ಉಡುಪಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ: ನೂತನ ಅಧ್ಯಕ್ಷರಾಗಿ ಅಂಡಾರು ದೇವಿಪ್ರಸಾದ್ ಶೆಟ್ಟಿ ಆಯ್ಕೆ
ಉಡುಪಿ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೂತನ ಅಧ್ಯಕ್ಷರಾಗಿ ಅಂಡಾರು ದೇವಿಪ್ರಸಾದ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಇಂದು ನಡೆದ ಸಂಘದ ಸಭೆಯಲ್ಲಿ ಅಂಡಾರು ದೇವಿಪ್ರಸಾದ್ ಶೆಟ್ಟಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇತರ ಪದಾಧಿಕಾರಿಗಳು: ಉಪಾಧ್ಯಕ್ಷರಾಗಿ ನಟರಾಜ್ ಪ್ರಭು, ಕಾರ್ಯದರ್ಶಿಯಾಗಿ ಡಾ. ವಿಜಯೇಂದ್ರ ವಸಂತ, ಜೊತೆ ಕಾರ್ಯದರ್ಶಿಗಳಾಗಿ ಲಕ್ಷ್ಮಿಕಾಂತ್ ಬೆಸ್ಕೂರ್, ರಂಜಿತ್ ಪ್ರಭು, ಕೋಶಾಧಿಕಾರಿಯಾಗಿ ಅಮ್ಮುಂಜೆ ಪ್ರಭಾಕರ್ ನಾಯಕ್, ನಿರ್ದೇಶಕರಾಗಿ ಸುಭಾಷ್ ಕಾಮತ್, ಲಯನ್ ಜಯಕರ್ ಶೆಟ್ಟಿ ಇಂದ್ರಾಳಿ , ಮುರಳೀಧರ ಬಾಳಿಗಾ, ಲಯನ್ ವಿ.ಜಿ. […]
ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ: ನಾಳೆ (ನ.21) ನೂತನ ಚಿಕಿತ್ಸಾ ವಿಭಾಗಗಳ ಉದ್ಘಾಟನೆ
ಉಡುಪಿ: ಕರಾವಳಿ ಪ್ರಸಿದ್ದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ಕಣ್ಣಿನ ನೂತನ ಚಿಕಿತ್ಸಾ ಸೌಲಭ್ಯಗಳ ವಿಭಾಗಗಳಾದ ಅರ್ಥೋಪ್ಟಿಕ್ ಕಣ್ಣಿನ ವಿಭಾಗ, ನಿಮ್ನ ದೃಷ್ಟಿ ನೆರವು ಕ್ಲಿನಿಕ್ (ಲೋ ವಿಷನ್ ಏಡ್ಸ್) ವಿಭಾಗ, ಮಕ್ಕಳ ನೇತ್ರ ಚಿಕಿತ್ಸಾ, ಐಟ್ರೇಸ್ ವಿಭಾಗದ ಉದ್ಘಾಟನಾ ಸಮಾರಂಭ ನಾಳೆ (ನ.21) ಆಸ್ಪತ್ರೆಯ ಸಭಾಭವನದಲ್ಲಿ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲುರವರು, ಪೇಜಾವರ ಅಧೋಕ್ಷಜ ಮಠದ ಶ್ರೀ […]
ಉಡುಪಿ: ನ.22ಕ್ಕೆ ನ್ಯೂ ಉಡುಪಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆ
ಉಡುಪಿ: ಉಡುಪಿ ಸಂತೆಕಟ್ಟೆ ಕಲ್ಯಾಣಪುರದ ಜಿಎಸ್‌ಜೆ ಗ್ಯಾಲಕ್ಸಿ ಕಾಂಪ್ಲೆಕ್ಸ್ ನಲ್ಲಿ ಇದೇ ನ.22 ರ ಸೋಮವಾರದಂದು ಬೆಳಿಗ್ಗೆ 10.30ಕ್ಕೆ ನ್ಯೂ ಉಡುಪಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಶುಭಾರಂಭಗೊಳ್ಳಲಿದೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಮಂಜುನಾಥ ಎಸ್.ಕೆ. ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವೃತ್ತಿಪರ ನಿರ್ದೇಶಕ […]
ನಾಳೆ (ನ.21) ಉಚ್ಚಿಲದಲ್ಲಿ ನೂತನ ಭವ್ಯ “ಮೊಗವೀರ ಭವನ” ಉದ್ಘಾಟನೆ
ಉಡುಪಿ: ಉಚ್ಚಿಲದ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ನೂತನ ಮೊಗವೀರ ಭವನದ ಉದ್ಘಾಟನಾ ಸಮಾರಂಭವು ನಾಳೆ (ನ. 21) ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕುಲಮಹಾಸ್ತ್ರೀ ಸಭಾಭವನವನ್ನು ಉದ್ಘಾಟಿಸುವರು. ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೂತನ ಭವನವನ್ನು ಉದ್ಘಾಟಿಸುವರು. ಮಾಧವ ಮಂಗಲ ಸಭಾಭವನವನ್ನು ಸಚಿವ ವಿ.ಸುನಿಲ್ ಕುಮಾರ್, ‘ಶಾಲಿನಿ ನಾಡೋಜ ಡಾ. ಜಿ ಶಂಕರ್ ವೇದಿಕೆಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ, ಗೀತಾ ಆನಂದ್ ಸಿ.ಕುಂದರ್ ವೇದಿಕೆಯನ್ನು ಎಂಆರ್‌ಪಿಎಲ್ […]
ವಿಧಾನ ಪರಿಷತ್ ಚುನಾವಣೆ: ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ
ಮಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ದ್ವಿಸದಸ್ಯ ಕ್ಷೇತ್ರ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಮಂಗಳೂರು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಚುನಾವಣಾಧಿಕಾರಿ ಆಗಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ಕೋಟ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಇಂಧನ ಸಚಿವ ಸುನೀಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆಯ ಸಚಿವ ಎಸ್. ಅಂಗಾರ, ಬಿಜೆಪಿ […]