ಸತತ ಆರನೇ ದಿನವು ತೈಲ ಬೆಲೆ ಏರಿಕೆ: ಇಂದಿನ ಪೆಟ್ರೋಲ್, ಡಿಸೇಲ್ ದರ ಹೀಗಿದೆ
ಬೆಂಗಳೂರು: ಸತತ ಆರು ದಿನವು ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಏರಿಕೆ ಆಗಿದೆ. ಇದರಿಂದ ವಾಹನ ಸವಾರರು ಮತ್ತಷ್ಟು ಕಂಗಾಲಾಗಿದ್ದಾರೆ. ಬೆಲೆ ಏರಿಕೆಯ ಹೊಡೆತಕ್ಕೆ ಜನರ ಬದುಕು ತತ್ತರಿಸಿದೆ. ಇಂದು (ನ.1) ಕೂಡ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ತಲಾ 35 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ 113 ರೂಪಾಯಿ 45ಕ್ಕೆ ಏರಿಕೆಯಾಗಿದ್ದರೆ. ಲೀಟರ್ ಡೀಸೆಲ್ ದರ 104 ರೂಪಾಯಿ 44 ಪೈಸೆಗೆ ಏರಿಕೆಯಾಗಿದೆ. ಬೆಂಗಳೂರು: ಪೆಟ್ರೋಲ್- ₹113.45, ಡೀಸೆಲ್ 104.44 ದೆಹಲಿ: ಪೆಟ್ರೋಲ್- ₹109.69, ಡೀಸೆಲ್- […]
ದೇಶದ ಜನತೆಗೆ ಬಿಗ್ ಶಾಕ್: ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ₹266 ಹೆಚ್ಚಳ
ನವದೆಹಲಿ: ಬೆಲೆ ಏರಿಕೆಯ ಬಿಸಿಯಲ್ಲಿ ಸುಡುತ್ತಿರುವ ದೇಶದ ಜನತೆಗೆ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ವಾಣಿಜ್ಯ ಬಳಕೆಯ ಸಿಲೆಂಡರ್ ಬೆಲೆಯನ್ನು ₹ 266 ರೂಪಾಯಿ ಹೆಚ್ಚಿಸುವ ಮೂಲಕ ಬಿಗ್ ಶಾಕ್ ಕೊಟ್ಟಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಂದಿನಿಂದ 266 ರೂಪಾಯಿ ಹೆಚ್ಚಳವಾಗಿದ್ದು, ಇನ್ಮುಂದೆ 19 ಕೆಜಿ ಸಿಲೆಂಡರ್ ಗೆ 2 ಸಾವಿರ ರೂಪಾಯಿ 50 ಪೈಸೆ ನೀಡಬೇಕು. ಈ ಹಿಂದೆ ಅದರ ಬೆಲೆ 1,734 ರೂಪಾಯಿಯಾಗಿತ್ತು. ಗೃಹ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಳವಾಗಿಲ್ಲ. ವಾಣಿಜ್ಯ ಬಳಕೆಯ […]
ರಾಜ್ಯದ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಡ್ಡಾಯಗೊಳಿಸುವ ಕಾನೂನು ರೂಪಿಸಲು ಚಿಂತನೆ; ಸಚಿವ ಸುನಿಲ್ ಕುಮಾರ್
ಉಡುಪಿ: ರಾಜ್ಯದಲ್ಲಿರುವ ಎಲ್ಲಾ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಡ್ಡಾಯಗೊಳಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು. ಉಡುಪಿಯ ಅಜ್ಜರಕಾಡಿನಲ್ಲಿರುವ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ 66ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿದರು. ಕನ್ನಡಿಗರಿಗೆ ಉದ್ಯೋಗ ಕಡ್ಡಾಯಗೊಳಿಸಲು ಕಾನೂನಿನ ಚೌಕಟ್ಟಿನಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದರು. ಮುಂದಿನ ವರ್ಷದಿಂದ ಪ್ರಶಸ್ತಿ ಆಯ್ಕೆಗೆ ಏಕರೂಪ ನಿಯಮಗಳನ್ನು ರೂಪಿಸಲಾಗುವುದು. ಈ ಬಾರಿ ಅರ್ಹರಿಗೆ ರಾಜ್ಯ ಪ್ರಶಸ್ತಿ ನೀಡಲಾಗಿದೆ. […]
ಪುನೀತ್ ರಾಜ್ ಕುಮಾರ್ ಓದಿಸುತ್ತಿದ್ದ 1800 ಮಕ್ಕಳ ವಿದ್ಯಾಭ್ಯಾಸದ ಹೊಣೆ ನನ್ನದು ಎಂದ ತಮಿಳು ನಟ ವಿಶಾಲ್
ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ನಾನು ವಹಿಸಿಕೊಳ್ಳುತ್ತೇನೆ ಎಂದು ತಮಿಳು ನಟ ವಿಶಾಲ್ ಇಂದು ಘೋಷಣೆ ಮಾಡಿದ್ದಾರೆ. ಪುನೀತ್ ರಾಜ್ಕುಮಾರ್ 1800 ಮಕ್ಕಳನ್ನು ಓದಿಸುತ್ತಿದ್ದರು. ಹೃದಯಾಘಾತದಿಂದ ಪುನೀತ್ ರಾಜ್ಕುಮಾರ್ ಅಕ್ಟೋಬರ್ 29 ರಂದು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ 1800 ಮಕ್ಕಳ ಜವಾಬ್ದಾರಿ ನನ್ನದು ಎಂದು ನಟ ವಿಶಾಲ್ ತಿಳಿಸಿದ್ದಾರೆ. ಪುನೀತ್ ರಾಜ್ಕುಮಾರ್ ಸದ್ದಿಲ್ಲದೆ ಸಾಕಷ್ಟು ಸಮಾಜಮುಖಿ ಕಾರ್ಯಗಳಲ್ಲಿ ಕೂಡ ತೊಡಗಿಕೊಂಡಿದ್ದರು ಎಂಬ ವಿಚಾರ ಅವರ ನಿಧನಾನಂತರ ಹೆಚ್ಚು ಹೆಚ್ಚು […]