ಕಾಪು ಪುರಸಭೆ ಚುನಾವಣೆಯ ದಿನಾಂಕ ಪ್ರಕಟ
ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಕಾಪು ಪುರಸಭೆಯ 23 ವಾರ್ಡುಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ನಿಗಧದಿಪಡಿಸಿ, ಅಧಿಸೂಚನೆ ಹೊರಡಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ನಾಮಪತ್ರಗಳನ್ನು ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಡಿ. 16 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಡಿ. 18 ಕೊನೆಯ ದಿನವಾಗಿದ್ದು, ಡಿ. 27 ರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. […]
ಭಾರತ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ
ಬೆಂಗಳೂರು: ಟೀಮ್ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಭಾರತ ಏಕದಿನ ಕ್ರಿಕೆಟ್ ತಂಡಕ್ಕೆ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ಬುಧವಾರ ಈ ಕುರಿತು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟ್ವೀಟ್ ಮಾಡಿದೆ. ಆ ಮೂಲಕ ರೋಹಿತ್ ಶರ್ಮಾ ಟಿ20 ಮತ್ತು ಏಕದಿನ ತಂಡಗಳ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈಚೆಗೆ ವಿರಾಟ್ ಕೊಹ್ಲಿ ಅವರು ಭಾರತ ಟಿ20 ತಂಡದ ನಾಯಕತ್ವ ತೊರೆದಿದ್ದರು. ಆದರೆ, ಏಕದಿನ ಕ್ರಿಕೆಟ್ ತಂಡದ ನಾಯಕತ್ವ ಬಿಡುವ ಬಗ್ಗೆ ಇದುವರೆಗೂ ಅವರು ಪ್ರಸ್ತಾಪ ಮಾಡಿರಲಿಲ್ಲ. […]
ಸೇನಾ ಹೆಲಿಕಾಪ್ಟರ್ ಪತನ: ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಿಂದ ತನಿಖೆ ನಡೆಯಲಿ; ಸುಬ್ರಮಣಿಯನ್ ಸ್ವಾಮಿ
ಉಡುಪಿ: ಸೇನಾ ಹೆಲಿಕಾಪ್ಟರ್ ಪತನವಾಗಿರುವುದು ಆಘಾತವಾಗಿದೆ. ದೇಶದ ಸುರಕ್ಷತೆಯ ದೃಷ್ಟಿಯಿಂದ ಇದು ಗಂಭೀರವಾದ ವಿಷಯವಾಗಿದೆ. ಹೀಗಾಗಿ ಹೆಲಿಕಾಪ್ಟರ್ ಪತನ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸುಪ್ರೀಂಕೋರ್ಟ್ ಹಿರಿಯ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದರು. ಉಡುಪಿ ಕೃಷ್ಣಮಠದಲ್ಲಿ ಬುಧವಾರ ನಡೆದ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ವಾಯುಪಡೆಯ ಹೆಲಿಕಾಪ್ಟರ್ ಪತನ: ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 13 ಮಂದಿ ಮೃತ್ಯು
ಚೆನ್ನೈ: ತಮಿಳುನಾಡಿನ ನೀಲಗಿರಿ ಅರಣ್ಯದ ವ್ಯಾಪ್ತಿಯ ಕೂನೂರು ಬಳಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಪತನಗೊಂಡಿದ್ದು, ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್, ಮಧುಲಿಕಾ ರಾವತ್ ಮತ್ತು ವಿಮಾನದಲ್ಲಿದ್ದ ಸೇರಿ 13 ಜನರು ಸಾವನ್ನಪ್ಪಿದ್ದಾರೆ. ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್), ಜನರಲ್ ಬಿಪಿನ್ ರಾವತ್ ಅವರು ಇಂದು ಸ್ಟಾಫ್ ಕೋರ್ಸ್‌ನ ಅಧ್ಯಾಪಕರು ಮತ್ತು ವಿದ್ಯಾರ್ಥಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಲು ತಮಿಳುನಾಡಿನ ನೀಲಗಿರಿ ಹಿಲ್ಸ್ನ ವೆಲ್ಲಿಂಗ್ಟನ್ ನಲ್ಲಿರೋ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿಗೆ ಭೇಟಿ ನೀಡಲು ಹೆಲಿಕಾಪ್ಟರ್ನಲ್ಲಿ ತೆರಳಿದ್ದರು. […]
ಉಡುಪಿ: ಡಿ.11ಕ್ಕೆ ಶ್ರೀಸಂಸ್ಥಾನ ಗೌಡಪಾದಾಚಾರ್ಯ ಕೈವಲ್ಯ ಮಠದ ನೂತನ ಶಾಖಾಮಠ ಉದ್ಘಾಟನೆ
ಉಡುಪಿ: ಸಾರಸ್ವತ ಸಮಾಜದ ಆದ್ಯಪೀಠ ಶ್ರೀಸಂಸ್ಥಾನ ಗೌಡಪಾದಾಚಾರ್ಯ ಕೈವಲ್ಯ ಮಠದ 17ನೇ ನೂತನ ಶಾಖಾ ಮಠ ಉಡುಪಿಯಲ್ಲಿ ಡಿಸೆಂಬರ್ 11ರಂದು ಲೋಕಾರ್ಪಣೆಗೊಳ್ಳಲಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಉಡುಪಿ ಕೈವಲ್ಯ ಶಾಖಾ ಮಠದ ಅಧ್ಯಕ್ಷ ಸಂತೋಷ್ ವಾಗ್ಳೆ ಅವರು, ಉಡುಪಿ ಆತ್ರಾಡಿ ಪರೀಕ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ನೂತನ ಭವ್ಯ ಶಾಖಾ ಮಠವನ್ನು ಶ್ರೀ ಕೈವಲ್ಯ ಮಠಾಧೀಶರಾದ ಶ್ರೀಮದ್ ಶಿವಾನಂದ ಸರಸ್ವತಿ ಸ್ವಾಮೀ ಮಹಾರಾಜ್ ಅಂದು ಸಂಜೆ 3 ಗಂಟೆಗೆ ಉದ್ಘಾಟಿಸುವ ಮೂಲಕ ಸಾರಸ್ವತ ಸಮಾಜಕ್ಕೆ […]