ಉಡುಪಿ: ವಿವಾಹಿತ ಮಹಿಳೆ ನಾಪತ್ತೆ

ಉಡುಪಿ: ಮನೆಯಿಂದ ಹೊರಗೆ ಹೋದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಮುದೂರು ಗ್ರಾಮದ ಹಾಲಬೇರು ಎಂಬಲ್ಲಿ ನಡೆದಿದೆ. ಮುದೂರು ಗ್ರಾಮದ ಹಾಲಬೇರು ನಿವಾಸಿ 35 ವರ್ಷದ ಜ್ಯೋತಿ ನಾಪತ್ತೆಯಾದ ಮಹಿಳೆ. ಇವರು ಡಿಸೆಂಬರ್ 19 ರಂದು ರಾತ್ರಿ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಹರೆ: 135 ಸೆಂ.ಮೀ. ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ, […]

ಕಾಪು: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು

ಕಾಪು: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪು ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ. ಕಾಪು ತಾಲೂಕಿನ ಮೂಡಬೆಟ್ಟು ಗ್ರಾಮದ ಸರಕಾರಿ ಗುಡ್ಡೆಯ ನಿವಾಸಿ 42 ವರ್ಷದ ರವಿ ಮೃತ ದುರ್ದೈವಿ. ಇವರು ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದು, ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದರು. ಮದುವೆ ಕೂಡ ಆಗಿರಲಿಲ್ಲ. ಇದೇ ವಿಚಾರದಲ್ಲಿ  ಜೀವನದಲ್ಲಿ ಮನನೊಂದು ಡಿಸೆಂಬರ್ 16ರಂದು ಬಿಯರ್‌ನಲ್ಲಿ ಇಲಿ ಪಾಷಾಣ ಸೇರಿಸಿ ಕುಡಿದಿದ್ದರು. ಬಳಿಕ ಮನೆಗೆ […]

ಕಾಪು ಪುರಸಭೆ ಬಿಜೆಪಿ ತೆಕ್ಕೆಗೆ ನಿಶ್ಚಿತ: ಗುರುಪ್ರಸಾದ್ ಶೆಟ್ಟಿ ಕಟಪಾಡಿ

ಕಾಪು: ಯಾವುದೇ ಮೂಲಭೂತ ಸೌಕರ್ಯಗಳ ಪೂರ್ವಸಿದ್ಧತೆ ಇಲ್ಲದೇ ಕೇವಲ ರಾಜಕೀಯ ಲಾಭದ ಲೆಕ್ಕಾಚಾರದಿಂದ ಕಾಪು ಪುರಸಭೆಯನ್ನು ಸೃಷ್ಠಿಸಿ 100 ಕೋಟಿ ರೂಪಾಯಿ ಅನುದಾನ ತರುತ್ತೇನೆಂದು ಎಲ್ಲೆಡೆ ಪುಕ್ಕಟೆ ಪ್ರಚಾರಗಿಟ್ಟಿಸಿಕೊಂಡು, ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಕೈಗೊಳ್ಳದ ಮಾಜಿ ಸಚಿವ ಹಾಗೂ ಕಾಪು ಮಾಜಿ ಶಾಸಕ ವಿನಯ ಕುಮಾರ್ ಸೊರಕೆಯವರು ಕಾಪು ಪುರಸಭಾ ವ್ಯಾಪ್ತಿಯ ಮೂಲಭೂತ ಸೌಕರ್ಯಗಳ ಅವ್ಯವಸ್ಥೆಗೆ ಮೂಲ ಕಾರಣರಾಗಿದ್ದಾರೆ ಎಂದು ಜಿಲ್ಲಾ ಬಿಜೆಪಿ ದೂರಿದೆ. ಇಂದು ಗ್ರಾಮ ಪಂಚಾಯತ್, ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆ, ತಾಲೂಕು […]