ಜರ್ಮನಿಯಲ್ಲಿ ಕೊರೊನಾ ಸ್ಫೋಟ: ಒಂದೇ ದಿನ 80 ಸಾವಿರ ಮಂದಿಯಲ್ಲಿ ಸೋಂಕು ಪತ್ತೆ; ಭಾರತಕ್ಕೆ ಎಚ್ಚರಿಕೆಯ ಕರೆಘಂಟೆ..!!
ಜರ್ಮನಿ: ಕೋವಿಡ್ 19 ಹೊಸ ರೂಪಾಂತರ ವೈರಸ್ ಗೆ ಜರ್ಮನಿ ದೇಶ ಅಕ್ಷರಶಃ ನಲುಗಿ ಹೋಗಿದೆ. ಕೇವಲ 8 ಕೋಟಿ ಜನಸಂಖ್ಯೆ ಹೊಂದಿರುವ ಜರ್ಮನಿಯಲ್ಲಿ ಕೇವಲ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 79,051 ಜನರಲ್ಲಿ ಸೋಂಕು ಕಾಣಿಕೊಂಡಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ಸುಮಾರು 56 ಲಕ್ಷ ಜನರಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ಸೋಂಕಿನಿಂದಾಗಿ ಸಾವಿನಪ್ಪಿದವರ ಸಂಖ್ಯೆ 1 ಲಕ್ಷದ ಗಡಿಯನ್ನು ದಾಟಿದೆ. ಅಷ್ಟಾಗಿಯೂ ಇಲ್ಲಿಯೂ ಸಾವಿನ ಪ್ರಮಾಣವನ್ನು ಸಂಪೂರ್ಣವಾಗಿ ಬಹಿರಂಗ ಮಾಡಿಲ್ಲ ಎಂದೂ ಹೇಳಲಾಗುತ್ತಿದೆ. […]
ದಿ. ಜೋಸೆಫ್-ಮೇರಿ ಪಿಂಟೊ ನಿಡ್ಡೋಡಿ ಸ್ಮಾರಕ ಸಾಹಿತ್ಯ ಪುರಸ್ಕಾರಕ್ಕೆ ಯುವ ಲೇಖಕಿ ಮುದ್ದು ತೀರ್ಥಹಳ್ಳಿ ಆಯ್ಕೆ
ಉಡುಪಿ: ಕೊಂಕಣಿಯಲ್ಲಿ ಬರೆಯುವ ಯುವ ಸಾಹಿತಿಗಳಿಗೆ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇವರ ಸಹಭಾಗಿತ್ವದಲ್ಲಿ ನೀಡಲಾಗುವ ದಿ. ಜೋಸೆಫ್ ಮತ್ತು ಮೇರಿ ಪಿಂಟೊ ನಿಡ್ಡೋಡಿ ಸ್ಮಾರಕ ಸಾಹಿತ್ಯ ಪುರಸ್ಕಾರ -2021ಕ್ಕೆ ವಿತಾಶಾ ರಿಯಾ ರೊಡ್ರಿಗಸ್ (ಮುದ್ದು ತೀರ್ಥಹಳ್ಳಿ) ಅವರು ಆಯ್ಕೆಯಾಗಿದ್ದಾರೆ. ವಿತಾಶಾ ರಿಯಾ ರೊಡ್ರಿಗಸ್ ತಮ್ಮ ಕಾವ್ಯ ನಾಮ ಮುದ್ದು ತೀರ್ಥಹಳ್ಳಿ ಹೆಸರಿನಲ್ಲಿ ಕಳೆದ ಏಳು ವರ್ಷಗಳಿಂದ ಕೊಂಕಣಿ ಹಾಗೂ ಕನ್ನಡ ಪತ್ರಿಕೆಗಳಲ್ಲಿ ಕಥೆ, ಕವನಗಳು ಮತ್ತು ಲೇಖನಗಳನ್ನು ಬರೆಯುತ್ತಿದ್ದು, ನಿರಂತರವಾಗಿ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿವೆ. ಮುದ್ದು ತೀರ್ಥಹಳ್ಳಿ […]
ಕಾರ್ಕಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಮೃತ್ಯು
ಕಾರ್ಕಳ: ಬುಧವಾರ ರಾತ್ರಿ ಕಾರ್ಕಳ ಕುಕ್ಕುಂದೂರು ಗ್ರಾಮದ ದುರ್ಗಾನಗರ ಅಶ್ವಥ ಕಟ್ಟೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾರೆ. ಮೃತರನ್ನು ಮಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ರಫೀಕ್ ನಿನ್ನೆ ರಾತ್ರಿ ದುರ್ಗಾನಗರ ಅಶ್ವಥಕಟ್ಟೆ ಹತ್ತಿರ ವಾಹನ ನಿಲ್ಲಿಸಿ ರಸ್ತೆ ದಾಟಲು ನಿಂತುಕೊಂಡಿದ್ದರು. ಈ ವೇಳೆ ಅರವಿಂದ ಕಾಮತ್ ಎಂಬವರು ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಅತೀವೇಗ ಮತ್ತು ಅಜಾಗರೂಕತೆಯಿಂದ ತನ್ನ ಕಾರನ್ನು ಚಲಾಯಿಸಿಕೊಂಡು ಬಂದು ರಫೀಕ್ ಗೆ ಡಿಕ್ಕಿ ಹೊಡೆದಿದ್ದಾರೆ. […]
ಕರಾವಳಿ ಜಿಲ್ಲೆಗಳಿಗೆ ಸೈಕ್ಲೋನ್ ಭೀತಿ.!
ಬೆಂಗಳೂರು: ನವೆಂಬರ್ 26ರಂದು ಚೆನ್ನೈಗೆ ಮತ್ತೊಂದು ಸೈಕ್ಲೋನ್ ಚಂಡಮಾರುತ ಅಪ್ಪಳಿಸಿದ್ದು, ಇದರ ಪ್ರಭಾವ ಕರ್ನಾಟಕ ರಾಜ್ಯದ ಮೇಲೂ ಬೀರಲಿದೆ. ಮೈಸೂರು ಭಾಗದಿಂದ ಉಡುಪಿವರೆಗೂ ಸೈಕ್ಲೋನ್ ಪ್ರಭಾವ ಇರಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸೈಕ್ಲೋನ್ ಹಿನ್ನೆಲೆಯಲ್ಲಿ ನ.26ರಿಂದ 28ರವರೆಗೆ ಮುನ್ನೆಚ್ಚರಿಕೆ ಅಗತ್ಯವಾಗಿದ್ದು, ಮುಂಜಾಗ್ರತಾ ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿಧಾನಸೌಧದಲ್ಲಿ ಇಂದು ಸಚಿವರು ತಿಳಿಸಿದರು.
ಪ್ರೊ. ಬಿ. ಶಿವರಾಮ ಶೆಟ್ಟಿ, ಸೀತಾರಾಮ ಕಟೀಲ್ ಗೆ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ
ಪ್ರೊ. ಬಿ. ಶಿವರಾಮ ಶೆಟ್ಟಿ ಸೀತಾರಾಮ ಕಟೀಲ್ ಉಡುಪಿ: ಯುವವಾಹಿನಿ ಉಡುಪಿ ಘಟಕದ ವತಿಯಿಂದ ನೀಡಲಾಗುವ ಈ ಬಾರಿಯ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿಗಳಿಗೆ ಪ್ರೊ.ಬಿ.ಶಿವರಾಮ ಶೆಟ್ಟಿ ಹಾಗೂ ಸೀತಾರಾಮ ಕುಮಾರ್ ಕಟೀಲ್ ಅವರು ಆಯ್ಕೆಯಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಯುವವಾಹಿನಿಯ ಮಾಜಿ ಅಧ್ಯಕ್ಷ ಸಂತೋಷ ಕುಮಾರ್, ಹಿರಿಯ ಜನಪದ ವಿದ್ವಾಂಸರೂ, ಮೈಸೂರು ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕರಾಗಿರುವ ಪ್ರೊ. ಬಿ.ಶಿವರಾಮ ಶೆಟ್ಟಿ […]