ಆಟೋ ಪ್ರಯಾಣ ದರ ₹5 ಹೆಚ್ಚಳ: ಡಿಸೆಂಬರ್ 1ರಿಂದ ನೂತನ ದರ ಜಾರಿ

ಬೆಂಗಳೂರು: ಆಟೋ ಚಾಲಕರ ಬಹುದಿನಗಳ ಬೇಡಿಕೆಯನ್ನು ಪರಿಗಣಿಸಿದ ಬೆಂಗಳೂರು ನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಬೆಂಗಳೂರು ನಗರದಲ್ಲಿ ಆಟೊ ಪ್ರಯಾಣ ದರವನ್ನು ₹ 5 ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ. ಸದ್ಯ 1.9 ಕಿ.ಮೀ ಸಂಚಾರಕ್ಕೆ ₹ 25 ದರವಿತ್ತು. ಇದೀಗ 2 ಕಿ.ಮೀ ಸಂಚಾರಕ್ಕೆ ₹ 30 ನಿಗದಿ ಮಾಡಲಾಗಿದೆ. ಡಿಸೆಂಬರ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಪರಿಷ್ಕೃತ ದರ ಹೀಗಿದೆ 2 ಕಿ.ಮೀ.ಗೆ ₹30 (ಮೂರು ಜನ ಪ್ರಯಾಣಿಕರು) 2 ಕಿ.ಮೀ. […]

ನೂತನ ಮರಳು ನೀತಿ ಜಾರಿ: ಇನ್ಮುಂದೆ ಬಡವರಿಗೆ, ರೈತರಿಗೆ ರಿಯಾಯಿತಿ ದರದಲ್ಲಿ ಸಿಗಲಿದೆ ಮರಳು..!!

ಬೆಂಗಳೂರು: ನದಿ, ತೊರೆ, ಹಳ್ಳ, ಕೆರೆ, ಜಲಾಶಯಗಳ ಪಾತ್ರಗಳಲ್ಲಿರುವ ಮರಳು ಗಣಿಗಾರಿಕೆ ನಡೆಸಿ, ಅಗ್ಗದ ದರದಲ್ಲಿ ಗ್ರಾಹಕರಿಗೆ ಮರಳು ಪೂರೈಕೆ ಮಾಡುವ ಹೊಸ ಮರಳು ನೀತಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಗ್ರಾಮೀಣ ವಸತಿ ಯೋಜನೆಗಳಿಗೆ ಮತ್ತು ಗ್ರಾಮೀಣ ಜನರು ಮನೆ ಕಟ್ಟಿಕೊಳ್ಳಲು ರಿಯಾಯ್ತಿ ದರದಲ್ಲಿ ಮರಳು ಪೂರೈಕೆ ಮಾಡಲು ನೀತಿಯಲ್ಲಿ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು. ದಕ್ಷಿಣ ಕನ್ನಡದಲ್ಲಿ […]