ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ

ಉಡುಪಿ: ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವು ಡಿಸೆಂಬರ್ 4 ರಿಂದ ಡಿಸೆಂಬರ್ 12 ರವರೆಗೆ ನಡೆಯುತ್ತಿದೆ. ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹಗಳು ಪ್ರದರ್ಶನದಲ್ಲಿವೆ. ಈ ಪ್ರದರ್ಶನವನ್ನು ಶ್ರೀಮತಿ ವಿದ್ಯಾ ಸರಸ್ವತಿ,ಶ್ರೀಮತಿ ಶಾಂಭವಿ ಭಂಡಾರ್ಕರ್,ಶ್ರೀಮತಿ ಡಾ.ಚರಿಷ್ಮಾ ಶೆಟ್ಟಿ ಅನಾವರಣಗೊಳಿಸಲಿದ್ದಾರೆ. ‘ ಮೈನ್’ನಲ್ಲಿ ವಜ್ರಾಭರಣಗಳ ಅಭೂತ ಪೂರ್ವ ಸಂಗ್ರಹ, ನವವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣಿಕೃತ ವಜ್ರಾಭಾರಣಗಳಿದ್ದು […]
ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಗುರಿ: ಕುಯಿಲಾಡಿ ಸುರೇಶ್ ನಾಯಕ್

ಕಾಪು: ಡಿ.27ರಂದು ನಡೆಯಲಿರುವ ಕಾಪು ಪುರಸಭೆಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನೂ ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಸಂಘಟಿತ ಪ್ರಯತ್ನದ ಮೂಲಕ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಕಾಪು ಪುರಸಭಾ ಚುನಾವಣೆಯ ಪೂರ್ವಭಾವಿಯಾಗಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಯೋಜನೆಗಳು, ಕಳೆದ ಮೂರೂವರೆ ವರ್ಷದ […]
ಮಣಿಪಾಲ ಕೆಎಂಸಿಯಲ್ಲಿ ಯಶಸ್ವಿ ಮಕ್ಕಳ ಸಂಕೀರ್ಣ ಹೃದಯ ಶಸ್ತ್ರಚಿಕಿತ್ಸೆ

ಮಣಿಪಾಲ: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯ ವೈದ್ಯರು ನಡೆಸಿದ ಮಕ್ಕಳ ಸಂಕೀರ್ಣ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಆಸ್ಪತ್ರೆಯ ಹೃದಯ, ರಕ್ತನಾಳ ಮತ್ತು ಶ್ವಾಸಕೋಶ ಶಸ್ತ್ರಚಿಕಿತ್ಸೆ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಗುರುಪ್ರಸಾದ್ ರೈ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ವಿದೇಶದಲ್ಲಿ ನೆಲೆಸಿರುವ ಭಾರತದ ಮೂಲದ ಯುವ ದಂಪತಿಗಳಿಗೆ ನವಜಾತ ಶಿಶು ಹುಟ್ಟುವ ಖುಷಿ ಒಂದು ಕಡೆಯಾದರೆ, ಅದೇ ಶಿಶು ಬದುಕುಳಿಯಲು ಹುಟ್ಟಿದ ಮೊದಲ ಕೆಲವು ದಿನಗಳಲ್ಲೇ ಸಂಕೀರ್ಣವಾದ ಹೃದಯ ಶಸ್ತ್ರಚಿಕಿತ್ಸೆಯ ಅಗತ್ಯವಿರುತ್ತದೆ ಎಂದು ಗರ್ಭಾವಸ್ಥೆಯ ಅವಧಿಯಲ್ಲಿ ದೃಢಪಡಿತ್ತು. […]
ಉಡುಪಿ: ಕೋವಿಡ್ ನಿಯಮ ಪಾಲಿಸದಿದ್ದಲ್ಲಿ ಕಠಿಣ ಕ್ರಮ: ಪೌರಾಯುಕ್ತ

ಉಡುಪಿ: ಕೋವಿಡ್–19 ಸೋಂಕು ಹರಡುವುದನ್ನು ತಡೆಗಟ್ಟುವಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ಕೋವಿಡ್ ನಿಯಾಮವಳಿಗಳನ್ನು ಪಾಲಿಸದೇ ಇರುವುದು ಕಂಡುಬಂದಿದ್ದು, ಸಾರ್ವಜನಿಕರು ಕಟ್ಟುನಿಟ್ಟಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿರುತ್ತದೆ. ವಾಣಿಜ್ಯ ಮಳಿಗೆ, ಮಾಲ್ ಅಥವಾ ಇನ್ನಿತರ ಉದ್ದಿಮೆಗಳಲ್ಲಿ ಸಾನಿಟೈಸರ್ ಬಳಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಪ್ರವೇಶ ದ್ವಾರದಲ್ಲಿ ತಾಪಮಾನ ಪರಿಶೀಲಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕು. ರೋಗ ಲಕ್ಷಣ ಇರುವವರಿಗೆ ಪ್ರವೇಶ ನೀಡಬಾರದು. ತಪ್ಪಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51 ರಿಂದ 60, ಭಾರತ […]
ಒಮೈಕ್ರಾನ್ ಭೀತಿ: ಮದುವೆ, ಸಮಾರಂಭಗಳಿಗೆ ಹೊಸ ರೂಲ್ಸ್..!!

ಬೆಂಗಳೂರು: ಒಮೈಕ್ರಾನ್ ವೈರಸ್ ಭೀತಿ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿ ಪ್ರಕಟಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತಾಡಿದ ಸಚಿವ ಆರ್. ಅಶೋಕ್, ಶಾಲೆಗೆ ಮಕ್ಕಳನ್ನು ಕಳಿಸಲು ಪೋಷಕರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡಿರಬೇಕು. ಹಾಗೆ, ಇನ್ಮುಂದೆ ಶಾಲೆಗಳಲ್ಲಿ ಯಾವುದೇ ಸಭೆ- ಸಮಾರಂಭ ನಡೆಸುವಂತಿಲ್ಲ ಎಂದು ಸೂಚನೆ ನೀಡಿದರು. ಸಿನಿಮಾ, ಮಾಲ್ ಗಳಲ್ಲಿ ವ್ಯಾಕ್ಸಿನೇಷನ್ ಆದವರಿಗೆ ಮಾತ್ರ ಅವಕಾಶ. ಚಿತ್ರಮಂದಿರಕ್ಕೆ ಪ್ರವೇಶಿಸಲು ಲಸಿಕೆ ಕಡ್ಡಾಯ ಎಂದರು. ಮದುವೆ, ಸಮಾರಂಭಗಳಿಗೆ ಹೊಸ […]