ಉಡುಪಿ: ಆಗಸದಲ್ಲಿ ಗೋಚರಿಸಿದ ಬೆಳಕಿನ ಸರಮಾಲೆ; ಈ ಅಚ್ಚರಿಗೆ ಕಾರಣವೇನು?.
ಉಡುಪಿ: ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ನಿನ್ನೆ ಸಂಜೆ 7ರ ಸುಮಾರಿಗೆ ಆಗಸದಲ್ಲಿ ಬೆಳಕಿನ ಸರಮಾಲೆ ಗೋಚರಿಸಿದೆ. ಫಳಫಳ ಹೊಳೆಯುವ ಈ ಬೆಳ್ಳಿಚುಕ್ಕಿಗಳು ಸರದಿ ಸಾಲಿನಲ್ಲಿ ಸಾಗುತ್ತಿದ್ದುದನ್ನು ಜನರು ಕೌತುಕದಿಂದ ವೀಕ್ಷಿಸಿದರು. ಏನಿದು ಬೆಳಕಿನ ಸರಮಾಲೆ.? ಎಲಾನ್ ಮಸ್ಕ್ ಮಾಲೀಕತ್ವದ ಬಾಹ್ಯಾಕಾಶ ಸಂಸ್ಥೆ, ಅಮೆರಿಕದ ‘ಸ್ಪೇಸ್ ಎಕ್ಸ್’ ಉಡಾವಣೆ ಮಾಡಿದ ಸರಣಿ ಉಪಗ್ರಹಗಳ ಮಾಲೆಯಿದು. ‘ಸ್ಟಾರ್ ಲಿಂಕ್’ ಎಂಬ ಯೋಜನೆಯಡಿ 1,800ಕ್ಕೂ ಅಧಿಕ ಉಪಗ್ರಹಗಳನ್ನು ಈಗಾಗಲೇ ಉಡಾವಣೆ ಮಾಡಲಾಗಿದೆ. ಅವುಗಳಲ್ಲಿ 1,732 ಉಪಗ್ರಹಗಳು ತಮ್ಮ ನಿಗದಿತ […]