ಬ್ರಹ್ಮಾವರ: ಟೆಲಿಫೋನ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಮೃತ್ಯು, ಮಹಿಳೆ ಗಂಭೀರ
ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಹುಂಡೈ ಗ್ರ್ಯಾಂಡ್ ಐ10 ಕಾರು ಟೆಲಿಫೋನ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದು, ಅವರ ಪತ್ನಿ ಗಾಯಗೊಂಡ ಘಟನೆ ಬ್ರಹ್ಮಾವರ ಹೇರಾಡಿ ಗ್ರಾಮದ ಕೂಡ್ಲಿ ದುರ್ಗಾ ಪರಮೇಶ್ವರಿ ಗದ್ದುಗೆ ಮಾರಿಯಮ್ಮ ದೇವಸ್ಥಾನದ ಕ್ರಾಸ್ ಸಮೀಪ ಇಂದು ನಡೆದಿದೆ. ಕಾರು ಚಾಲಕ ಹಾಗೂ ಇನ್ನೋರ್ವ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯು.ಬಿ ಪ್ರಭಾಕರ್ ರಾವ್ ( 80) ಮೃತಪಟ್ಟ ವ್ಯಕ್ತಿ. ಅವರ ಪತ್ನಿ ಉಷಾ […]
ಕಾರ್ಕಳ: ಯುವತಿ ನಾಪತ್ತೆ
ಕಾರ್ಕಳ: ಕಾಲೇಜಿಗೆ ಹೋದ ಯುವತಿಯೊಬ್ಬಳು ವಾಪಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಹುಕ್ರಟ್ಟೆ ಬೆಟ್ಟುವಿನಲ್ಲಿ ನಡೆದಿದೆ. ಮಾಳ ಗ್ರಾಮದ ಹುಕ್ರಟ್ಟೆ ಬೆಟ್ಟುವಿನ ಸುಪ್ರಿಯಾ (18) ನಾಪತ್ತೆಯಾದ ಯುವತಿ. ಈಕೆ ಡಿಸೆಂಬರ್ 15 ರಂದು ಮನೆಯಿಂದ ಕಾಲೇಜಿಗೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. 5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾಳೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ […]
ರಾಜ್ಯಾದ್ಯಂತ ಹೊಸ ವರ್ಷಾಚರಣೆಗೆ ನಿರ್ಬಂಧ: ಬಹಿರಂಗ ಸಂಭ್ರಮಾಚರಣೆ ನಿಷೇಧ
ಬೆಂಗಳೂರು: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಹೊಸ ವರ್ಷಾಚರಣೆಗೆ ಕೆಲವೊಂದು ನಿರ್ಬಂಧ ವಿಧಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಡಿ.ಜೆ ಬಳಕೆ ಮತ್ತು ಬಹಿರಂಗ ಸಂಭ್ರಮಾಚರಣೆಗೆ ನಿಷೇಧ ಹೇರಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಇಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ, ಡಿಸೆಂಬರ್ 30ರಿಂದ ಜನವರಿ 2ರವರೆಗೂ ರಾಜ್ಯದಾದ್ಯಂತ ನಿರ್ಬಂಧ ಹೇರಲಾಗಿದ್ದು, ಈ ಅವಧಿಯಲ್ಲಿ ಬಹಿರಂಗ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ ಎಂದರು. ಬಾರ್, ರೆಸ್ಟೋರೆಂಟ್ ಮತ್ತಿತರ […]
ರಾಜ್ಯಗಳು ಒಪ್ಪಿದರೆ ಶಾಲೆಗಳಲ್ಲಿ ಭಗವದ್ಗೀತೆ ಕಲಿಸಬಹುದು: ಕೇಂದ್ರ ಸರ್ಕಾರ
ನವದೆಹಲಿ: ಶಾಲಾ ಮಕ್ಕಳ ಪಠ್ಯದಲ್ಲಿ ಭಗವದ್ಗೀತೆ ಕಲಿಕೆಗೆ ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಆದರೆ, ರಾಜ್ಯ ಸರ್ಕಾರಗಳು ಒಪ್ಪಿದರೆ ಮಾತ್ರ ಅದನ್ನು ಅನುಷ್ಠಾನಕ್ಕೆ ತರಬಹುದಾಗಿದೆ. ರಾಜ್ಯಗಳು ಬಯಸಿದರೆ ಪಠ್ಯಕ್ರಮದಲ್ಲಿ ಭಗವದ್ಗೀತೆ ಮತ್ತು ಭೋಜ್‌ಪುರಿ ಭಾಷಾ ಕಲಿಕೆಯನ್ನು ಸೇರಿಸಬಹುದು. ಹೊಸ ಶಿಕ್ಷಣ ನೀತಿಯ ಅಡಿಯಲ್ಲಿ ಮಕ್ಕಳಿಗೆ ಪ್ರಾದೇಶಿಕ ಭಾಷೆಗಳಲ್ಲಿ ಶಿಕ್ಷಣವನ್ನು ಕಡ್ಡಾಯಗೊಳಿಸಲಾಗಿದೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವೆ ಅನ್ನಪೂರ್ಣಾ ದೇವಿ ಲೋಕಸಭೆಯಲ್ಲಿ ತಿಳಿಸಿದ್ದಾರೆ. ದೇಶದಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆಯನ್ನು ಕಲಿಸಲು ನಿಬಂಧನೆಗಳನ್ನು ತರಲು ಸರ್ಕಾರವು ಪರಿಗಣಿಸುತ್ತದೆಯೇ ಎಂಬ ಪ್ರಶ್ನೆಗೆ […]
ಮಲ್ಪೆ: ನೇಣುಬಿಗಿದುಕೊಂಡು ಮಹಿಳೆ ಆತ್ಮಹತ್ಯೆ
ಮಲ್ಪೆ: ಇಲ್ಲಿನ ಲಕ್ಷ್ಮೀನಗರದ 7ನೇ ಕ್ರಾಸ್ ನಲ್ಲಿ ವಾಸವಾಗಿದ್ದ ಗೀತಾ (52) ಎಂಬ ಮಹಿಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದ ಗೀತಾ, ಡಿ. 19ರಂದು ರಾತ್ರಿ ಕಂಠಪೂರ್ತಿ ಕುಡಿದಿದ್ದರು. ಮಲಗುವುದಾಗಿ ಕೋಣೆಗೆ ಹೋಗಿದ್ದ ಅವರು ರಾತ್ರಿ ಸುಮಾರು 10.30ಕ್ಕೆ ಮನೆಯವರು ನೋಡಿದಾಗ ಚೆಯರ್ ಮೇಲೆ ಕುಳಿತ ಸ್ಥಿತಿಯಲ್ಲಿದ್ದು, ಕುತ್ತಿಗೆಗೆ ನೈಲಾನ್ ಸೀರೆ ಕಟ್ಟಿ ಪ್ಯಾನ್ ಗೆ ನೇಣುಬಿಗಿದು ಕೊಂಡ ಸ್ಥಿತಿಯಲ್ಲಿದ್ದರು. ನೇಣಿನಿಂದ ಬಿಡಿಸಿ ಹೈಟೆಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು […]