ಮಾ ಜೊತೆಗೆ ಲೈವ್‌ ಚಾಟ್‌ನಲ್ಲಿ ಭಾಗವಹಿಸಿದ್ದರು. ಈ ವೇಳೆ ಯುವರಾಜ್‌, ತಮ್ಮ ಸಂಭಾಷಣೆ ವೇಳೆ ಯಜುವೇಂದ್ರ ಚಹಲ್‌ ಮತ್ತು ಕುಲ್ದೀಪ್‌ ಯಾದವ್ ಬಗ್ಗೆ ಜಾತಿ ಸೂಚಕ ಪದ ಬಳಸಿದ್ದರು ಎಂದು ಆರೋಪಿಸಲಾಗಿದೆ. ಸಂವಾದದಲ್ಲಿ ಪರಿಶಿಷ್ಟ ಜಾತಿ ಬಗ್ಗೆ ಯುವಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಹಂಸಿ […]