ಉಡುಪಿ ಬ್ಲಾಕ್ ಕಾಂಗ್ರೆಸ್‌ನಿಂದ ಸರ್ವ ಧರ್ಮ ದೀಪಾವಳಿ
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಅಮೆರಿಕಾದ ವೈಟ್‌ಹೌಸ್‌ನಲ್ಲಿ ಆಚರಿಸಲ್ಪಡುವ ಹಬ್ಬ, ಬ್ರಿಟನ್ ಪ್ರಧಾನಿ ಆಚರಿಸುವ ಹಬ್ಬ ದೀಪಾವಳಿ ಕೇವಲ ಹಿಂದುಗಳ ಹಬ್ಬ ಆಗಿ ಉಳಿದಿಲ್ಲ. ಭಾರತೀಯರ ದೀಪಾವಳಿ ಇದೀಗ ವಿಶ್ವವ್ಯಾಪಿಯಾಗಿದೆ ಎಂದರು. ದೀಪಾವಳಿಯನ್ನು ಸರ್ವ ಧರ್ಮೀಯರ ಪಾಲ್ಗೊಳ್ಳುವಿಕೆಯಲ್ಲಿ, ಪ್ರಪ್ರಥಮ ಬಾರಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಆಯೋಜಿಸಿರುವುದಕ್ಕೆ ಅಧ್ಯಕ್ಷ ರಮೇಶ್ ಕಾಂಚನ್ ಅವರನ್ನು […]
ಕುಂದಾಪುರ: ದೇವಸ್ಥಾನದ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ
ಕುಂದಾಪುರ: ಗಂಡನ ಅನಾರೋಗ್ಯದ ವಿಚಾರದಲ್ಲಿ ಮನನೊಂದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ವಕ್ವಾಡಿ ಗ್ರಾಮದ ನಂದಿಕೇಶ್ವರ ದೇವಸ್ಥಾನದ ಬಳಿ ಇಂದು ನಡೆದಿದೆ. ಕುಂದಾಪುರ ವಕ್ವಾಡಿ ಗ್ರಾಮದ ಹೆಗ್ಗಾರಬೈಲುವಿನ ಸರಸ್ವತಿ ಶೆಟ್ಟಿ (39) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರ ಪತಿ ಕಿಡ್ನಿ ಖಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ಮನನೊಂದ ಸರಸ್ವತಿ ಅವರು ನ.6ರ ಬೆಳಿಗ್ಗೆ 5.30ರ ಸುಮಾರಿಗೆ ಮನೆಯವರಿಗೆ ತಿಳಿಸದೆ ಮನೆಯಿಂದ ಹೊರಗೆ ಹೋಗಿದ್ದರು. ಮನೆಯವರು ಹುಡುಕಾಟ ನಡೆಸಿದಾಗ ಬೆಳಿಗ್ಗೆ 10.45ರ ಸುಮಾರಿಗೆ ಮನೆಯ ಸಮೀಪದ […]
ಶಾಂಭವಿ ಕಲಾವಿದೆರ್ ಸಾಣೂರು ಅರ್ಪಿಸುವ “ಧರ್ಮದ ನಡೆ” ತುಳು ಕಿರುಚಿತ್ರ ಬಿಡುಗಡೆ
ಕಾರ್ಕಳ: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ತಂಡ “ಶಾಂಭವಿ ಕಲಾವಿದೆರ್ ಸಾಣೂರು” ಅರ್ಪಿಸುವ “ಧರ್ಮದ ನಡೆ” ತುಳು ಕಿರುಚಿತ್ರ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ರಕ್ಷಿತ್ ಮಡಿವಾಳ ಮಾಂಟ್ರಾಡಿ ಅವರ ಸಂಭಾಷಣೆಯಲ್ಲಿ ಶಿವು ನಾರವಿ ಅವರ ಕಂಚಿನ ಕಂಠದೊಂದಿಗೆ ಈ ಕಿರುಚಿತ್ರ ಅದ್ಭುತವಾಗಿ ಮೂಡಿಬಂದಿದ್ದು, ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕಿರುಚಿತ್ರ ನೋಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ….
ಬ್ರಹ್ಮಾವರ: ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹ; ರಾ.ಹೆ. 66 ತಡೆದು ರೈತರಿಂದ ಪ್ರತಿಭಟನೆ
ಬ್ರಹ್ಮಾವರ: ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹ; ರಾ.ಹೆ. 66 ತಡೆದು ರೈತರಿಂದ ಪ್ರತಿಭಟನೆ ಹೆದ್ದಾರಿಯಲ್ಲೇ ಹಡಿಮಂಚವನ್ನಿಟ್ಟು ಭತ್ತದ ತೆನೆಯನ್ನು ಬಡಿಯುವ ಮೂಲಕ ಪ್ರತಿಭಟಿಸಿದ ರೈತರು ಬ್ರಹ್ಮಾವರ: ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಜನಪರ ರೈತ ಹೋರಾಟ ಸಮಿತಿಯ ನೇತೃತ್ವದಲ್ಲಿ ರೈತರು ಇಂದು ರಾಷ್ಟ್ರೀಯ ಹೆದ್ದಾರಿ 66 ತಡೆದು ಪ್ರತಿಭಟನೆ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ರೈತರು ಹೋರಾಟಗಾರರು ಹೆದ್ದಾರಿಯಲ್ಲೇ ಹಡಿಮಂಚವನ್ನಿಟ್ಟು ಭತ್ತದ ತೆನೆಯನ್ನು ಬಡಿಯುವ ಮೂಲಕ ಆಕ್ರೋಶ ಹೊರಹಾಕಿದರು. […]
ಮಹಾರಾಷ್ಟ್ರದ ಸಿವಿಲ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ಮಂದಿ ಮೃತ್ಯು
ನವದೆಹಲಿ: ಮಹಾರಾಷ್ಟ್ರದ ಅಹಮದ್‌ನಗರದಲ್ಲಿರುವ ಸಿವಿಲ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಐಸಿಯು ವಾರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ. ಇನ್ನು ಹಲವು ಮಂದಿ ಬೆಂಕಿಯ ಕೆನ್ನಾಲಿಗೆಗೆ ಗಂಭೀರವಾಗಿ ಗಾಯಗೊಂಡಿದ್ದು, ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.