ಕಾರ್ಕಳ ಜೋಡುರಸ್ತೆ ಪೂರ್ಣಿಮಾ ಸಿಲ್ಕ್ಸ್: ರಾಜ್ಯೋತ್ಸವ ಆಚರಣೆ

ಕಾರ್ಕಳ: ಇಲ್ಲಿನ ಜೋಡುರಸ್ತೆಯಲ್ಲಿರುವ ಪೂರ್ಣಿಮಾ ಸಿಲ್ಕ್ಸ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ತುಳು ಚಿತ್ರ ನಟ ಅರವಿಂದ ಬೋಳಾರ್ ಮಾತನಾಡಿ, ಕನ್ನಡ ನಾಡಿನಲ್ಲಿ ಕನ್ನಡ ಭಾಷೆಯನ್ನು ಬೆಳೆಸುವ ಕಾರ್ಯವನ್ನು ಪ್ರತಿಯೊಬ್ಬರೂ ಮಾಡಬೇಕಾಗಿದೆ. ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದ ಪೂರ್ಣಿಮ ಸಂಸ್ಥೆಯ ಕಾರ್ಯ ಅಭಿನಂದನೀಯ ಎಂದರು. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರವೀಂದ್ರ ಕುಮಾರ್ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಆಶಯದಂತೆ ರಾಜ್ಯದಲ್ಲಿಯೇ ಪ್ರಥಮವಾಗಿ ಕಾರ್ಯಕ್ರಮವನ್ನು […]