ಉಡುಪಿ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಉಡುಪಿ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://ambigaradevelopment.karnataka.gov.inಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ : 0820-2574882 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ವಿಶ್ವಕರ್ಮ ಅಭಿವೃದ್ಧಿ ನಿಗಮ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶ್ವಕರ್ಮ ಸಮುದಾಯಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kvcdcl.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574 882 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ […]

ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ನಿಯಂತ್ರಣಕ್ಕೆ ಸನ್ನದ್ಧರಾಗಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್

ಉಡುಪಿ: ಕೋವಿಡ್ ಸೋಂಕಿನ ರೂಪಾಂತರ ವೈರಸ್ ಆದ ಓಮಿಕ್ರಾನ್ ಹರಡುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಈ ಹಿಂದೆ ಕೋವಿಡ್ ಅಲೆಗಳನ್ನು ನಿಯಂತ್ರಿಸಲು ರಚಿಸಿರುವ ಸಮಿತಿಗಳನ್ನು ಪುನಾರಾರಂಭಿಸಿ, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ಬುಧವಾರ ಸಂಜೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ, ಜಿಲ್ಲೆಯಲ್ಲಿ ಓಮಿಕ್ರನ್ ವೈರಸ್ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ನಡೆದ ವರ್ಚುವಲ್ ಮೀಟಿಂಗ್‌ನ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ವಿಶ್ವದ 11 ದೇಶಗಳಲ್ಲಿ ಹೊಸ ರೂಪಾಂತರಿ ತಳಿಯಾದ ಓಮಿಕ್ರಾನ್ […]

ಭಾರತಕ್ಕೂ ಕಾಲಿಟ್ಟ ಓಮೈಕ್ರಾನ್‌ ವೈರಸ್; ಕರ್ನಾಟಕದ ಇಬ್ಬರಲ್ಲಿ ಪತ್ತೆ

ಬೆಂಗಳೂರು: ಕೋವಿಡ್ ರೂಪಾಂತರಿ ತಳಿಯಾದ ಓಮೈಕ್ರಾನ್‌ ಭಾರತಕ್ಕೂ ಕಾಲಿಟ್ಟಿದೆ. ಕರ್ನಾಟಕ ರಾಜ್ಯದ ಇಬ್ಬರಲ್ಲಿ ಓಮೈಕ್ರಾನ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇಬ್ಬರಲ್ಲಿ ಕೋವಿಡ್ ಸೋಂಕು ದೃಢಪಟ್ಟಿತು. ಆದರೆ, ವೈರಸ್ ಬಗ್ಗೆ ಗೊಂದಲ ಇತ್ತು. ಐಸಿಎಂಆರ್‌ನಲ್ಲಿ ತಪಾಸಣೆ ಮಾಡಿದಾಗ ಅದು ಕೊರೊನಾವೈರಸ್‌ನ ಹೊಸ ರೂಪಾಂತರವಾದ ಓಮೈಕ್ರಾನ್ ಎಂಬುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 66 ವರ್ಷದ ಒಬ್ಬ ವೃದ್ದನಲ್ಲಿ ಹಾಗೂ 44 ವರ್ಷದ ವ್ಯಕ್ತಿಯಲ್ಲಿ ಓಮೈಕ್ರಾನ್ ಇರುವುದು ಪತ್ತೆಯಾಗಿದೆ. ಈ ಇಬ್ಬರೂ ಕರ್ನಾಟಕದವರು ಎಂಬುದು […]

ಉಡುಪಿ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2022 ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.karnataka.gov.in/dbcdc ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574882 ಅನ್ನು […]