ಚೀನಾದಲ್ಲಿ ಮತ್ತೆ ಕೊರೊನಾ ಉಲ್ಬಣ: ಲಾಂಝೌ ನಗರ ಲಾಕ್​ಡೌನ್​

ಚೀನಾದಲ್ಲಿ ಮತ್ತೆ ಕೊರೊನಾ ಸೋಂಕಿನ(Corona Virus) ತೀವ್ರತೆ ಮತ್ತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಸುಮಾರು 4 ಮಿಲಿಯನ್​ ಜನಸಂಖ್ಯೆ ಇರುವ ಲಾಂಝೌ ನಗರವನ್ನು ಲಾಕ್​ಡೌನ್​ ಮಾಡಲಾಗಿದೆ. ಚೀನಾದಲ್ಲಿ ಕೊರೊನಾದಿಂದ ಮತ್ತೆ 29 ಮಂದಿ ಸಾವನ್ನಪ್ಪಿದ್ದರೆಂದು ವರದಿಯಾದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಚೀನಾದಲ್ಲಿ ಕಳೆದ ಒಂದೇ ವಾರದಲ್ಲಿ 11ಕ್ಕೂ ಹೆಚ್ಚು ಪ್ರಾಂತ್ಯಗಳಲ್ಲಿ 100ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಅದರ ಬೆನ್ನಲ್ಲೇ ದೇಶದ ವಿವಿಧ ಭಾಗಗಳಲ್ಲಿ ಲಾಕ್​ಡೌನ್​ ಜಾರಿಯಾಗುತ್ತಿದೆ. ಅಕ್ಟೋಬರ್​ 17ರಿಂದ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ. […]

ಉಡುಪಿ: ಗದ್ದೆಯಲ್ಲಿ ಬಿದ್ದು ಅಸ್ವಸ್ಥಗೊಂಡಿದ್ದ ಯುವಕನ ರಕ್ಷಣೆ; ಗುರುತು ಪತ್ತೆ

ಉಡುಪಿ: ಪುತ್ತೂರು ಇಲ್ಲಿಯ ಬಾಳಿಗ ಪಿಶ್ ನಟ್ ಬಳಿ, ಅಸ್ವಸ್ಥಗೊಂಡು ಗದ್ದೆಯಲ್ಲಿ ಬಿದ್ದ ಅಪರಿಚಿತ ಯುವಕನನ್ನು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ ಘಟನೆ ಬುಧವಾರ ನಡೆದಿದೆ. ಯುವಕನು ರಾತ್ರಿ ಸಮಯದಲ್ಲಿ ನಡೆದುಕೊಂಡು ಹೋಗುವಾಗ ಅಸ್ವಸ್ಥಗೊಂಡು, ಕೆಸರು ಗದ್ದೆಯಲ್ಲಿ ಬಿದ್ದಿದ್ದು, ಬೆಳಗಿನ ಸಮಯದಲ್ಲಿ ಸ್ಥಳಿಯರ ಮೂಲಕ ವಿಷಯ ಗೊತ್ತಾಗಿದೆ. ಈ ಬಗ್ಗೆ ಸ್ಥಳಿಯ ನಗರಸಭೆ ಸದಸ್ಯೆ ಜಯಂತಿ ಕೆ ಪೂಜಾರಿ ಅವರು, ಸಮಾಜಸೇವಕರಿಗೆ ವಿಷಯ ಮುಟ್ಟಿಸಿದ್ದರು. ತಕ್ಷಣ ಸ್ಪಂದಿಸಿದ […]

ಗರಿಷ್ಠಮಟ್ಟ ತಲುಪಿದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ; ಇಂದಿನ ದರ ಹೀಗಿದೆ

ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಬುಧವಾರ ಮತ್ತೆ ಪ್ರತಿ ಲೀಟರ್‌ಗೆ 35 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ಇಂಧನ ದರ ಈವರೆಗಿನ ಗರಿಷ್ಠಮಟ್ಟ ತಲುಪಿದೆ. ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹107.94 ಆಗಿದ್ದು, ಡೀಸೆಲ್ ದರ ₹96.67ಕ್ಕೆ ತಲುಪಿದೆ. ಮುಂಬೈಯಲ್ಲಿ ಪೆಟ್ರೋಲ್ ಬೆಲೆ ₹113.80 ಹಾಗೂ ಡೀಸೆಲ್ ಬೆಲೆ ₹104.75 ಆಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹111.70 ಆಗಿದ್ದು, ಡೀಸೆಲ್ ದರ ₹102.60 ಆಗಿದೆ. ಕೋಲ್ಕತ್ತದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹108.45 ಹಾಗೂ […]

ನ.1ರಿಂದ ಮನೆ ಬಾಗಿಲಿಗೆ ಪಡಿತರ..!!

ಬೆಂಗಳೂರು: ಆಂಧ್ರಪ್ರದೇಶದ ಮಾದರಿಯಲ್ಲಿ ಪಡಿತರ ಚೀಟಿದಾರರಿಗೆ ಮನೆ ಬಾಗಿಲಿಗೆ ಪಡಿತರ ತಲುಪಿಸುವ ಯೋಜನೆಯನ್ನು ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮುಂದಾಗಿದೆ. ನವೆಂಬರ್‌ 1ರಂದು ಯೋಜನೆಗೆ ಚಾಲನೆ ನೀಡುವ ಸಾಧ್ಯತೆ ಇದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಪ್ರತಿ ನ್ಯಾಯಬೆಲೆ ಅಂಗಡಿ ಜತೆಗೆ ಒಂದು ವಾಹನವನ್ನು ಜೋಡಣೆ ಮಾಡುವ ಪ್ರಸ್ತಾವವಿದೆ. ಇದಕ್ಕಾಗಿ 700 ವಾಹನಗಳ ಅಗತ್ಯವಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳ ಜತೆ […]

ಅ. 30ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಐದು ದಿನಗಳವರೆಗೆ ಮಳೆಯಾಗುವ ಸೂಚನೆ ಇತ್ತು. ಅದರ ಪ್ರಭಾವ ತಗ್ಗಿರುವುದರಿಂದ ಮಳೆ ದಿಢೀರ್ ತಗ್ಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೆ, ಅ.29ರಿಂದ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಚಾಮರಾಜನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ […]