ಉಡುಪಿ: ಮೀನುಗಾರರ ಬಲೆಗೆ ಬಿದ್ದ ಅಪರೂಪದ ಮೀನು; ಬರೋಬ್ಬರಿ ₹1,81,200 ರೂಪಾಯಿಗೆ ಮಾರಾಟ

ಉಡುಪಿ: ಮಲ್ಪೆ ಬಂದರಿನಿಂದ ಹೊರಟ ಮೀನುಗಾರರು ಭರ್ಜರಿ ಬೇಟೆ ಮಾಡಿದ್ದಾರೆ. ಮೀನುಗಾರರ ಬಲೆಗೆ ಅಪರೂಪದ ಮೀನೊಂದು ಬಿದ್ದಿದ್ದು, ಮೀನುಗಾರರು ಹಿಡಿದ ಈ ಮೀನು ಬರೋಬ್ಬರಿ ಒಂದು ಲಕ್ಷದ ಎಂಭತ್ತು ಸಾವಿರಕ್ಕೆ ಮಾರಾಟವಾಗಿದೆ. ಹೌದು, ಮಲ್ಪೆ ಕಡಲ ಕಿನಾರೆಯಿಂದ ಸೋಮವಾರ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಶಾನ್ ರಾಜ್ ತೊಟ್ಟಂ ಎಂಬುವವರ ಬಲರಾಮ್ ಎಂಬ ಹೆಸರಿನ ಬೋಟ್‌ಗೆ ಅದೃಷ್ಟ ಲಕ್ಷ್ಮಿಯೇ ಖುಲಾಯಿಸಿದ್ದಾಳೆ. ಮೀನುಗಾರರು ಬೀಸಿದ ಬಲೆಗೆ 18 ಕೆಜಿ ತೂಕದ ಅಪರೂಪದ “ಗೋಳಿ” ಎನ್ನುವ ಮೀನು ಸಿಕ್ಕಿದ್ದು, ಈ ಮೀನು […]

ರೈಲ್ವೆ ಇಲಾಖೆಯಲ್ಲಿ 1785 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಆಗ್ನೇಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 1785 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ: ಫಿಟ್ಟರ್, ಟರ್ನರ್‌, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್‌, ಪ್ಲಂಬರ್‌, ಪೇಂಟರ್‌ ಹುದ್ದೆಗಳ ನೇಮಕಾತಿ ನಡೆಯಲಿದೆ ಒಟ್ಟು ಹುದ್ದೆಗಳ ಸಂಖ್ಯೆ: 1785 ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ತರಬೇತಿ ಭತ್ಯೆ: ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು. ವಯೋಮಿತಿ ಸಡಿಲಿಕೆ: ಡಿಸೆಂಬರ್‌ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್‌ಸಿ, […]

ಉಡುಪಿ ಜಿಲ್ಲಾ ನಾಗರಿಕ ಸಮಿತಿ: ನ.25ಕ್ಕೆ ಪದ್ಮವಿಭೂಷಣ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭ

ಉಡುಪಿ: ವೃಂದಾವನಸ್ಥ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಭಾರತ ಸರಕಾರದಿಂದ ಕೊಡಮಾಡಿದ ನಿರ್ಯಾಣೋತ್ತರ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದ ಶ್ರೀ ವಿಶ್ವಪ್ರಸನ್ನ ಶ್ರೀಪಾದರಿಗೆ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿರುವ ಅಕ್ಷರ ಸಂತ ಶ್ರೀ ಹರೇಕಳ ಹಾಜಬ್ಬ ಅವರಿಗೆ ಅಭಿನಂದಿಸುವ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಆಯೋಜಿಸಿದೆ. ನ.25ರ ಗುರುವಾರ ಬೆಳಿಗ್ಗೆ 10.30 ಕ್ಕೆ ಕಿದಿಯೂರ್ ಹೋಟೆಲ್ ನ ಪವನ್ ರೂಪ್ ಟಾಪ್ ಸಭಾಂಗಣದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ. ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ […]

ಉಡುಪಿ: ಕಳ್ಳತನ ಪ್ರಕರಣ ಭೇದಿಸಿದ ಉಡುಪಿ ಪೊಲೀಸರು; ಓರ್ವನ ಬಂಧನ

ಉಡುಪಿ: ನ.17 ರಂದು ಬಾಬು ಆಚಾರ್ಯ ಅವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸುವಲ್ಲಿ ಉಡುಪಿ ಪೊಲೀಸರು‌ ಯಶಸ್ವಿಯಾಗಿದ್ದಾರೆ. ನ.17 ರಂದು ಬಾಬು ಆಚಾರ್ಯರ ಮನೆಯ ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು ಕಪಾಟಿನಲ್ಲಿದ್ದ ಒಟ್ಟು 90 ಗ್ರಾಂ ತೂಕದ ರೂ. 3,60,000/- ಮೌಲ್ಯದ ಚಿನ್ನಾಭರಣಗಳು ಹಾಗೂ ಬೆಳ್ಳಿ ಸಾಮಾಗ್ರಿಗಳು ಒಟ್ಟು ರೂ. 10,000/- ಮೌಲ್ಯದ ಹಾಗೂ ದೇವರ ಡಬ್ಬದಲ್ಲಿದ್ದ ಅಂದಾಜು ರೂ. 400/- ಒಟ್ಟು ರೂ. 3,70,400 ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದರು. ಈ ಬಗ್ಗೆ […]

ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ

ನವದೆಹಲಿ:  ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆಯಾಗಿದ್ದು, ಮಂಗಳವಾರ 10 ಗ್ರಾಂ ಚಿನ್ನದ ದರ ₹ 810ರಷ್ಟು ಇಳಿಕೆ ಕಂಡಿದ್ದು ₹ 46,896ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,548ರಷ್ಟು ಇಳಿಕೆ ಕಂಡು ₹ 62,720ರಂತೆ ಮಾರಾಟವಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರವು ಇಳಿಕೆ ಆಗಿರುವುದಕ್ಕೆ ಅನುಗುಣವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಕಂಡುಬಂದಿದೆ.