ಉಡುಪಿ: ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಸರ್ಕಾರದ ಯೋಜನೆಗೆ ಪೇಜಾವರ ಶ್ರೀ ಅಸಮಾಧಾನ

ಉಡುಪಿ: ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಸರ್ಕಾರದ ಯೋಜನೆಗೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ವಿರೋಧ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ ಅವರು, ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಆದರೆ, ಮಕ್ಕಳಿಗೆ ತಿಳುವಳಿಕೆ ಇರುವುದಿಲ್ಲ. ಪರಂಪರೆಯಿಂದ ಬಂದ ಆಹಾರ ಕ್ರಮವನ್ನು ಬದಲಿಸಬಾರದು. ಸರಕಾರ ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯ ರವಾನೆಯಾಗುತ್ತದೆ ಎಂದರು. ಸರಕಾರ ಮಕ್ಕಳಲ್ಲಿ ತಾರತಮ್ಯ ಮಾಡಬಾರದು. ಶಾಲೆ ಇರುವುದು ವಿದ್ಯಾಭ್ಯಾಸ ಮಾಡಲು. ಹೀಗಾಗಿ ಅಲ್ಲಿ ಜೀವನಶೈಲಿಯನ್ನು ಬದಲಿಸುವ ಕೆಲಸವನ್ನು […]
ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಲೆಫ್ಟಿನೆಂಟ್ ಕರ್ನಲ್ ಕಾರ್ಕಳದ ಅಳಿಯ: ಸಾಲ್ಮರ ಮಿನೇಜಸ್ ಮನೆಯಲ್ಲಿ ನೀರವ ಮೌನ

ಉಡುಪಿ: ಬುಧವಾರ ತಮಿಳುನಾಡಿನಲ್ಲಿ ಸಂಭವಿಸಿದ ಭಾರತೀಯ ವಾಯುಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಕಾರ್ಕಳದ ಅಳಿಯ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಕೂಡ ಮೃತರಾಗಿದ್ದಾರೆ. ಈ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿ ಸಾವನ್ನಪ್ಪಿದ್ದಾರೆ. ದಿವಂಗತ ಹರ್ಜಿಂದರ್ ಸಿಂಗ್ ಕಾರ್ಕಳ ಸಾಲ್ಮರದ ಪ್ರಫುಲ್ಲ ಎಂಬುವರನ್ನು ಮದುವೆ ಆಗಿದ್ದರು. ಪ್ರಫುಲ್ಲಾ ಕೂಡ ಸೇನೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಹರ್ಜಿಂದರ್ ಅವರು ಪ್ರಫುಲ್ಲಾ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಸಿಂಗ್ ಅವರ ನಿಧನದ ಸುದ್ದಿ ಮಿನೇಜಸ್ ಕುಟುಂಬಕ್ಕೆ ಶಾಕ್ ನೀಡಿದೆ. ಕಾರ್ಕಳ ಸಾಲ್ಮರದ […]
ಅಗತ್ಯವಿದ್ದರೆ ನೈಟ್ ಕರ್ಫ್ಯೂ: ಸಿಎಂ ಬೊಮ್ಮಾಯಿ

ಬೆಂಗಳೂರು: ಕೊರೊನಾ ರೂಪಾಂತರ ವೈರಾಣು ಓಮೈಕ್ರಾನ್ ರಾಜ್ಯದಲ್ಲಿ ಪತ್ತೆಯಾಗಿರುವುದು ಮತ್ತು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಹೊಸ ಮಾರ್ಗಸೂಚಿ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಕೋವಿಡ್ ನಿಯಂತ್ರಣ ಕುರಿತು ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಒಂದು ವೇಳೆ ರಾತ್ರಿ ಕರ್ಫ್ಯೂ ವಿಧಿಸುವ ಅಗತ್ಯವಿದ್ದರೆ ಅದನ್ನು ಜಾರಿಗೊಳಿಸಲು ಸರ್ಕಾರ ಮುಕ್ತವಾಗಿದೆ. ಕೋವಿಡ್ ಸ್ಥಿತಿಗತಿಗೆ ಅನುಗುಣವಾಗಿ ಸೂಕ್ತ ಕ್ರಮ ತೆಗೆದುಕೊಳ್ಳಲು ಸಿದ್ಧರಿದ್ದೇವೆ ಎಂದು ಹೇಳಿದರು.