ಕಾರ್ಕಳ ಎಂ. ಪಿ.ಎಂ. ನಲ್ಲಿ ಐ. ಕ್ಯೂ. ಎ. ಸಿ. ಕಾರ್ಯಕ್ರಮ ಉದ್ಘಾಟನೆ

ಕಾರ್ಕಳ: ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು, ಐ. ಕ್ಯೂ. ಎ. ಸಿ.ಮತ್ತು ಮಾನವೀಯ ಚಟುವಟಿಕೆ ಸಂಸ್ಥೆಯ ಉದ್ಘಾಟನೆ ಕಾರ್ಯಕ್ರಮ.ಡಿ.16. ರಂದು ಕಾಲೇಜು ನಲ್ಲಿ ನಡೆಯಿತು. ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಸಂಜೀವ ವಡ್ಸೆ ಅವರು ಆಗಮಿಸಿ.ದೀಪವನ್ನು ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ.ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. ತೃತೀಯಲಿಂಗಿಯರು ಮತ್ತು ಮಂಗಳಮುಖಿಯರು ಸಮಾಜದಲ್ಲಿ ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ಹೇಳಿಕೊಂಡರು, ಸಮಾಜದಲ್ಲಿನ ಜನರು ಅವರನ್ನು ಕಾಣುವ ರೀತಿ ಮತ್ತು ಅದಕ್ಕೆ ಸೂಕ್ತ ಬದಲಾವಣೆಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಕಾರ್ಯಕ್ರಮದ […]

ಆತ್ರಾಡಿ: ನೇಣುಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

ಹಿರಿಯಡ್ಕ: ಕಳೆದ 20 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆತ್ರಾಡಿ ಗ್ರಾಮದ ಮದಗ ಚೆನ್ನಿಬೆಟ್ಟು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮದಗ ಚೆನ್ನಿಬೆಟ್ಟು ನಿವಾಸಿ ಲಲಿತಾ ಶೇರಿಗಾರ್ತಿ (65) ಎಂದು ಗುರುತಿಸಲಾಗಿದೆ. ಲಲಿತಾ ಕಳೆದ 20 ವರ್ಷದಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ, 2 ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಇದೇ ಖಿನ್ನತೆಯಲ್ಲಿ ಇಂದು ಬೆಳಿಗ್ಗೆ 9ರಿಂದ 11 ಗಂಟೆಯ ಮಧ್ಯೆ ಅವಧಿಯಲ್ಲಿ ಮನೆಯ […]

ಉಡುಪಿ: ಮಗಳನ್ನೇ ಅತ್ಯಾಚಾರಗೈದ ಪಾಪಿ ತಂದೆಗೆ ಜೀವತಾವಧಿ ಶಿಕ್ಷೆ.!

ಉಡುಪಿ: ಸ್ವತಃ ಮಗಳ ಮೇಲೆ ಎರಡು ಬಾರಿ ಅತ್ಯಾಚಾರ ನಡೆಸಿದ ಆರೋಪದಡಿ ಬಂಧಿತನಾಗಿದ್ದ ತಂದೆಯ‌ ಮೇಲಿನ‌ ದೋಷಾರೋಪಣೆಗಳು ಸಾಭೀತಾದ ಹಿನ್ನಲೆ ಆತ ಅಪರಾಧಿ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ತೀರ್ಪು ಪ್ರಕಟಿಸಿದ್ದಾರೆ. ಉಡುಪಿ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2020 ರ ಮೇ ತಿಂಗಳಿನಲ್ಲಿ ಈ ಘಟನೆ ನಡೆದಿತ್ತು. ಮನೆಯಲ್ಲಿ ತಾಯಿ ಹಾಗೂ ಕಿರಿಯ ಸೋದರ ಇಲ್ಲದ ಸಂದರ್ಭ 41 ವರ್ಷದ […]

ಮಂಗಳೂರಿಗೆ ಎಂಟ್ರಿಕೊಟ್ಟ ಓಮಿಕ್ರಾನ್: ಏಕಾಏಕಿ ಐವರಲ್ಲಿ ಸೋಂಕು ಪತ್ತೆ

ಮಂಗಳೂರು: ಕೊರೊನಾ ರೂಪಾಂತರಿ ತಳಿ ಓಮಿಕ್ರಾನ್ ಸೋಂಕು ಮಂಗಳೂರಿಗೆ ಎಂಟ್ರಿಕೊಟ್ಟಿದೆ. ಜಿಲ್ಲೆಯಲ್ಲಿ ಇಂದು ಐದು ಮಂದಿಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ. 2 ಕ್ಲಸ್ಟರ್​ಗಳಲ್ಲಿ ಸೋಂಕು ಕಂಡು ಬಂದಿವೆ. ಕ್ಲಸ್ಟರ್​ ಒಂದರಲ್ಲಿ 4 ಮತ್ತು ಕ್ಲಸ್ಟರ್​ ಎರಡರಲ್ಲಿ 1 ಒಮಿಕ್ರಾನ್​ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವಿಟರ್​ನಲ್ಲಿ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ರೂಪಾಂತರಿ ಕೊರೊನಾ ಪ್ರಕರಣಗಳ ಸಂಖ್ಯೆ 14ಕ್ಕೆ ಹೆಚ್ಚಳವಾಗಿದೆ. ಕೊರೊನಾ ಪಾಸಿಟಿವ್ ಬಂದವರ ಸ್ವ್ಯಾಬ್​ನ ಸ್ಯಾಂಪಲ್​ನ್ನು ಜಿನೋಮಿಕ್ […]

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯ ಕಾರ್ಪೊರೇಟ್ ಕ್ರಿಕೆಟ್ ಟೂರ್ನಿಗೆ ಚಾಲನೆ

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ , ಬ್ಯಾಂಕಗಳು , ವೈದ್ಯಕೀಯ ಸಂಘ, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತವಾಗಿ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಸಿ ಸಿ ಎಲ್ 2021) ಆಯೋಜಿಸಿದೆ. ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್.ಎಸ್. ಬಲ್ಲಾಳ್ ಟ್ರೋಪಿ ಅನಾವರಣ ಮಾಡಿ ಮೊದಲ ಟಾಸ್ ಮಾಡುವುದರ  ಮೂಲಕ ಟೂರ್ನ್ ಮೆಂಟ್ ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೋವಿಡ್ ಕಾರಣದಿಂದ ಕಳೆದ 2 ವರ್ಷಗಳಿಂದ ಹೆಚ್ಚಿನವರಿಗೆ […]