ಆಗುಂಬೆ ಘಾಟಿಯಲ್ಲಿ ಲಾರಿ ಪಲ್ಟಿ; ನಾಲ್ವರು ಮೃತ್ಯು, ಐವರ ಸ್ಥಿತಿ ಗಂಭೀರ

ಹೆಬ್ರಿ: ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಈಚರ್ ಲಾರಿಯೊಂದು ಪಲ್ಟಿಯಾಗಿ ನಾಲ್ವರು ಮೃತಪಟ್ಟಿದ್ದು, ಐದು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಸಂಭವಿಸಿದೆ. ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಈಚರ್ ಲಾರಿ ಘಾಟಿ ರಸ್ತೆಯ 5ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಇದರಿಂದ ನಾಲ್ವರು ಮೃತಪಟ್ಟಿದ್ದು, ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟ ನಾಲ್ವರು ಕಾರ್ಕಳ ತಾಲೂಕಿನ ಮಿಯ್ಯಾರು ಮೂಲದವರು ಎಂದು ತಿಳಿದುಬಂದಿದೆ. ಸ್ಥಳಕ್ಕಾಗಮಿಸಿದ ಹೆಬ್ರಿ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ‘ಅಪ್ಪು’ ಖ್ಯಾತಿಯ ಪವರ್ ಸ್ಟಾರ್  ಪುನೀತ್ ರಾಜ್‌ಕುಮಾರ್ (46) ಇಂದು ಹೃದಯಾಘಾತದಿಂದ ನಿಧನ ಹೊಂದಿದರು. ಇಂದು (ಅ.29) ಬೆಳಿಗ್ಗೆ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಬಳಿಕ ಅಲ್ಲೇ ಕುಸಿದು ಬಿದ್ದಿದ್ದರು. ನಂತರ ಅವರನ್ನು ರಮಣಶ್ರೀ ಕ್ಲಿನಿಕ್‌ಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ವಿಷಯ ತಿಳಿದ ಕೂಡಲೇ ಪುನೀತ್‌ರನ್ನು  ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪುನೀತ್ ಅವರಿಗೆ ತಜ್ಞ ವೈದ್ಯರ ತಂಡ ತೀವ್ರ ನಿಗಾ ಘಟಕದಲ್ಲಿ […]

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು. ಪುನೀತ್ ಇಂದು ಬೆಳಿಗ್ಗೆ ಜಿಮ್ ನಲ್ಲಿ‌ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಸ್ಥಳೀಯ ರಮಣೀ ಆಸ್ಪತ್ರೆಗೆ ದಾಖಲಾಗಿಸಿತ್ತು. ಅಲ್ಲಿಂದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪುನೀತ್ ಇಹಲೋಕ ತ್ಯಜಿಸಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ‌ ತೀರ ಗಂಭೀರ: ವಿಕ್ರಮ್ ಆಸ್ಪತ್ರೆ ಎದುರು ಜನಸ್ತೋಮ

ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಅವರ ಕ್ಷಣದಿಂದ ಕ್ಷಣಕ್ಕೆ ಕ್ಷೀಣಿಸುತ್ತಿದೆ. ಚಿಕಿತ್ಸೆ ನೀಡುತ್ತಿರುವ ವಿಕ್ರಮ್ ಆಸ್ಪತ್ರೆ ಎದುರು ಜನಸ್ತೋಮ ಸೇರಿದೆ. ಇಂದು ಬೆಳಿಗ್ಗೆ ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್‍ಕುಮಾರ್ ಕುಸಿದು ಬಿದ್ದಿದ್ದರು. ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ವಿಕ್ರಮ್ ಆಸ್ಪತ್ರೆಗೆ ಕರೆತರಲಾಗಿದೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಆರೋಗ್ಯ ಸ್ಥಿತಿ ತೀರ ಗಂಭೀರವಾಗಿದೆ. ಅವರ ಆರೋಗ್ಯದ ಬಗ್ಗೆ ಒಂದು ಗಂಟೆ ಬಳಿಕ ನಿಖರ ಮಾಹಿತಿ ನೀಡಲಾಗುವುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಅವರ […]

ಪವರ್ ಸ್ಟಾರ್  ಪುನೀತ್ ರಾಜ್​​ಕುಮಾರ್ ಗೆ ಭಾರೀ ಹೃದಯಾಘಾತ: ಆರೋಗ್ಯ ಸ್ಥಿತಿ ಚಿಂತಾಜನಕ

ಬೆಂಗಳೂರು: ಪವರ್ ಸ್ಟಾರ್  ಪುನೀತ್ ರಾಜ್​​ಕುಮಾರ್ ಅವರಿಗೆ ಭಾರೀ ಹೃದಯಾಘಾತ ಸಂಭವಿಸಿದ್ದು, ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಪುನೀತ್ ಆರೋಗ್ಯ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಬೆಳಿಗ್ಗೆ ಪುನೀತ್ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಅಲ್ಲೇ ಕುಸಿದು ಬಿದ್ದಿದ್ದರು. ಈ  ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಪುನೀತ್ ಜೀವಣ್ಮರಣ ಹೋರಾಟದಲ್ಲಿದ್ದಾರೆ ಎಂದು ತಿಳಿದುಬಂದಿದೆ.