ಮುಂಬೈನಲ್ಲಿ ರಸ್ತೆ ಅಪಘಾತ: ಉಡುಪಿ ಮೂಲದ ಯುವಕ ಮೃತ್ಯು
ಮುಂಬೈ: ಇಲ್ಲಿನ ಚೆಂಬೂರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕೊಳಲಗಿರಿ ಮೂಲದ ರೋಶನ್ ಡಿ ಸೋಜಾ(33) ಮೃತಪಟ್ಟಿದ್ದಾರೆ. ರೋಶನ್, ಏಳು ವರ್ಷಗಳಿಂದ ಮುಂಬೈನ ಶಿಪ್ ಯಾರ್ಡ್‌ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು ಕೆಲಸ ಮುಗಿಸಿ ಮನೆಗೆ ತನ್ನ ಬೈಕಿನಲ್ಲಿ ಬರುತ್ತಿದ್ದ ವೇಳೆ ಹಿಂಬದಿಯಿಂದ ಟ್ರಕ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರ ಮೃತದೇಹವನ್ನು ಮುಂಬೈನಿಂದ ಊರಿಗೆ ತರಲಾಗುತ್ತಿದೆ. ಅ.23ರ ಸಂಜೆ […]
ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಎರಡು ದಿನ ಭಾರಿ ಮಳೆ
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅ.23 ಮತ್ತು 24ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮುಂಗಾರು ಮಾರುತಗಳ ಪ್ರಭಾವ ತಗ್ಗಲಿದ್ದು, ಅ.26ರಿಂದ ಹಿಂಗಾರು ಪ್ರವೇಶಿಸುವ ಲಕ್ಷಣಗಳು ಕಂಡುಬಂದಿವೆ. ಆದರೆ, ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಇಲಾಖೆ ಮಾಹಿತಿ ನೀಡಿದೆ. ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು […]
ನೇಕಾರರ ಉತ್ಪಾದಕ ಕಂಪೆನಿ ರಚಿಸುವ ಕುರಿತು ಪೂರ್ವಭಾವಿ ಸಭೆ
ಕಿನ್ನಿಗೋಳಿ: ನೇಕಾರರ ಉತ್ಪಾದಕ ಕಂಪನಿಯನ್ನು ( weavers OFPO ) ರಚಿಸುವ ವಿಚಾರದಲ್ಲಿ ರಾಜ್ಯ ಕೈಮಗ್ಗ ಇಲಾಖೆ ನೀಡಿರುವ ನಿರ್ದೇಶನದ ಕುರಿತು ಚರ್ಚಿಸಲು ಸಹಾಯಕ ನಿರ್ದೇಶಕರು, ಕೈ ಮಗ್ಗ ಮತ್ತು ಜವಳಿ ಇಲಾಖೆ ಉಡುಪಿ ಮತ್ತು ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಪೂರ್ವಭಾವಿ ಸಭೆ ಕಿನ್ನಿಗೋಳಿಯ ತಾಳಿಪಾಡಿ ನೇಕಾರ ಸಂಘದಲ್ಲಿ ನಡೆಯಿತು. ಉಡುಪಿ ಜಿಲ್ಲಾ ಕೈಮಗ್ಗ ಸಹಾಯಕ ನಿರ್ದೇಶಕ ಅಶೋಕ್ ಪ್ರಸ್ತಾವನೆ ಮಾಡಿ ನೇಕಾರರ ಉತ್ಪಾದಕ ಕಂಪನಿಯನ್ನು ರಚಿಸಲು ಇಲಾಖೆಯಿಂದ ಬಂದಿರುವ ನಿರ್ದೇಶನದ ಕುರಿತು ತಿಳಿಸಿದರು. ಕದಿಕೆ […]