ಉಡುಪಿ ಗ್ರಾಮೀಣ ಬಂಟರ ಸಂಘದಿಂದ ಅಂಡಾರು ದೇವಿಪ್ರಸಾದ್ ಶೆಟ್ಟಿಗೆ ಸನ್ಮಾನ

ಉಡುಪಿ: ಉಡುಪಿ ಗ್ರಾಮೀಣ ಭಂಟರ ಸಂಘ/ ಟ್ರಸ್ಟ್ ನ ವತಿಯಿಂದ ನಡೆದ ಮಹಿಳೆಯರಿಗಾಗಿ ಒಂದು ದಿನದ ಉದ್ಯಮಶೀಲತ ಪ್ರೇರಣಾ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಉಡುಪಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಸಂಘದ ವತಿಯಿಂದ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು ಅಭಿನಂದಿಸಿದರು. ಟ್ರಸ್ಟನ ಅಧ್ಯಕ್ಷ ಅಶೋಕ್ ಶೆಟ್ಟಿ, ಸಂಘದ ಅಧ್ಯಕ್ಷ ಸಖರಾಮ ಶೆಟ್ಟಿ, ಹಿರಿಯರಾದ ಡಾ. ಎಚ್.ಬಿ. ಶೆಟ್ಟಿ, ಡಾ. ರವಿರಾಜ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ […]

ಕನ್ನಡ ಚಿತ್ರರಂಗದ ಹಿರಿಯ ನಟ ಎಸ್. ಶಿವರಾಂ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಸ್. ಶಿವರಾಂ (83) ಅವರು ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಪ್ರಶಾಂತ್ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ನಾಲ್ಕು ದಿನಗಳ ಹಿಂದೆ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡುತ್ತಿದ್ದಾಗ ಶಿವರಾಂ ಕುಸಿದುಬಿದ್ದಿದ್ದರು. ಇದರಿಂದ ಅವರ ತಲೆಗೆ ತೀವ್ರವಾದ ಪೆಟ್ಟಾಗಿತ್ತು. ಬೆಂಗಳೂರಿನ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. 1938 ಜನವರಿ 28ರಂದು ಬೆಂಗಳೂರಿನ ಚೂಡಸಂದ್ರದಲ್ಲಿ ಜನಿಸಿದ್ದ ಶಿವರಾಂ, ಕನ್ನಡ ಚಿತ್ರರಂಗದಲ್ಲಿ ಪೋಷಕ, ಹಾಸ್ಯ ಪಾತ್ರದಲ್ಲಿ ಸುಮಾರು 6 […]

ಇನ್ನಿಂಗ್ಸ್​ವೊಂದರಲ್ಲಿ 10 ವಿಕೆಟ್​ ಪಡೆದು ಕುಂಬ್ಳೆ ದಾಖಲೆ ಸರಿಗಟ್ಟಿದ ಅಜಾಜ್ ಪಟೇಲ್

ಮುಂಬೈ: ಮುಂಬೈ ಟೆಸ್ಟ್​ ಪಂದ್ಯದಲ್ಲಿ ನ್ಯೂಜಿಲೆಂಡ್ ಎಡಗೈ ಸ್ಪಿನ್ನರ್, ಭಾರತ ಮೂಲದ ಅಜಾಜ್ ಪಟೇಲ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇನ್ನಿಂಗ್ಸ್​ವೊಂದರಲ್ಲಿ ಎಲ್ಲಾ 10 ವಿಕೆಟ್​ಗಳನ್ನು ಪಟೇಲ್ ಕಬಳಿಸುವ ಮೂಲಕ ಭಾರತದ ಅನಿಲ್ ಕುಂಬ್ಳೆ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಹಿಂದೆ 1956ರಲ್ಲಿ ಇಂಗ್ಲೆಂಡ್​ನ ಜಿಮ್ ಲೇಕರ್, ಭಾರತದ ಅನಿಲ್ ಕುಂಬ್ಳೆ 1999ರಲ್ಲಿ ಈ ಸಾಧನೆ ಮಾಡಿದ್ದರು. ಇದೀಗ ಕಿವೀಸ್ ಎಡಗೈ ಸ್ಪಿನ್ನರ್ ಅಜಾಜ್ ಪಟೇಲ್, ಇನ್ನಿಂಗ್ಸ್​ವೊಂದರಲ್ಲಿ 10 ವಿಕೆಟ್ ಪಡೆಯುವುದರೊಂದಿಗೆ ಈ ಸಾಧನೆ ಮಾಡಿದ ವಿಶ್ವದ 3ನೇ ಬೌಲರ್ […]

ಬ್ರಹ್ಮಾವರ: ಹಂದಾಡಿ ಗ್ರಾಮದ ನಿವಾಸಿ ನಾಪತ್ತೆ

ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಹಂದಾಡಿ ಗ್ರಾಮದ ಹೊಸಹಿತ್ಲು ನಿವಾಸಿ ರಾಜು ಪೂಜಾರಿ (49) ಡಿ.2ರ ಮಧ್ಯಾಹ್ನ 3ಗಂಟೆಗೆ ಮನೆಯಿಂದ ಹೊರಗೆ ಹೋದವರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಯುಟಿಷಿಯನ್ ಆತ್ಮಹತ್ಯೆಗೆ ಶರಣು

ಉಡುಪಿ ಎಕ್ಸ್‌ಪ್ರೆಸ್‌ ವರದಿ: ಬ್ಯೂಟಿ ಪಾರ್ಲರ್ ವೊಂದರಲ್ಲಿ ಬ್ಯುಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಆಕಾಶಭವನ ಸಮೀಪ ನಡೆದಿದೆ. ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿಯಾದ ಶಿಫಾಲಿ ( 22 ) ಅತ್ಮಹತ್ಯೆಗೆ ಶರಣಾದ ಬ್ಯುಟಿಷಿಯನ್. ಈಕೆ ಬ್ಯೂಟಿ ಪಾರ್ಲರ್ ವೊಂದರಲ್ಲಿ ಬ್ಯುಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದಳು. ಶುಕ್ರವಾರ ಸಂಜೆ ಎಂದಿನಂತೆ ಮನೆಗೆ ಆಗಮಿಸಿದ್ದಳು. ನಂತರ ಮನೆಯಲ್ಲಿ ಕೋಣೆಗೆ ತೆರಳಿ, ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. […]