ಪರಿಷತ್ ಫೈಟ್: ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ನ ಮಂಜುನಾಥ್ ಭಂಡಾರಿಗೆ ಗೆಲುವು

ಮಂಗಳೂರು: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯನ್ನು ಹೊಂದಿರುವ ದಕ್ಷಿಣ ಕನ್ನಡ ದ್ವಿಸದಸ್ಯ ವಿಧಾನ ಪರಿಷತ್ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 1274 ಮತಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಎರಡನೇ ಅಭ್ಯರ್ಥಿಯಾಗಿ ಕಾಂಗ್ರೆಸ್ ನ ಮಂಜುನಾಥ ಭಂಡಾರಿ ಗೆಲುವಿನ ನಗೆ ಬೀರಿದ್ದಾರೆ.
ಪೆರ್ಡೂರು: ಬಾವಿಗೆ ಹಾರಿ ನವವಿವಾಹಿತೆ ಆತ್ಮಹತ್ಯೆ

ಹಿರಿಯಡ್ಕ: ಡೆತ್ ನೋಟ್ ಬರೆದಿಟ್ಟು ವಿವಾಹಿತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರು ಕೊಪ್ಪಳ ಮನೆ ಎಂಬಲ್ಲಿ ನಡೆದಿದೆ. ಪೆರ್ಡೂರು ಕೊಪ್ಪಳ ಮನೆ ಲಲಿತ ಆಚಾರ್ಯ ಎಂಬವರ ಕಿರಿಯ ಮಗಳು ಮಾಲತಿ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಾಲತಿ 2021ರ ಜನವರಿ 18ರಂದು ಕೋಟ ಸಾಲಿಗ್ರಾಮದ ರಾಘವೇಂದ್ರ ಎಂಬವರನ್ನು ಮದುವೆಯಾಗಿದ್ದರು. ಇದೇ ಡಿ.12ರಂದು ಅಮ್ಮನ ನಾದಿನಿಯ ವೈಕುಂಟ ಕಾರ್ಯಕ್ರಮಕ್ಕೆ ಮಾಲತಿ ತವರು ಮನೆಗೆ ಬಂದಿದ್ದರು. ಮಾಲತಿ ಮಕ್ಕಳಾಗದೇ ಇರುವ ಬಗ್ಗೆ ಖಿನ್ನತೆಯಲ್ಲಿದ್ದರು. ಇದರಿಂದ ಯಾರ […]
ಪರಿಷತ್ ಫೈಟ್: ಹಾಸನದಲ್ಲಿ ಜೆಡಿಎಸ್, ಬೀದರ್ ನಲ್ಲಿ ಕಾಂಗ್ರೆಸ್ ಗೆಲುವು

ಸೂರಜ್ ರೇವಣ್ಣ ಭೀಮರಾವ್ ಪಾಟೀಲ್ ಹಾಸನ: ವಿಧಾನ ಪರಿಷತ್ ಚುನಾವಣೆಯಲ್ಲಿ ಮಾಜಿ ಸಚಿವ ರೇವಣ್ಣ ಅವರ ಪುತ್ರ ಸೂರಜ್ ರೇವಣ್ಣ 1,533 ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮೊದಲ ಬಾರಿ ಸೂರಜ್ ರೇವಣ್ಣ ವಿಧಾನ ಪರಿಷತ್ ಪ್ರವೇಶ ಮಾಡಿದ್ದಾರೆ. ಜೆಡಿಎಸ್ಗೆ 2,281 ಮತಗಳು ಬಂದರೆ, ಕಾಂಗ್ರೆಸ್ಗೆ 748 ಮತಗಳು ಬಿದ್ದಿವೆ. ಇನ್ನು ಬಿಜೆಪಿಗೆ 421 ಮತಗಳು ಬಂದಿವೆ. ಬೀದರ್ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು: […]
ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ತೇಜಸ್ವಿ ನಿಧನ

ಚಿಕ್ಕಮಗಳೂರು: ರಾಷ್ಟ್ರ ಕವಿ ಕುವೆಂಪು ಅವರ ಸೊಸೆ, ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನಲ್ಲಿ ವಾಸವಾಗಿದ್ದ ರಾಜೇಶ್ವರಿ ತೇಜಸ್ವಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದ ಕಾರಣ ಬೆಂಗಳೂರಿಗೆ ಆಗಮಿಸಿದ್ದರು. ಕಳೆದ ನಾಲ್ಕು ದಿನಗಳಿಂದ ನಗರದ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದರು. ಪತಿ ಪೂರ್ಣಚಂದ್ರ ತೇಜಸ್ವಿ ನಿಧನದ ಬಳಿಕ ಚಿಕ್ಕಮಗಳೂರು ಜಿಲ್ಲೆಯ […]
ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ: ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪಗೆ ಗೆಲುವು

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ನ 25 ಕ್ಷೇತ್ರಗಳಿಗೆ ಇದೇ 10 ರಂದು ನಡೆದ ಚುನಾವಣೆಯ ಮತಗಳ ಎಣಿಕೆ ಇಂದು ನಡೆಯುತ್ತಿದೆ. ಕೊಡಗು ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ದಾಖಲಿಸಿದೆ. ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ 105 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ (ಬಿಜೆಪಿ ಮುಖಂಡ ಎ. ಮಂಜು ಪುತ್ರ) ಸೋಲು ಅನುಭವಿಸಿದ್ದಾರೆ.