ಉಡುಪಿ ಎಡಿಸಿ ಬಿ. ಸದಾಶಿವ ಪ್ರಭು ವರ್ಗಾವಣೆ
ಉಡುಪಿ: ಉಡುಪಿ ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಬಿ. ಸದಾಶಿವ ಪ್ರಭು ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರನ್ನು ದಾವಣಗೆರೆ ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಹುದ್ದೆಗೆ ನೇಮಿಸಲಾಗಿದೆ. ಎಡಿಸಿ ಪ್ರಭು ಸ್ಥಾನಕ್ಕೆ ಚಿತ್ರದುರ್ಗದಿಂದ ವರ್ಗವಾಗಿರುವ ಎಡಿಸಿ ಬಾಲಕೃಷ್ಣಪ್ಪ ಇ. ಅವರನ್ನು ನಿಯೋಜಿಸಲಾಗಿದೆ.
ಎಲ್ಲ ಮಾದರಿಯ ಕ್ರಿಕೆಟ್ ಗೆ ಎಬಿ ಡಿವಿಲಿಯರ್ಸ್ ವಿದಾಯ: ಆರ್ ಸಿಬಿ ಅಭಿಮಾನಿಗಳಿಗೆ ಶಾಕ್
ವಿಶ್ವ ಕಂಡ ಕ್ರಿಕೆಟ್ನ ದಿಗ್ಗಜ ಆಟಗಾರ ಎಬಿ ಡಿವಿಲಿಯರ್ಸ್ ಎಲ್ಲಾ ಮಾದರಿಯ ಕ್ರಿಕೆಟ್ಗೂ ವಿದಾಯ ಘೋಷಿಸಿದ್ದಾರೆ. ಇದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ತಮ್ಮ ನಿವೃತ್ತಿಯ ನಿರ್ಧಾರವನ್ನ ಟ್ವಿಟರ್ನಲ್ಲಿ ಪ್ರಕಟಿಸಿರುವ ದಕ್ಷಿಣ ಆಫ್ರಿಕಾದ ಕ್ರಿಕೆಟ್ ದಂತಕಥೆ ಎಬಿಡಿ, 2018ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ಆದರೆ, ಐಪಿಎಲ್ ಸೇರಿದಂತೆ ವಿಶ್ವ ಟಿ20 ಕ್ರಿಕೆಟ್ ಲೀಗ್ಗಳಲ್ಲಿ ಮುಂದುವರಿದಿದ್ದರು. ಈಗ ಟಿ20 ಲೀಗ್ಗಳಿಂದಲೂ ಹಿಂದೆ ಸರಿದಿರುವ ಎಬಿ ಡಿವಿಲಿಯರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ನಿಶಾಸೆ […]
ಕಣಜದ ಹುಳು ಕಡಿದು ಗೃಹರಕ್ಷಕ ದಳ ಸಿಬ್ಬಂದಿ ಮೃತ್ಯು
ಮೂಲ್ಕಿ: ಕಣಜದ ಹುಳು ಕಡಿದು ಗೃಹರಕ್ಷಕ ದಳ ಸಿಬ್ಬಂದಿಯೊಬ್ಬರು ಮೃತಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಶ್ರೀರಾಮ ಮಂದಿರ ಬಳಿ ನಡೆದಿದೆ. ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್ (35) ಮೃತ ದುರ್ದೈವಿ. ಅವರು ಮಂಗಳೂರಿನ ಕಂಕನಾಡಿ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿದ್ದರು. ಬುಧವಾರ ಸಂಜೆ ಶ್ರೀರಾಮ ಮಂದಿರ ಬಳಿ ಶಾಲಾ ಮಕ್ಕಳಿಗೆ ಕಣಜದ ಹುಳುಗಳು ದಾಳಿ ನಡೆಸಿತ್ತು. ಇದನ್ನು ನೋಡಿದ ಸಂತೋಷ್ ಅವರು, ಮಕ್ಕಳನ್ನು ಕಣಜದ ಹುಳುಗಳಿಂದ ರಕ್ಷಿಸಿ ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಈ […]
ಏಳು ತಿಂಗಳಿನಿಂದ ನಾಪತ್ತೆಯಾಗಿರುವ ಪೆರಂಪಳ್ಳಿ ಯುವತಿ; ಶೀಘ್ರ ಪತ್ತೆಗೆ ಆಗ್ರಹಿಸಿ ಕೆಥೊಲಿಕ್ ಸಭಾದಿಂದ ಎಸ್ಪಿಗೆ ಮನವಿ
ಉಡುಪಿ: ಏಳು ತಿಂಗಳಿನಿಂದ ನಾಪತ್ತೆಯಾದ ಪೆರಂಪಳ್ಳಿಯ ಯುವತಿಯೋರ್ವಳನ್ನು ಕೂಡಲೇ ಪತ್ತೆ ಹಚ್ಚುವಂತೆ ಆಗ್ರಹಿಸಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅನುಪಸ್ಥೀತಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ಅವರಿಗೆ ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷರಾದ ಮೇರಿ ಡಿʼಸೋಜಾ ಮನವಿ ಸಲ್ಲಿಸಿದರು. ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಂಪಳ್ಳಿ ನಿವಾಸಿಯಾಗಿರುವ ಅವಿನಾ (16) ಎಂಬ ಯುವತಿ 2021 ಏಪ್ರಿಲ್ 13 ರಂದು […]
ಪ್ರಧಾನಿ ಮೋದಿಯನ್ನು ಮತ್ತೆ ಅಭಿನಂದಿಸಿ ಪ್ರಮೋದ್ ಮಧ್ವರಾಜ್..!!
ಉಡುಪಿ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ವಿವಾದಿತ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಪ್ರಮೋದ್, ರೈತರ ಅವಿರತ ಹೋರಾಟ ಮತ್ತು ಮನವಿಯನ್ನು ಪರಿಗಣಿಸಿ 3 ಕೃಷಿ ಕಾಯ್ದೆಯನ್ನು ವಾಪಾಸು ಪಡೆಯುವ ಐತಿಹಾಸಿಕ ನಿರ್ಧಾರ ಕೈಗೊಂಡ ಪ್ರಧಾನಿಯವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಮೂರ್ನಾಲ್ಕು ದಿನಗಳ ಹಿಂದೆ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದರಿಗೆ ಪದ್ಮವಿಭೂಷಣ ಪ್ರಶಸ್ತಿ ದೊರೆತ […]