ಉಡುಪಿ: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಆಟೊ ಚಾಲಕ ವಿಷ ಸೇವಿಸಿ ಆತ್ಮಹತ್ಯೆ

ಉಡುಪಿ: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಆಟೊ ಚಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಡುಪಿ ಶಿವಳ್ಳಿ ಗ್ರಾಮದ ಬುಡ್ನಾರು ಅಂಗನವಾಡಿ ಬಳಿಯ ಅಬ್ಬಾಸ್‌ ಕಂಪೌಂಡ್‌ ಎಂಬಲ್ಲಿ ನಡೆದಿದೆ. ಸುರೇಂದ್ರ  ಎಸ್‌. ಸಾಲ್ಯಾನ್‌ (46) ಮೃತ ಆಟೊ ಚಾಲಕ. ಇವರು ಬುಡ್ನಾರು ಅಂಗನವಾಡಿ ಬಳಿಯ ಅಬ್ಬಾಸ್‌ ಕಂಪೌಂಡ್‌ ನಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಪುಷ್ಪಾ ಅವರೊಂದಿಗೆ ವಾಸಿಸುತ್ತಿದ್ದರು. ಆರ್ಥಿಕ ತೊಂದರೆಯಿಂದ ಬಳಲುತ್ತಿದ್ದ ಇವರು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನ.16ರಂದು ಡಿ.ಡಿ.ಟಿ ಪೌಡರನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. […]

ಪರಿಶ್ರಮದಿಂದ ಕಲಾಸಾಧನೆ ಸಾಧ್ಯ: ಡಾ. ಗಣೇಶ್ ಗಂಗೊಳ್ಳಿ

ಕಾಪು: ಕಲೆಯು ಯಾವಾಗಲೂ ಓರ್ವ ಸಾಧಕನ ಸ್ವತ್ತು. ತನ್ನ ಆಯ್ದ ಕ್ಷೇತ್ರದಲ್ಲಿ ಸಾಧನೆಗೈಯಲು ಶೃದ್ಧೆ, ಸತತ ಪರಿಶ್ರಮ, ಆತ್ಮವಿಶ್ವಾಸ ಹಾಗೂ ವಿನಮ್ರತೆ ಅಗತ್ಯ. ಜೀವನದಲ್ಲಿ ಬರುವ ಅಡೆತಡೆಗಳನ್ನೆದುರಿಸಿ ಸಾಧನೆಯ ಹಾದಿಯಲ್ಲಿ ದೃಢ ಸಂಕಲ್ಪದೊಂದಿಗೆ ಹೆಜ್ಜೆಯಿಡಬೇಕು. ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಸೂರ್ಯ ಚೈತನ್ಯ ಸಂಸ್ಥೆಯ ಪ್ರಯತ್ನ ಶ್ಲಾಘನೀಯ ಎಂದು ಕನ್ನಡ ಜಾನಪದ ಪರಿಷತ್ ನ ಉಡುಪಿ ಜಿಲ್ಲಾಧ್ಯಕ್ಷ , ಖ್ಯಾತ ಜಾನಪದ ಗಾಯಕ ಡಾ. ಗಣೇಶ್ ಗಂಗೊಳ್ಳಿ ಹೇಳಿದರು. ಅವರು ಕುತ್ಯಾರು ಸೂರ್ಯ ಚೈತನ್ಯ […]

ಓಮಿಕ್ರಾನ್ ವೈರಸ್ ಭೀತಿ: ಸೂಕ್ತ ಮುನ್ನೆಚ್ಚರಿಕೆ, ಜಾಗತಿಕ ಪ್ರಯಾಣ ನಿರ್ಬಂಧ ಪರಿಶೀಲನೆಗೆ ಪ್ರಧಾನಿ ಮೋದಿ ಸೂಚನೆ

ನವದೆಹಲಿ: ಓಮಿಕ್ರಾನ್ ಕೊರೊನಾ ರೂಪಾಂತರ ತಳಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಹಿತಿ ಪಡೆದುಕೊಂಡಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಜಾಗತಿಕ ಪ್ರಯಾಣ ನಿರ್ಬಂಧ ಸಡಿಲಿಕೆಯನ್ನು ಮರುಪರಿಶೀಲನೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ವೇಳೆ ಇತ್ತೀಚೆಗೆ ದಕ್ಷಿಣ ಆಫ್ರಿಕಾ, ಬೊಟ್ಸ್ವಾನಾ, ಹಾಂಕಾಂಗ್, ಇಸ್ರೇಲ್ ಹೀಗೆ ನಾಲ್ಕೈದು ದೇಶಗಳಲ್ಲಿ B.1.1.529 ಓಮಿಕ್ರಾನ್(Omicron) ಎಂಬ ರೂಪಾಂತರಿ ಕೊರೊನಾ ವೈರಸ್ ಪತ್ತೆಯಾಗಿದ್ದು, ಭಾರತದ ಮೇಲೆ ಇವುಗಳ ಪರಿಣಾಮವನ್ನೂ ಚರ್ಚೆ ಮಾಡಲಾಗಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ. ಹೊಸ […]

ಓಮ್ರಿಕಾನ್ ವೈರಸ್ ಭೀತಿ; ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸೂಚನೆ

ಬೆಂಗಳೂರು: ಸೌತ್ ಆಫ್ರಿಕಾ ಸಹಿತ ಜಗತ್ತಿನ ಕೆಲವೊಂದು ದೇಶಗಳಲ್ಲಿ ಕೊರೊನಾ ಹೊಸ ತಳಿ B.1.1.529 ಓಮ್ರಿಕಾನ್ ಕಂಡುಬಂದಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟುನಿಟ್ಟಿನ ಎಚ್ಚರ ವಹಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್​ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಈ ಕೆಲವು ದಿನಗಳಿಂದ ಸೌತ್ ಆಫ್ರಿಕಾ, ಹಾಂಕಾಂಗ್, ಬೋಟ್ಸ್ವಾನಾದಲ್ಲಿ ಹೊಸ ತಳಿ B.1.1.529 , ಓಮ್ರಿಕಾನ್​​ ಕಂಡುಬಂದಿದೆ. ಇದಕ್ಕೂ ಮೊದಲು ಕೊರೊನಾ ರೂಪಾಂತರಿ ಡೆಲ್ಟಾ 9 ತಿಂಗಳಿಂದ ಇತ್ತು. ಆದ್ರೆ ಇದು […]

ಕಾರ್ಕಳ: ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುತ್ತಿದ್ದ ವೇಳೆ ಆಯತಪ್ಪಿಬಿದ್ದು ಮಹಿಳೆ ಮೃತ್ಯು

ಕಾರ್ಕಳ: ಮನೆಯ ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ನಿಟ್ಟೆ ಗ್ರಾಮದ ಕಮಲ ಪ್ರಿಯಾ ಬಿ.(48) ಎಂದು ಗುರುತಿಸಲಾಗಿದೆ. ಇವರು ಕಳೆದ 10 ವರ್ಷಗಳಿಂದ ಕಾರ್ಕಳ ನಿಟ್ಟೆ ಗ್ರಾಮದ ನಿಟ್ಟೆ ಕಾಲೇಜಿನ ವಸತಿಗೃಹದ 5ನೇ ಮಹಡಿಯಲ್ಲಿ ಪತಿಯೊಂದಿಗೆ ವಾಸವಾಗಿದ್ದರು. ನ. 24ರಂದು ಸಂಜೆ 7.30ರ ಸುಮಾರಿಗೆ ಕಮಲ ಬಾಲ್ಕನಿಯಲ್ಲಿ ಸ್ಟೂಲ್ ನ ಮೇಲೆ ನಿಂತು ಬಟ್ಟೆ ಒಣಗಿಸುತ್ತಿದ್ದರು. ಈ ವೇಳೆ […]