ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ

ಬೆಂಗಳೂರು: ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು. ಅರಮನೆ ಮೈದಾನದ ಗಾಯತ್ರಿ ವಿಹಾರ್‌ನಲ್ಲಿ ಪುನೀತ್‌ ರಾಜ್‌ಕುಮಾರ್‌ ಸ್ಮರಣಾರ್ಥ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಂಗಳವಾರ ಆಯೋಜಿಸಿದ್ದ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಪ್ಪು ಚಿರಸ್ಥಾಯಿ ಆಗಿರಬೇಕು ಎನ್ನುವ ಜನರ ಅಭಿಲಾಷೆಯೇ ಸರ್ಕಾರದ ಆಶಯ. ಪುನೀತ್‌ ಸಮಾಧಿಯನ್ನು ಡಾ.ರಾಜ್‌ಕುಮಾರ್‌ ಅವರ ಸಮಾಧಿಯಂತೇ ಅಭಿವೃದ್ಧಿಗೊಳಿಸಲಾಗುವುದು. ಪುನೀತ್‌ ಅವರ ಹೆಸರನ್ನು ರಾಷ್ಟ್ರ ಮಟ್ಟದ ಪ್ರಶಸ್ತಿಗಳಿಗೆ ಶಿಫಾರಸು ಮಾಡಬೇಕೆಂಬ ಸಲಹೆಯೂ […]

ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಮೂರು ದಿನ ಭಾರಿ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ಕರಾವಳಿ ಜಿಲ್ಲೆಗಳು ಸಹಿತ ರಾಜ್ಯದ ವಿವಿಧೆಡೆ ನ.16ರಿಂದ 18ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂಡಮಾನ್‌ ಭಾಗದಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳು ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ […]

ವಿಧಾನ ಪರಿಷತ್ ಚುನಾವಣೆ; ಪಕ್ಷೇತರ ಅಭ್ಯರ್ಥಿಯೊಂದಿಗೆ ಹೊಂದಾಣಿಕೆ ಇಲ್ಲ; ಕುಯಿಲಾಡಿ

ಉಡುಪಿ: ವಿಧಾನ ಪರಿಷತ್ ಚುನಾವಣೆಯ ದಕ್ಷಿಣ ಕನ್ನಡ ಮತ್ತು ಉಡುಪಿ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಯಾರೊಂದಿಗೂ ಕೂಡ ಹೊಂದಾಣಿಕೆ ಮಾಡುವುದಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಹಾಲಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ಪರ್ಧಿಸುವುದು ಬಹುತೇಕ ಖಚಿತ. ಈ ಬಗ್ಗೆ ಎರಡು ದಿನಗಳಲ್ಲಿ ನಿರ್ಧಾರ ಮಾಡಲಾಗುವುದು. ಬಿಜೆಪಿಗೆ ಓರ್ವ ಅಭ್ಯರ್ಥಿಯ ಗೆಲುವಿಬೇಕಾದ ಮತಗಳಿವೆ. ಆದರೆ ಇನ್ನೊಂದು ಅಭ್ಯರ್ಥಿ ಹಾಕುವ ಬಗ್ಗೆ ಚರ್ಚೆ ನಡೆದಿಲ್ಲ ಎಂದರು. ದ.ಕ., ಉಡುಪಿಯಲ್ಲಿ 6,045 […]

ಉಡುಪಿ: ಡಿಸೇಲ್ ದರ ₹75 ಗೆ ಇಳಿದರೆ ಬಸ್ ಪ್ರಯಾಣ ದರ ಇಳಿಕೆ; ಕುಯಿಲಾಡಿ

ಉಡುಪಿ: ಡಿಸೇಲ್ ದರ ₹75 ಗೆ ಇಳಿದರೆ ಬಸ್ ಪ್ರಯಾಣ ದರವನ್ನು ಇಳಿಕೆ ಮಾಡುತ್ತೇವೆ. ಆದರೆ ಸದ್ಯ ಬಸ್ ಪ್ರಮಾಣ ದರ ಇಳಿಕೆ ಮಾಡಲು ಸಾಧ್ಯವಿಲ್ಲ ಎಂದು ಉಡುಪಿ ಜಿಲ್ಲಾ ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಈಗಿರುವ ಬಸ್ ಪ್ರಯಾಣ ದರ ಡಿಸೇಲ್ ಗೆ ₹ 85 ಆದಾಗ ಹೆಚ್ಚು ಮಾಡಿರುವ ದರ. ಆದಾದ ಮೇಲೆ ಬಸ್ ದರ ಹೆಚ್ಚು ಮಾಡಿಲ್ಲ. ಡಿಸೇಲ್ ದರ ₹103ಕ್ಕೆ ಏರಿಕೆಯಾದಗಲೂ ಜಾಸ್ತಿ ಮಾಡಿಲ್ಲ […]