ಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ

ಉಡುಪಿ: ಉಡುಪಿ ಹೊರವಲಯದ ಕೊಡವೂರು ಗ್ರಾಮದ ಪಾದರಾಯಣ ಆಚಾರ್ಯರ ಸ್ಮಾರಕಾರ್ಥ ತಂಗುದಾಣ ಮೂಡುಬೆಟ್ಟು ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಉಡುಪಿ ಸೆನ್ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದು, ಆತನಿಂದ ₹35 ಸಾವಿರೌಲ್ಯದ 1.204 ಕಿ.ಲೋ. ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಗೌತಮ (ಬುದ್ಧ) ಎಂದು ಗುರುತಿಸಲಾಗಿದೆ. ಈತ 2ನೇ ಆರೋಪಿ ಪ್ರಣಮ್ ಎಂಬಾತನಿಂದ ಗಾಂಜಾ ಪಡೆದು ಆತನ ಆದೇಶದ ಮೇರೆಗೆ ಮೂಡುಬೆಟ್ಟು ಬಸ್ ನಿಲ್ದಾಣದ ಬಳಿ […]

ಉಡುಪಿ: ಕೋವಿಡ್ ರೂಪಾಂತರಿ ತಳಿ “ಒಮಿಕ್ರಾನ್” ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ಕೆಲವು ದೇಶಗಳಲ್ಲಿ ಕೋವಿಡ್ ನ ಹೊಸ ರೂಪಾಂತರಿ ತಳಿ ಒಮಿಕ್ರಾನ್ ಪ್ರಸರಣದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದರಿಂದ ಸರ್ವೇಕ್ಷಣ ಚಟುವಟಿಕೆಗಳನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ದೈನಂದಿನ ಕೋವಿಡ್ ಪರೀಕ್ಷೆಯ ಗುರಿಯನ್ನು ಹಚ್ಚಿಸಿ ಕರ್ನಾಟಕ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ. ಅದರಂತೆ ಜಿಲ್ಲೆಯಲ್ಲಿ ಕೋವಿಡ್ ನ ಹೊಸ ರೂಪಾಂತರಿ ಪ್ರಸರಣ ತಡೆಗೆ ಅಗತ್ಯ ವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉಡುಪಿ ಡಿಸಿ […]

ಪ್ರೊ. ಬಿ. ಶಿವರಾಮ ಶೆಟ್ಟಿ, ಸೀತಾರಾಮ ಕಟೀಲ್ ಗೆ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ

ಉಡುಪಿ: ಯುವವಾಹಿನಿ ಉಡುಪಿ ಘಟಕದ ವತಿಯಿಂದ ನೀಡಲಾಗುವ ಬನ್ನಂಜೆ ಬಾಬು ಅಮೀನ್ ಜಾನಪದ ವಿದ್ವಾಂಸ ಪ್ರಶಸ್ತಿ ಅನ್ನು ಹಿರಿಯ ಜನಪದ ವಿದ್ವಾಂಸರೂ, ಮೈಸೂರು ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕರಾಗಿರುವ ಪ್ರೊ. ಬಿ.ಶಿವರಾಮ ಶೆಟ್ಟಿ ಅವರಿಗೆ ಹಾಗೂ ಯಕ್ಷಗಾನದ ಹಾಸ್ಯ ಕಲಾವಿದರೂ, ಹೂವಿನಕೋಲು, ಚಿಕ್ಕಮೇಳ ತಂಡಗಳ ನಿರ್ವಾಹಕರೂ ಆಗಿರುವ ಸೀತಾರಾಮ ಕಟೀಲ್ ಅವರಿಗೆ ಬನ್ನಂಜೆ ಬಾಬು ಅಮೀನ್ ಜಾನಪದ ಕಲಾವಿದ ಪ್ರಶಸ್ತಿಯನ್ನು ಚಿಟ್ಪಾಡಿಯ ಲಕ್ಷ್ಮೀ ಟ್ರೇಡ್ ಸೆಂಟರ್‌ನ ಲಕ್ಷ್ಮೀ ಸಭಾಭವನದಲ್ಲಿ ಭಾನುವಾರ […]

ಎಚ್‌ಎಎಲ್‌ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಎಚ್‌ಎಎಲ್‌ನಲ್ಲಿ ಖಾಲಿ ಇರುವ ಸ್ಟಾಪ್‌ ನರ್ಸ್‌, ವೈದ್ಯರು ಹಾಗೂ ಇತರೆ ಹುದ್ದೆಗಳ ನೇಮಕಾತಿಗಾಗಿ ಆರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳ ಸಂಖ್ಯೆ: 11 ವಿದ್ಯಾರ್ಹತೆ: ಮ್ಯಾನತೆ ಪಡೆದ ವಿಶ್ವವಿದ್ಯಾಲಯದಿಂದ ನರ್ಸಿಂಗ್‌, ಬಿಎಸ್‌.ಸಿ ನರ್ಸಿಂಗ್‌ ಹಾಗೂ ಹುದ್ದೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಹತೆಯನ್ನು ಹೊಂದಿರಬೇಕು. ವೇತನ: ಕೇಂದ್ರ ಸರ್ಕಾರದ ಅನುಸಾರ ವೇತನ ನೀಡಲಾಗುವುದು. ವಯಸ್ಸು: ಕನಿಷ್ಠ–18, ಗರಿಷ್ಠ –35 ವರ್ಷ (ಮೀಸಲಾತಿ ಅನ್ವಯ ಸಡಿಲಿಕೆ ಇರುತ್ತದೆ). ವಯೋಮಿತಿ:  ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ […]