ವಂಡ್ಸೆ: ಕೆಸರು ಗದ್ದೆಯಂತೆ ಆದ ರಸ್ತೆ; ಗ್ರಾಮಸ್ಥರ ಗೋಳು ಕೇಳುವವರಿಲ್ಲ.!

ವಂಡ್ಸೆ: ಕೆಸರು ಗದ್ದೆಯಂತೆ ಆದ ರಸ್ತೆ. ಈ‌ ರಸ್ತೆಯಲ್ಲಿ ಬಂದ್ರೆ ಕಾಲು ಹೂತು ಹೋಗುವುದಂತೂ ಗ್ಯಾರಂಟಿ. ನಿತ್ಯ ಕೆಸರು ತುಂಬಿಕೊಂಡಿರುವ ರಸ್ತೆಯಲ್ಲೇ ಓಡಾಡಬೇಕಾದ ಅನಿವಾರ್ಯತೆ ಇಲ್ಲಿನ ಗ್ರಾಮಸ್ಥರದ್ದು. ಹೌದು, ಇದು ವಂಡ್ಸೆ ಪೇಟೆಯ ಅನತಿ ದೂರದಲ್ಲಿರುವ ಕಾನಮ್ಮ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಅಡಿಕೆಕೋಡ್ಲು ಸಂಧಿಸುವ ರಸ್ತೆಯ ದುಸ್ಥಿತಿ. ಈ ಸಮಸ್ಯೆ ಇಂದು ಮೊನ್ನೆಯದಲ್ಲ, ಕಳೆದ ಹತ್ತು ವರ್ಷಗಳಿಂದ ಇಲ್ಲಿನ ಜನರು ಅನುಭವಿಸುತ್ತಿರುವ ತೊಂದರೆ. ಆದ್ರೆ ಈ ಸಮಸ್ಯೆಗೆ ಈವರೆಗೂ‌ ಮುಕ್ತಿ ಸಿಕ್ಕಿಲ್ಲ. ಅಂದಹಾಗೆ ಇದು ಪಂಚಾಯತ್ ಅಧ್ಯಕ್ಷರ […]

ಭಾರತೀಯ ನೌಕಾಪಡೆ: 300 ಹುದ್ದೆಗಳಿಗೆ ಅರ್ಜಿ‌ ಆಹ್ವಾನ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸಹಾಯಕ ಕಮಾಂಡರ್‌ ( ತಾಂತ್ರಿಕ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆ: 300 ಹುದ್ದೆಗಳು ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ/ಪಿಯುಸಿ/ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ:  ಹುದ್ದೆಗಳಿಗೆ ಅನುಸಾರ ಭಾರತೀಯ ನೌಕಪಡೆ ಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ನೋಡುವುದು. ವೇತನ ಶ್ರೇಣಿ: ತರಬೇತಿ ಸಮಯದಲ್ಲಿ ಭತ್ಯೆ ನೀಡಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಬಳಿಕ ₹ 21,700- ₹69,100 ವೇತನ ನಿಡಲಾಗುವುದು. ನೇಮಕಾತಿ […]

ಕುಂದಾಪುರ: ಆಟೊ ನಿಲ್ದಾಣಕ್ಕೆ ನುಗ್ಗಿದ ಟಿಪ್ಪರ್; ನಾಲ್ಕು ಆಟೊ ಜಖಂ

ಕುಂದಾಪುರ: ಟಿಪ್ಪರ್ ಲಾರಿಯೊಂದು ಆಟೊ ನಿಲ್ದಾಣಕ್ಕೆ ನುಗ್ಗಿದ ಪರಿಣಾಮ ನಾಲ್ಕು ಆಟೊಗಳು ಜಖಂಗೊಂಡ ಘಟನೆ ಇಂದು ಮಧ್ಯಾಹ್ನ ಕುಂದಾಪುರ ತ್ರಾಸಿ ಸಮೀಪದ ಮುಳ್ಳಿಕಟ್ಟೆ ಕ್ರಾಸ್ ಬಳಿ ನಡೆದಿದೆ. ಟಿಪ್ಪರ್ ಚಾಲಕ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದನು.‌ ಚಾಲಕ ಮುಳ್ಳಿಕಟ್ಟೆ ಕ್ರಾಸ್ ಬಳಿ ತಿರುವು ತೆಗೆದುಕೊಂಡ ವೇಳೆ ನಿಯಂತ್ರಣ ತಪ್ಪಿ ಟಿಪ್ಪರ್ ಬದಿಯಲ್ಲಿರುವ ಆಟೋ ಸ್ಟ್ಯಾಂಡ್ ಒಳಕ್ಕೆ ನುಗ್ಗಿದೆ. ಪರಿಣಾಮ ಪಾರ್ಕಿಂಗ್ ನಲ್ಲಿದ್ದ 4 ಆಟೋಗಳು ನಜ್ಜುಗುಜ್ಜಾಗಿವೆ. ಆಟೋ ಚಾಲಕರು ಅಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಟಿಪ್ಪರ್ ಚಾಲಕನ […]

ಉಡುಪಿ: ಕಳ್ಳತನ ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ, ₹10 ಸಾವಿರ ದಂಡ

ಉಡುಪಿ: ಏಳು ವರ್ಷಗಳ ಹಿಂದೆ ಕೆಮ್ಮಣ್ಣುವಿನಲ್ಲಿ ಎಲೆಕ್ಟ್ರಾನಿಕ್ ವಸ್ತು ಹಾಗೂ ನಗದು ಕಳವು ಮಾಡಿದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2014 ಫೆಬ್ರವರಿ 23ರಂದು ಮಧ್ಯರಾತ್ರಿ ಉಡುಪಿ ತಾಲೂಕು ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ನಿವಾಸಿ ಗಿರೀಶ್ ಎಂಬಾತನು ಪಡುತೋನ್ಸೆ ಗ್ರಾಮದ ಕೆಮ್ಮಣ್ಣುವಿನ ಕಾವ್ಯಾ ಅವರ ಮನೆಯಲ್ಲಿ ಲ್ಯಾಪ್‌ಟಾಪ್, ಮೊಬೈಲ್ ಹಾಗೂ 700 ರೂ. ನಗದು ಕಳವು ಮಾಡಿದ್ದನು. ಈ‌ ಬಗ್ಗೆ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ […]

ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಮಹಾಸಭೆ: ಸದಸ್ಯರಿಗೆ ಶೇ. 15ರಷ್ಟು ಡಿವಿಡೆಂಡ್ ಘೋಷಣೆ

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ 2020-21ನೇ ಸಾಲಿನ ವಾರ್ಷಿಕ ಸಾಮಾನ್ಯಸಭೆ ಸಂಘದ ಅಧ್ಯಕ್ಷ ಸಂಜೀವ ಕಾಂಚನ್ ಅಧ್ಯಕ್ಷತೆಯಲ್ಲಿ ನಗರದ ಅಮ್ಮಣ್ಣಿರಾಮಣ್ಣ ಸಭಾಭವನದಲ್ಲಿ ನಡೆಯಿತು. ವಾರ್ಷಿಕ ಮಹಾಸಭೆ ಉದ್ಘಾಟಿಸಿ ಸಂಜೀವ ಕಾಂಚನ್ ಮಾತನಾಡಿ, ಬಡಗಬೆಟ್ಟು ಸೊಸೈಟಿ ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿ ರಾಜ್ಯದಲ್ಲಿಯೇ ಮಾದರಿ ಸಹಕಾರಿ ಸಂಘವಾಗಿ ರೂಪುಗೊಂಡಿದೆ ಎಂದರು. ₹9.12 ಕೋ. ಲಾಭ: ಜಯಕರ ಶೆಟ್ಟಿ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ವಾರ್ಷಿಕ ವರದಿ ಮತ್ತು ಪರಿಶೋಧಿತ ಲೆಕ್ಕಪತ್ರ […]