ಉಡುಪಿ: ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್; ದಿನಾಂಕ ಪ್ರಕಟ

ಉಡುಪಿ: 2019-20ನೇ ಸಾಲಿನಲ್ಲಿ ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆಯನ್ನು ಶೇ. 7ಕ್ಕೆ ಮಿತಿಗೊಳಿಸಿ ಗಣಕೀಕೃತ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸುವ ಕುರಿತು ಮಾರ್ಗಸೂಚಿ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್‌ಗೆ ಸಂಬಂಧಿಸಿದಂತೆ ಡಿಸೆಂಬರ್ 2 ಮತ್ತು 3 ರಂದು ಬೆಳಿಗ್ಗೆ 10 ರಿಂದ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸವ್ಯಸಾಚಿ ಸಭಾಂಗಣದಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆಯು ನಡೆಯಲಿದೆ. ಅಂತಿಮ ಆದ್ಯತಾ ಪಟ್ಟಿಯಲ್ಲಿರುವ ಎಲ್ಲಾ ಶಿಕ್ಷಕರು ನಿಗದಿಪಡಿಸಿದ ಸಮಯದಲ್ಲಿ ಕೌನ್ಸಿಲಿಂಗ್‌ಗೆ ಹಾಜರಾಗುವಂತೆ ಹಾಗೂ ಆದ್ಯತೆ ಮೇರೆಗೆ ವರ್ಗಾವಣೆ […]

ಅಕ್ರಮ ಗೋಸಾಗಾಟ ತಡೆದವರ ಮೇಲೆ ವಾಹನ ಚಲಾಯಿಸಿದ ದುರ್ಘಟನೆಗೆ ಪೇಜಾವರ ಶ್ರೀ ಖಂಡನೆ

ಉಡುಪಿ: ತೀರ್ಥಹಳ್ಳಿಯ ಬಿಜ್ಜವಳ್ಳಿ ಸಮೀಪ ಅಕ್ರಮ ಗೋಸಾಗಾಟವನ್ನು ತಡೆಯಲೆತ್ನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತ ರ ಮೇಲೆ ವಾಹನ ಚಲಾಯಿಸಿ ಮಾರಣಾಂತಿಕ ದುಷ್ಕೃತ್ಯ ನಡೆಸಿರುವ ಘಟನೆಗೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ನಿಜಕ್ಕೂ ಖಂಡನೀಯ. ಗೋರಕ್ಷಣೆಯ ಕಾರ್ಯಕ್ಕೆ ಈ ರೀತಿ ಸವಾಲೆಸೆಯುವ ದುರುಳರ ವಿರುದ್ಧ ಸರ್ಕಾರ ಗಂಭೀರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಗೋಹತ್ಯಾನಿಷೇಧ ಕಾನೂನು ಕೇವಲ ಜಾರಿಗೆ ತಂದು ಪ್ರಯೋಜನವಿಲ್ಲ. ಅದರ ಪರಿಣಾಮಕಾರಿ ಅನುಷ್ಠಾನ ಆಗಬೇಕು. ಸರ್ಕಾರಗಳು ಈ ಬಗ್ಗೆ ಪೂರ್ಣ ಇಚ್ಛಾಶಕ್ತಿ […]

ನಾಳೆ (ಡಿ. 2) ಕರಂಬಳ್ಳಿಯಲ್ಲಿ ತೆಪ್ಪೋತ್ಸವ ಸಹಿತ ದೀಪೋತ್ಸವ

ಉಡುಪಿ: ಕಾರ್ತಿಕ ಮಾಸದ ಪ್ರಯುಕ್ತ ಉಡುಪಿ ಕರಂಬಳ್ಳಿ ಶ್ರೀ ವೇಂಕಟರಮಣ ದೇವಸ್ಥಾನದಲ್ಲಿ ನಾಳೆ ಡಿ. 2ರ ಗುರುವಾರದಂದು ಸಂಜೆ 7ಕ್ಕೆ ತೆಪ್ಪೋತ್ಸವ ಸಹಿತ ದೀಪೋತ್ಸವ ನಡೆಯಲಿದೆ ಎಂದು ಆಡಳಿತ ಮೊಕ್ತೇಸರ, ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.

ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್: ಶಾಸಕನ ಆಪ್ತ, ಕಾಂಗ್ರೆಸ್ ಮುಖಂಡನ ಕೈವಾಡದ ಶಂಕೆ?

ಶಾಸಕ ವಿಶ್ವನಾಥ್ ಬೆಂಗಳೂರು: ಯಲಹಂಕ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರ ಹತ್ಯೆಗೆ ಸ್ಕೆಚ್ ಹಾಕಲಾಗಿತ್ತು ಎಂಬ ಸುದ್ದಿ ಹೊರಬಿದ್ದಿದ್ದು, ಈ ಕುರಿತಾದ ವಿಡಿಯೋವೊಂದು ಹೊರಬಂದಿದೆ. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಶ್ವಾನಾಥ್ ಎದುರು ಸ್ಪರ್ಧಿಸಿ ಸೋತಿದ್ದ ಕಾಂಗ್ರೆಸ್ ಮುಖಂಡ ಎಂ.ಎನ್. ಗೋಪಾಲಕೃಷ್ಣ ಎಂಬಾತನೇ ಹತ್ಯೆಗೆ ಸುಫಾರಿ ನೀಡಿದ್ದನು ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಚರ್ಚೆ ಮಾಡಿರುವ ವಿಡಿಯೋ ಸಿಸಿಬಿ ತಂಡಕ್ಕೆ ಸಿಕ್ಕಿದ್ದು, ಇದರ ಆಧಾರದ ಮೇಲೆ ತಡರಾತ್ರಿವರೆಗೂ ಸಿಸಿಬಿಯಿಂದ ಗೋಪಾಲಕೃಷ್ಣ ಅವರನ್ನು […]

ಮಣಿಪಾಲ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋರಕ್ಷಕರ ಆರೋಗ್ಯ ವಿಚಾರಿಸಿದ ಗೃಹ ಸಚಿವ

ಮಣಿಪಾಲ: ಗೋಕಳ್ಳರು ವಾಹನ ಹರಿಸಿದ ಪರಿಣಾಮ ಗಂಭೀರ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಗೋರಕ್ಷಕರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಭೇಟಿ ಮಾಡಿ, ಅವರ ಆರೋಗ್ಯ ವಿಚಾರಿಸಿದರು. ಬಳಿಕ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ತಿಳಿಸಿದರು. ಏನಿದು ಪ್ರಕರಣ?: ಮಂಗಳವಾರ ತೀರ್ಥಹಳ್ಳಿಯ ಮೇಳೆಗೆ ಸಮೀಪ ಕೂಳೂರು ಮಾರ್ಗದಲ್ಲಿ ಗೋಕಳ್ಳರು, ಪಿಕ್ ಅಪ್ ವಾಹನದಲ್ಲಿ‌ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದರು. ಇದನ್ನು ತಡೆಯಲು ಬಂದ ಕಿರಣ್ (23) […]