ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆ: ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ

ಉಡುಪಿ: ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆಯೋಜಿಸಿರುವ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶನಿವಾರ ಚಾಲನೆ ನೀಡಲಾಯಿತು. ಈ ಪ್ರದರ್ಶನದಲ್ಲಿ ಉಡುಪಿಯ ವೈದ್ಯೆ ಡಾ.ಚರಿಷ್ಮಾ ಶೆಟ್ಟಿ, ಉಡುಪಿಯ ಚಿಪ್ಸಿ ಸಿಇಓ ಶಾಂಭವಿ ಭಂಡಾರ್ಕರ್, ವಿದ್ಯಾ ಸರಸ್ವತಿ ಚಿನ್ನ ಮತ್ತು ವಜ್ರಾ ಭರಣಗಳ ಸಂಗ್ರಹಗಳ ಪ್ರದರ್ಶನವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಗ್ಲೋಬಲ್ ಮಿಸ್ ಇಂಟರ್‌ನ್ಯಾಶನಲ್ ಇಂಡಿಯಾ ಯುನಿವರ್ಸಿ ಸೆಂಕೆಂಡ್ ರನ್ನರ್ ಸ್ಪೂರ್ತಿ ಡಿ.ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಉಡುಪಿ ಶಾಖಾ ಮುಖ್ಯಸ್ಥ […]

ಪೊದೆಗೆ ಮಗು ಎಸೆದ ಪ್ರಕರಣ: ಮಹಿಳೆ ಸಹಿತ ಇಬ್ಬರ ಬಂಧನ

ಕುಂದಾಪುರ: ಪೊದೆಗೆ ನವಜಾತ ಶಿಶುವನ್ನು ಎಸೆದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರನ್ನು ಅಮಾಸೆಬೈಲು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತರನ್ನು ಕೊಲ್ಲೂರು ಸಮೀಪದ ಜಡ್ಕಲ್-ಮುದೂರಿನ ರಾಧಾ(40) ಹಾಗೂ ಸತೀಶ್ (43) ಎಂದು ಗುರುತಿಸಲಾಗಿದೆ. ಇವರಿಬ್ಬರು ಎಸ್ಟೇಟ್ವೊಂದರಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡಿಕೊಂಡಿದ್ದು, ಇಬ್ಬರಿಗೂ ಬೇರೆ ಬೇರೆ ವಿವಾಹವಾಗಿದೆ. ಆದರೆ ತಮ್ಮ ಪತಿ ಪತ್ನಿಯನ್ನು ತೊರೆದಿರುವ ಇವರಿಬ್ಬರು ಕಳೆದ ಒಂದು ವರ್ಷದಿಂದ ಅನ್ಯೋನ್ಯವಾಗಿದ್ದರು. ಈ ನಡುವೆ ಅಕ್ರಮ ಸಂಬಂಧದಿಂದ ಗರ್ಭಿಣಿಯಾಗಿದ್ದ ರಾಧಾ, ಹಾಲಾಡಿ ಬಳಿಯ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ […]

ಕುರಿ, ಮೇಕೆ ಘಟಕಗಳ ಅನುಷ್ಠಾನಕ್ಕೆ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ: ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕುರಿ, ಮೇಕೆ ಘಟಕಗಳ ಅನುದಾನಕ್ಕಾಗಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಸಾಮಾನ್ಯ ವರ್ಗದ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿಗಳು ಪಶು ಆಸ್ಪತ್ರೆ ಉಡುಪಿ ಮೊ.ನಂ: 9448134852, ಕಾಪು ಮೊ.ನಂ: 9448163237, ಬ್ರಹ್ಮಾವರ ಮೊ.ನಂ: 9448409855, ಕುಂದಾಪುರ […]

ಉಡುಪಿ: ಹೈರಿಸ್ಕ್ ದೇಶದಿಂದ ಬಂದಿರುವ ಮೂವರಿಗೆ ಹೋಮ್ ಕ್ವಾರಂಟೈನ್‌: ಡಿಸಿ ಕೂರ್ಮಾರಾವ್

ಉಡುಪಿ: ಉಡುಪಿ ಜಿಲ್ಲೆಗೆ ಕಳೆದ ಐದು ದಿನಗಳಲ್ಲಿ 91 ಮಂದಿ ವಿದೇಶದಿಂದ ಆಗಮಿಸಿದ್ದು, ಈ ಪೈಕಿ ಮೂರು ಮಂದಿ ಹೈರಿಸ್ಕ್ ದೇಶದಿಂದ ಬಂದಿದ್ದಾರೆ. ಇವರೆಲ್ಲರ ವರದಿ ನೆಗೆಟಿವ್ ಬಂದಿದೆ. ಆದರೂ ಹೈರಿಸ್ಕ್ ದೇಶದಿಂದ ಬಂದಿರುವ ಮೂವರನ್ನು ಹೋಮ್ ಕ್ವಾರಂಟೈನ್‌ ನಲ್ಲಿ ಇರಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು. ಒಂದು ವಾರದಲ್ಲಿ ಜಿಲ್ಲೆಗೆ ಕೇರಳದಿಂದ 69 ಮಂದಿ ಬಂದಿದ್ದು, ಅದರಲ್ಲಿ 9 […]

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಕಲ ಮುನ್ನೆಚ್ಚರಿಕೆ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕಮ್ರಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೋವಿಡ್ ಸೋಂಕು ಹರಡುವುದನ್ನು ತಡೆಯಲು, ಶೀಘ್ರದಲ್ಲಿ ಕೋವಿಡ್ ಪರೀಕ್ಷೆ ನಡೆಸಬೇಕಾಗಿದ್ದು, ಕಳೆದ ವಾರದಲ್ಲಿ ಜಿಲ್ಲೆಯಲ್ಲಿ ಪ್ರತಿದಿನ 2312 ರಂತೆ 16,187 ಪರೀಕ್ಷೆ ನಡೆಸಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಪ್ರತಿದಿನ 5000 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯ ಪ್ರಸ್ತುತ ಪಾಸಿಟಿವಿಟಿ ದರ 0.4 ಇದ್ದು, ಸಕ್ರಿಯ ಪ್ರಕರಣಗಳು 88 […]