ಸೌತ್‌ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ ಮಹಾಸಭೆ

ಉಡುಪಿ: ವ್ಯಕ್ತಿಯ ವ್ಯಕ್ತಿತ್ವ, ಸಮಾಜವನ್ನು ಕೇವಲ ಒಂದು ಚಿತ್ರದ ಮೂಲಕ ಬಿಂಬಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಛಾಯಾಚಿತ್ರ ಗ್ರಾಹಕರು ಸಮಾಜದ ದೃಷ್ಠಿಕೋನವನ್ನು ಅರ್ಥೈಸಿಕೊಂಡು ಧನಾತ್ಮಕ ಚಿತ್ರ ತೆಗೆಯಲು ಪ್ರಯತ್ನಿಸಬೇಕು ಎಂದು ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ. ವಿಜಯ ಬಲ್ಲಾಳ್‌ ಹೇಳಿದರು. ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿ ಯೇಶನ್‌ ಸಹಯೋಗದಲ್ಲಿ ಭಾನುವಾರ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಿದ್ದ 31ನೇ ವಾರ್ಷಿಕ ಮಹಾಸಭೆಯನ್ನು ಉದ್ಭಾಟಿಸಿ ಮಾತನಾಡಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ […]

ಮಣಿಪಾಲ: ಯುವತಿ ನಾಪತ್ತೆ

ಮಣಿಪಾಲ: ಮಣಿಪಾಲ ಶಿವಳ್ಳಿ ಗ್ರಾಮದ ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ಮಣಿಪಾಲ ಶಿವಳ್ಳಿ ಗ್ರಾಮದ ನಿಶಾ ಡಿ. ಎಸ್ (21) ಕಾಣೆಯಾಗಿದ್ದು, ಈಕೆ ಅ. 11ರ ರಾತ್ರಿ 7.50ರ ವೇಳೆಗೆ ಉಡುಪಿ ಪಿಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದಳು. ಆದರೆ ನಿಶಾ ಪಿಜಿಗೂ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿದ್ದಾಳೆ. ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನಕಲಿ ಅಂಕಪಟ್ಟಿ: ಬಿಜೆಪಿ ಶಾಸಕನಿಗೆ ಶಿಕ್ಷೆ

ಅಯೋಧ್ಯೆ: ಕಾಲೇಜಿಗೆ ಪ್ರವೇಶ ಪಡೆಯಲು ನಕಲಿ ಅಂಕಪಟ್ಟಿ ನೀಡಿದ್ದ 28 ವರ್ಷಗಳ ಹಿಂದಿನ ಪ್ರಕರಣದಲ್ಲಿ ಅಯೋಧ್ಯೆಯ ಗೋಸಾಯ್‌ಗಂಜ್‌ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ತಿವಾರಿಗೆ ಸೋಮವಾರ ವಿಶೇಷ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇಂದ್ರ ಪ್ರತಾಪ್ ತಿವಾರಿ ಅಲಿಯಾಸ್ ಖಬ್ಬು ತಿವಾರಿ ಅಯೋಧ್ಯೆಯ ಗೋಸಾಯ್‌ಗಂಜ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ. ‌1992 ರಲ್ಲಿ ತಿವಾರಿ ವಿರುದ್ಧ ಅಯೋಧ್ಯೆಯ ಸಾಕೇತ್ ಪದವಿ ಕಾಲೇಜಿನ ಅಂದಿನ ಪ್ರಾಂಶುಪಾಲ ಯದುವಂಶ ರಾಮ್ ತ್ರಿಪಾಠಿ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ […]

ದೇವಳಗುಜ್ಜಿ ನವೋದಯ ಗೆಳೆಯರ ಬಳಗ: ಅಧ್ಯಕ್ಷರಾಗಿ ಸಂತೋಷ್ ಪೂಜಾರಿ ಆಯ್ಕೆ

ಮಣಿಪುರ: ನವೋದಯ ಗೆಳೆಯರ ಬಳಗ, ದೇವಳಗುಜ್ಜಿ ಇದರ 2021-22ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಂತೋಷ್ ಪೂಜಾರಿ ಅವರು ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಸಂಘದ ಮಹಾಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. ಇತರ ಪದಾಧಿಕಾರಿಗಳು: ಗೌರವಾಧ್ಯಕ್ಷ – ದೇವೇಂದ್ರ ಶೆಟ್ಟಿ, ಉಪಾಧ್ಯಕ್ಷ- ಜೀವನ್ ಭಂಡಾರಿ, ಕಾರ್ಯದರ್ಶಿ- ಪೂರ್ಣೇಶ್ ಪೂಜಾರಿ, ಜೊತೆ ಕಾರ್ಯದರ್ಶಿ- ಲತಾ, ಕೋಶಾಧಿಕಾರಿ ರಮಣಿ, ಲೆಕ್ಕಾ ಪರಿಶೋಧಕ- ಅಶೋಕ್ ಆಚಾರ್ಯ, ಸಂಘಟನಾ ಕಾರ್ಯದರ್ಶಿ – ಸದಾಶಿವ ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿ- ರಕ್ಷಿತ್ ಸಾಲ್ಯಾನ್, ಕ್ರೀಡಾ ಕಾರ್ಯದರ್ಶಿ- ಸಂತೋಷ್ ಆಚಾರ್, […]

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಖ್ಯಾತ ವಕೀಲನ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಇಂಟರ್ನ್‌ಶಿಪ್‌ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ಖ್ಯಾತ ವಕೀಲ K.S.N.ರಾಜೇಶ್ ಭಟ್ ವಿರುದ್ಧ ಕೇಸ್ ದಾಖಲಾಗಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಎಲ್ಎಲ್‌ಬಿ ವಿದ್ಯಾರ್ಥಿನಿ ದೂರು ಆಧರಿಸಿ ನಿನ್ನೆ ರಾತ್ರಿ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿಯು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ವಕೀಲರ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ಬಯಲಾಗುತ್ತಿದ್ದಂತೆ ವಕೀಲ ರಾಜೇಶ್ ಭಟ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಮಂಗಳೂರು ಎಸಿಬಿ, ಲೋಕಾಯುಕ್ತಕ್ಕೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ರಾಜೇಶ್ ಭಟ್, […]