ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸಹಕಾರಿ ರಂಗದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಚುನಾವಣಾ ಸ್ಪರ್ಧಾ ಕಣದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಮಂಗಳೂರು ಕ್ಷೇತದಲ್ಲಿ ಮಂಜುನಾಥ್ ಭಂಡಾರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಇನ್ನೊಂದೆಡೆ ಹಿರಿಯ ನಾಯಕ ಎಸ್.ಆರ್.ಪಾಟೀಲ್ ಗೆ ಟಿಕೆಟ್ ಕೈ ತಪ್ಪಿದೆ. ಕೋಲಾರ: ಅನಿಲ್ ಕುಮಾರ್ ಬೆಂಗಳೂರು ನಗರ: ಚೇತನ್ ಕುಮಾರ್ ಬೆಂಗಳೂರು ಗ್ರಾಮಾಂತರ: ಎಸ್. ರವಿ ತುಮಕೂರು: […]
ಮಣಿಪಾಲ ಯೂನಿವರ್ಸಲ್ ಪ್ರೆಸ್‌ನ ಎರಡು ಕೃತಿ ಲೋಕಾರ್ಪಣೆ
ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಂಸ್ಥೆಯ ಪ್ರಸಾರಾಂಗ ವಿಭಾಗವಾದ ಮಣಿಪಾಲ ಯೂನಿವರ್ಸಲ್ ಪ್ರೆಸ್‌ನ ಎರಡು ಪ್ರಕಟಣೆಗಳಾದ “ಸಾಮಾಜಿಕ ಸಮನ್ವಯದ ಹರಿಕಾರ- ಕನಕದಾಸರು” ಮತ್ತು “ಭಾಷಾಂತರ: ಜಿಜ್ಞಾಸೆ ಮತ್ತು ಪ್ರಾತ್ಯಕ್ಷಿಕೆ” ಕೃತಿಗಳನ್ನು ಮಾಹೆಯ ಕುಲಪತಿ ಡಾ. ಎಂ.ಡಿ. ವೆಂಕಟೇಶ್ ಹಾಗೂ ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್ ಡಾ. ಎಚ್. ವಿನೋದ ಭಟ್ ಅವರು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಭಾನುವಾರ ಬಿಡುಗೊಳಿಸಿದರು. ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಡಾ. ಎಂ.ಡಿ. ವೆಂಕಟೇಶ್, ಮಣಿಪಾಲ ಯೂನಿವರ್ಸಲ್ ಪ್ರೆಸ್ […]
ಅಲೆವೂರು: ಶಿಕ್ಷಕಿ ನೇಣಿಗೆ ಶರಣು
ಉಡುಪಿ: ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರಿನಲ್ಲಿ ಭಾನುವಾರ ರಾತ್ರಿ ನಡೆದಿದೆ. ಅಲೆವೂರಿನ ನಿವಾಸಿ ಅಮೃತಾ ಪ್ರಾಯ (32) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಇವರು ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್ ನ ಶಿಕ್ಷಕಿಯಾಗಿದ್ದು, ಕಳೆದು ಎಂಟು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಇವರು ಕಾಣಿಯೂರು ಮಠದ ಮ್ಯಾನೇಜರ್ ಅವರ ಪತ್ನಿ ಎಂದು ತಿಳಿದುಬಂದಿದೆ. ಇತ್ತೀಚಿನ ಕೆಲ ದಿನಗಳಿಂದ ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಕಾರಣದಿಂದ ನ. 21ರಂದು ರಾತ್ರಿ ಮನೆಯಲ್ಲಿ ನೇಣಿಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ […]
ಖಾದಿ ಮಂಡಳಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಜ್ಯದ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಎಫ್‌ಡಿಎ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನವೆಂಬರ್ 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹುದ್ದೆಗಳ ವಿವರ 1) ಎಫ್‌ಡಿಎ –09 2) ಗ್ರಾಮೋದ್ಯೋಗ ಅಧಿಕಾರಿ –02 3) ತಾಂತ್ರಿಕ ಮೇಲ್ವಿಚಾರಕರು –05 4) ತಾಂತ್ರಿಕ ಸಹಾಯಕರು –13 ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ ಹೊಂದಿರಬೇಕು. ವಯಸ್ಸು: ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ […]
ಕಾರ್ಕಳ: ಎಂಪಿಎಂ ಕಾಲೇಜಿನಲ್ಲಿ ಆರ್ಥಿಕ ಶಿಕ್ಷಣದ ಬಗ್ಗೆ ಮಾಹಿತಿ ಕಾರ್ಯಾಗಾರ
ಕಾರ್ಕಳ: ವಿದ್ಯಾರ್ಥಿಗಳು ಸಿಕ್ಕಂತಹ ಅವಕಾಶಗಳನ್ನು ಪರಿಪೂರ್ಣವಾಗಿ ಗ್ರಹಿಸಿಕೊಂಡು ಸ್ಪರ್ಧಾತ್ಮಕ ಕಾರ್ಪೊರೇಟ್ ಜಗತ್ತಿಗೆ ತಯಾರಾಗಬೇಕೆಂದು ಸಂಪನ್ಮೂಲ ವ್ಯಕ್ತಿಗಳಾದ ವಿನೋದ್ ತಂತ್ರಿ ಅವರು ಹೇಳಿದರು. ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಕಳ ಇಲ್ಲಿ ಎನ್.ಎಸ್. ಐ. ಎಂ ಹಾಗೂ ಕೋಟಕ್ ಸೆಕ್ಯುರಿಟೀಸ್ ಇವರ ಪ್ರಯೋಜಕತ್ವದೊಂದಿಗೆ ನಾಲೆಜ್ ಬೆಲ್ ಇದರ ಸಹಭಾಗಿತ್ವದಲ್ಲಿ “ಕೋನ ಕೋನ ಮೇ ಶಿಕ್ಷ ” ಎಂಬ 10 ಗಂಟೆಗಳ ಉಚಿತ ಆರ್ಥಿಕ ಶಿಕ್ಷಣದ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ […]