ಹಾನಗಲ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಗೆ ಭರ್ಜರಿ ಗೆಲುವು; ಸಿಎಂ ತವರು ಜಿಲ್ಲೆಯಲ್ಲೇ ಬಿಜೆಪಿಗೆ ಭಾರೀ ಮುಖಭಂಗ

ಹಾನಗಲ್: ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ಹಾನಗಲ್ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಭರ್ಜರಿ ಗೆಲುವು ದಾಖಲಿಸಿದ್ದಾರೆ. 7598 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ವಿರುದ್ಧ ಜಯಭೇರಿ ಬಾರಿಸಿದ್ದಾರೆ. ಸಿಎಂ ತವರು ಜಿಲ್ಲೆ ಹಾನಗಲ್ ಕ್ಷೇತ್ರದಲ್ಲಿ ಗೆದ್ದೇ ತೀರುತ್ತೇವೆ ಎಂದು ಬೀಗುತ್ತಿದ್ದ ಬಿಜೆಪಿಗೆ ಭಾರಿ ಮುಖಭಂಗವಾಗಿದೆ. 19 ಸುತ್ತಿನ ಮತ ಎಣಿಕೆಯ ಬಳಿಕ ಕಾಂಗ್ರೆಸ್ ನ ಶ್ರೀನಿವಾಸ ಮಾನೆ 87,113 ಮತಗಳನ್ನು ಪಡೆದರೆ, ಬಿಜೆಪಿಯ ಅಭ್ಯರ್ಥಿಶಿವರಾಜ ಸಜ್ಜನರ 79,515 ಮತಗಳನ್ನಷ್ಟೇ […]

ಉಪಚುನಾವಣೆ: ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ್ ಭೂಸನೂರ್ ಗೆ ಭರ್ಜರಿ ಗೆಲುವು

ಸಿಂದಗಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಭರ್ಜರಿ ಗೆಲುವು ದಾಖಲಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ರಮೇಶ್ ಭೂಸನೂರ್​ ಅವರು 93,865 ಮತಗಳನ್ನ ಪಡೆದುಕೊಂಡರು. ಇನ್ನು ಕಾಂಗ್ರೆಸ್​ ಅಭ್ಯರ್ಥಿ ಅಶೋಕ್ ಮನಗೂಳಿ 62,680 ಮತಗಳನ್ನ ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ​ ನಾಜಿಯಾ ಶಕೀಲಾ 4,353 ಮತಗಳನ್ನ ಪಡೆದು ಸೋಲನ್ನ ಒಪ್ಪಿಕೊಂಡಿದ್ದಾರೆ. ಇನ್ನು ರಮೇಶ್ ಭೂಸನೂರ್ 31,185 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ; ಹಾನಗಲ್ ನಲ್ಲಿ ಕಾಂಗ್ರೆಸ್ ಅಲ್ಪ ಮುನ್ನಡೆ

ಸಿಂದಗಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಆರಂಭವಾಗಿದೆ. ವಿಜಯಪುರ ನಗರದ ಸೈನಿಕ ಶಾಲೆಯ ‘ಒಡೆಯರ ಹೌಸ್’ನಲ್ಲಿ ಸಿಂದಗಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಒಟ್ಟು 22 ಸುತ್ತು ಮತ ಎಣಿಕೆ ನಡೆದಿದೆ. ಹಾವೇರಿ ನಗರದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಹಾನಗಲ್‌ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಸಿಂದಗಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರಗೆ 7008 ಮತಗಳ ಮುನ್ನಡೆ ಸಿಂದಗಿ ವಿಧಾನಸಭಾ ಉಪ ಚುನಾವಣೆ ನಾಲ್ಕನೇ ಸುತ್ತಿನ ಮತ […]

ಕಾಪು: ವಾಹನಗಳ ಬ್ಯಾಟರಿ ಕಳವು; ಐದು ಆರೋಪಿಗಳ ಬಂಧನ

ಕಾಪು: ವಾಹನಗಳ ಬ್ಯಾಟರಿ ಕಳವು ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಆರೋಪಿಗಳನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2.21 ಲಕ್ಷ ರೂ. ಮೌಲ್ಯದ 22  ಬ್ಯಾಟರಿ, ಮೂರು ಕಾರು ಸೇರಿ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಕಾಪು ಮಾರಿಗುಡಿ ದೇವಸ್ಥಾನದ ಬಳಿಯ ನಿವಾಸಿ ಶರೀಫ್ (35), ಕಳತ್ತೂರು ಚಂದ್ರನಗರ ಜನತಾ ಕಾಲನಿಯ ನಿವಾಸಿ ಅಲ್ತಾಫ್ (26), ಕುಂದಾಪುರ ತೆಕ್ಕಟ್ಟೆಯ ಕಣ್ಣುಕೆರೆ ಗ್ರಾಮದ ಪ್ರಸ್ತುತ ಮೂಳೂರಿನ ಎಸ್‍ಎಸ್ ರೋಡ್ ನಿವಾಸಿ ಫರ್ಜೀನ್ ಅಹಮದ್ (21), ಮೂಳೂರಿನ ಫಿಶರೀಸ್ […]