ಮಂಗಳೂರು: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಹೊಸ ಮಾರ್ಗಸೂಚಿ ಪ್ರಕಟ; ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯಕ್ಕೆ ನಿಷೇಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಸಂಬಂಧಿಸಿ ಹೊಸ ಮಾರ್ಗಸೂಚಿ ಪ್ರಕಟಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಮಾರ್ಗಸೂಚಿಯಲ್ಲಿ ಏನಿದೆ?. ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸಿಕೊಂಡು ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ ಮಾಡಲು ಅವಕಾಶವಿದೆ. ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವದಲ್ಲಿ ಮಾಡುವಂತಿಲ್ಲ. ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ, ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ವಿಶೇಷ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಸಾರ್ವಜನಿಕ ಸ್ಥಳ, ರಸ್ತೆ, […]

ಕರ್ನಾಟಕದಲ್ಲಿ ಮತ್ತೆ 12 ಮಂದಿಯಲ್ಲಿ ಓಮಿಕ್ರಾನ್ ಸೋಂಕು ಪತ್ತೆ; ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆ

ಬೆಂಗಳೂರು: ಮಂಗಳೂರಿನ ಒಬ್ಬರು ಸಹಿತ ರಾಜ್ಯದಲ್ಲಿ ಇಂದು ಒಟ್ಟು 12 ಮಂದಿ ಓಮಿಕ್ರಾನ್‌ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಓಮಿಕ್ರಾನ್‌ ಪ್ರಕರಣಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ ಹೆಚ್ಚಿನವರು ಬೆಂಗಳೂರು ಮೂಲದವರಾಗಿದ್ದು, ಬ್ರಿಟನ್‌ ಮತ್ತು ಘಾನಾದಿಂದ ನಗರಕ್ಕೆ ಮರಳಿದ್ದರು. ಹತ್ತು ಜನರು ಬೆಂಗಳೂರಿನವರು, ಮೈಸೂರು ಮತ್ತು ಮಂಗಳೂರಿನ ತಲಾ ಒಬ್ಬರು ಪ್ರಯಾಣಿಕರಿಗೆ ಓಮಿಕ್ರಾನ್ ಸೋಂಕು ತಗುಲಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್‌ ಟ್ವೀಟಿಸಿದ್ದಾರೆ.

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಬೆಂಗಳೂರು: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ನಲ್ಲಿ ಜಾಮೀನು ದೊರೆತಿದೆ. ಕಳೆದ ಜೂನ್ ನಲ್ಲಿ ಉಡುಪಿ ನ್ಯಾಯಾಲಯವು ಕೊಲೆ ಪ್ರಕರಣದ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಮತ್ತು ರಾಜೇಶ್ವರಿ ಗೆಳೆಯ ಹಾಗೂ ಅರ್ಚಕ ನಿರಂಜನ್ ಭಟ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ರಾಜೇಶ್ವರಿ ಶೆಟ್ಟಿ ಹೈಕೋರ್ಟ್ ಮೇಟ್ಟಿಲೇರಿದ್ದರು. ಇದೀಗ ರಾಜೇಶ್ವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 2016ರ ಜುಲೈ […]

ಉಡುಪಿ: ಗ್ರಾಪಂ ಉಪ ಚುನಾವಣೆ: ಮದ್ಯ ಮಾರಾಟ ನಿಷೇಧ

ಉಡುಪಿ: ಗ್ರಾಮ ಪಂಚಾಯತ್ ಉಪ ಚುನಾವಣೆ-2021 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಡಿಸೆಂಬರ್ 27 ರಂದು ಬ್ರಹ್ಮಾವರ ತಾಲೂಕಿನ ನಾಲ್ಕೂರು, ಕಾಪು ತಾಲೂಕಿನ ಕೋಟೆ ಹಾಗೂ ಉಡುಪಿ ತಾಲೂಕಿನ ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಮತದಾನ ನಡೆಯಲಿರುವ ಹಿನ್ನೆಲೆ ರಾಜ್ಯ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 308 ಎಸಿ ರ  ಅನ್ವಯ ಮೇಲ್ಕಂಡ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಡಿ. […]

ಮಂಗಳೂರು: ಕಾಲು ಕಟ್ಟಿ ತಲೆಕೆಳಗೆ ತೂಗು ಹಾಕಿ ಮೀನುಗಾರನಿಗೆ ಚಿತ್ರಹಿಂಸೆ; ಆರು ಮಂದಿಯ ಬಂಧನ

ಮಂಗಳೂರು: ಕಾಲು ಕಟ್ಟಿ ತಲೆಕೆಳಗೆ ತೂಗು ಹಾಕಿ ಮೀನುಗಾರನಿಗೆ ಚಿತ್ರಹಿಂಸೆ; ಆರು ಮಂದಿಯ ಬಂಧನ ಮಂಗಳೂರು: ಮೊಬೈಲ್ ಕಳವು‌ ಮಾಡಿದ್ದಾನೆಂದು ಆರೋಪಿ ಮೀನುಗಾರನೋರ್ವನನ್ನು ಬೋಟ್‌ನ ಕ್ರೇನ್‌ಗೆ ಕಾಲು ಕಟ್ಟಿ ತಲೆಕೆಳಗೆ ತೂಗು ಹಾಕಿ ಸಹ ಮೀನುಗಾರ ಕಾರ್ಮಿಕರು ದೌರ್ಜನ್ಯ ಎಸಗಿರುವ ಘಟನೆ ಮಂಗಳೂರು ಹಳೆಯ ಬಂದರು‌ ದಕ್ಕೆಯಲ್ಲಿ ನಡೆದಿದೆ. ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯನ್ನು ಆಂಧ್ರಪ್ರದೇಶದ ಬೆಸ್ತ ಸಮುದಾಯದ ವೈಲ ಶೀನು ಎಂದು ಗುರುತಿಸಲಾಗಿದೆ. ಈತನನ್ನು ಇತರ ಮೀನುಗಾರ ಕಾರ್ಮಿಕರು ಬೋಟ್‌ನ ಕ್ರೇನ್‌ಗೆ ಕಾಲು ಕಟ್ಟಿ ತಲೆಕೆಳಗಾಗಿ ತೂಗು […]