ನಟ ಪುನೀತ್ ರಾಜ್ ಕುಮಾರ್ ಗೆ ಭಾರೀ ಹೃದಯಾಘಾತ: ಆರೋಗ್ಯ ಸ್ಥಿತಿ‌ ಚಿಂತಾಜನಕ

ಬೆಂಗಳೂರು: ಪವರ್ ಸ್ಟಾರ್  ಪುನೀತ್ ರಾಜ್​​ಕುಮಾರ್ ಅವರಿಗೆ ಭಾರೀ ಹೃದಯಾಘಾತ ಸಂಭವಿಸಿದ್ದು, ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಪುನೀತ್ ಆರೋಗ್ಯ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಬೆಳಿಗ್ಗೆ ಪುನೀತ್ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಈ  ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಪುನೀತ್ ಜೀವಣ್ಮರಣ ಹೋರಾಟದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ನಟ ಪುನೀತ್ ರಾಜ್​​ಕುಮಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಟ ಪುನೀತ್ ರಾಜ್​​ಕುಮಾರ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ವಿಕ್ರಂ ಆಸ್ಪತ್ರೆಯ ಪ್ರಮುಖ ವೈದ್ಯರು ಪುನೀತ್ ರಾಜ್​​ಕುಮಾರ್ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ಇಂದು ಬೆಳಗ್ಗೆ ವೇಳೆಗೆ ಹಠಾತ್ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ಮೊನ್ನೆಯಷ್ಟೇ ಪುನೀತ್, ಡಾ.ಶಿವರಾಜ್​ಕುಮಾರ್ ಅಭಿನಯದ ಭಜರಂಗಿ ಚಿತ್ರದ ಪ್ರಮೋಷನ್​​ನಲ್ಲಿ ಬ್ಯುಸಿ ಆಗಿದ್ದರು.

ಮಂದಾರ್ತಿ ನ್ಯೂ ಶ್ರೀ ಕಾಳಿಕಾಂಬಾ ಜ್ಯುವೆಲ್ಲರ್ಸ್; ದೀಪಾವಳಿ ಪ್ರಯುಕ್ತ ಆಭರಣಗಳ ಮೇಲೆ ವಿಶೇಷ ರಿಯಾಯಿತಿ

ಮಂದಾರ್ತಿ: ಮಂದಾರ್ತಿ ದುರ್ಗಾಪರಮೇಶ್ವರಿ ವಾಣಿಜ್ಯ ಸಂಕೀರ್ಣದಲ್ಲಿ ಇರುವ ನ್ಯೂ ಶ್ರೀ ಕಾಳಿಕಾಂಬಾ ಜ್ಯುವೆಲ್ಲರ್ಸ್ ಆಭರಣ ಮಳಿಗೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಭರಣಗಳ ಮೇಲೆ ವಿಶೇಷ ಆಫರ್ ಘೋಷಿಸಲಾಗಿದೆ.

ಫೇಸ್‌ಬುಕ್‌ನ ಮಾತೃಸಂಸ್ಥೆಯ ಹೆಸರು ಬದಲಾವಣೆ..!

ವಾಷಿಂಗ್ಟನ್‌: ಫೇಸ್‌ಬುಕ್‌ನ ಮಾತೃಸಂಸ್ಥೆಯ ಹೆಸರು ‘ಮೆಟಾ’ ಎಂದು ಬದಲಾಗಲಿದೆ. ಫೇಸ್‌ಬುಕ್ ತನ್ನ ಹೆಸರನ್ನು ಸಾಮಾಜಿಕ ಮಾಧ್ಯಮದಿಂದ ದೂರವಿಟ್ಟು ‘ಮೆಟಾವರ್ಸ್’ ಅನ್ನು ಅಭಿವೃದ್ಧಿಪಡಿಸುವ ಕಡೆಗೆ ಗಮನಹರಿಸುವ ನಿಟ್ಟಿನಲ್ಲಿ ಹೆಸರನ್ನು ಬದಲಾಯಿಸಲಾಗಿದೆ ಎನ್ನಲಾಗಿದೆ. ಫೇಸ್‌ಬುಕ್‌ ಜಾಲತಾಣದ ಮುಖ್ಯಸ್ಥ ಮಾರ್ಕ್‌ ಜ್ಯುಕರ್‌ಬರ್ಗ್‌ ಈ ವಿಷಯ ಪ್ರಕಟಿಸಿದ್ದು, ‘ಮೆಟಾ’ ಸಾಮಾಜಿಕ ಜಾಲತಾಣವನ್ನು ಇನ್ನೊಂದು ಹಂತಕ್ಕೆ ಒಯ್ಯಲಿದೆ ಎಂದು ಹೇಳಿದ್ದಾರೆ. ಸಾಮಾಜಿಕ ವಿಷಯಗಳ ಜೊತೆಗಿನ ಜಂಜಾಟಗಳಿಂದ ಸಾಕಷ್ಟು ಕಲಿತಿದ್ದೇವೆ. ನಾವು ಕಲಿತಿದ್ದು ಹೊಸ ಅಧ್ಯಾಯ ರೂಪಿಸಲು ನೆರವಾಗಲಿದೆ ಎಂದು ಅವರು ಡೆವಲಪರ್‌ಗಳ ವಾರ್ಷಿಕ ಸಮ್ಮೇಳನದಲ್ಲಿ […]

ದೇಶದಾದ್ಯಂತ ಶುಕ್ರವಾರವೂ ಏರಿಕೆ ಕಂಡ ಪೆಟ್ರೋಲ್‌ ಮತ್ತು ಡೀಸೆಲ್‌ ದರ..!

ಮುಂಬೈ: ದೇಶದಾದ್ಯಂತ ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ಇಂದು ಕೂಡ ಹೆಚ್ಚಳವಾಗಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್‌ ಮಾಡಿದೆ. ದೆಹಲಿಯಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ತಲಾ 35 ಪೈಸೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್‌ಗೆ ಕ್ರಮವಾಗಿ ₹108.64 ಮತ್ತು ₹97.37 ಮುಟ್ಟಿದೆ. ಮುಂಬೈನಲ್ಲಿ ಪೆಟ್ರೋಲ್‌ ₹112.44 ಮತ್ತು ಡೀಸೆಲ್‌ ₹103.26ಕ್ಕೆ ಏರಿಕೆಯಾಗಿದೆ. ಕೋಲ್ಕತ್ತದಲ್ಲಿ ಪೆಟ್ರೋಲ್‌ ₹107.12, ಡೀಸೆಲ್‌ ₹98ಕ್ಕೆ ತಲುಪಿದೆ. ಚೆನ್ನೈನಲ್ಲಿ ಪೆಟ್ರೋಲ್‌ ₹103.26 ಮತ್ತು ಡೀಸೆಲ್‌ ₹99.68ಕ್ಕೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲಿ ಪೆಟ್ರೋಲ್‌ ₹ 112.39 ಮತ್ತು ಡೀಸೆಲ್‌ […]