ಉಡುಪಿ ಶ್ರೀಕೃಷ್ಣ ಮಠವನ್ನು ಸ್ವಾಧೀನಕ್ಕೆ ಪಡೆಯಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿತ್ತು: ಪ್ರಮೋದ್ ಮಧ್ವರಾಜ್
ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಅಂದಿನ ಕಾಂಗ್ರೆಸ್ ಸರ್ಕಾರ ಉಡುಪಿ ಶ್ರೀಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸಲು ಮುಂದಾಗಿತ್ತು ಎನ್ನುವ ಮೂಲಕ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಇರಿಸುಮುರಿಸು ಉಂಟು ಮಾಡಿದ್ದಾರೆ. ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಪ್ರಯುಕ್ತ ನಡೆಯುತ್ತಿರುವ ‘ವಿಶ್ವಾರ್ಪಣಂ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮಠವನ್ನು ಸರ್ಕಾರದ ವಶಕ್ಕೆ ಪಡೆಯುವ ವಿಷಯ ಗೊತ್ತಾದಾಗ ಸ್ವತಃ ನಾನೇ ಸಿದ್ಧರಾಮಯ್ಯ ಬಳಿಗೆ ಹೋಗಿ, ಮಠವನ್ನು ವಶಪಡಿಸಿಕೊಂಡರೆ ಮೊದಲಿಗೆ […]
ಉಡುಪಿ ನಗರಸಭೆ ಮಾದರಿಯಲ್ಲಿ ಕಾಪು ಪುರಸಭೆ ಅಭಿವೃದ್ಧಿಗೆ ಬಿಜೆಪಿ ಸಂಕಲ್ಪ: ಯಶ್ ಪಾಲ್ ಸುವರ್ಣ
ಕಾಪು: ರಾಜ್ಯದಲ್ಲಿಯೇ ಅತ್ಯುತ್ತಮ ನಗರಸಭೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉಡುಪಿ ನಗರಸಭೆಯನ್ನು ಮಾದರಿಯಾಗಿ ಕಾಪು ಪುರಸಭೆಯ ಸರ್ವಾಂಗೀಣ ಅಭಿವೃದ್ದಿಗೆ ಕಾರ್ಯಯೋಜನೆ ರೂಪಿಸುವ ಸಂಕಲ್ಪದೊಂದಿಗೆ ಬಿಜೆಪಿ ಚುನಾವಣೆಯಲ್ಲಿ ಈ ಬಾರಿ ಪ್ರಚಂಡ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಉಡುಪಿ ನಗರಸಭೆ ಉಡುಪಿಯ ನವ ನಿರ್ಮಾಣದ ರೂವಾರಿಗಳಾದ ಕೀರ್ತಿಶೇಷ ಡಾ ವಿ ಎಸ್ ಆಚಾರ್ಯ ರವರ ಮಾರ್ಗದರ್ಶನದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ಅವರ ನೇತೃತ್ವದಲ್ಲಿ […]
ಮಣಿಪಾಲ: ಉಪನ್ಯಾಸಕ ನೇಣಿಗೆ ಶರಣು
ಮಣಿಪಾಲ: ಉಪನ್ಯಾಸಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ. ಶ್ರೀಹರ್ಷ ಶಾನುಭಾಗ್ (37) ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕ. ಇವರು ತೀರ್ಥಹಳ್ಳಿ ಸರಕಾರಿ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು, ಅದೇ ಖಿನ್ನತೆಯಲ್ಲಿ ಮನನೊಂದು ಡಿ. 23 ರಂದು ಮನೆಯಲ್ಲಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಎಂಜಿಎಂ ಕಾಲೇಜಿನ ಉಪನ್ಯಾಸಕಿ ಶಿಲ್ಪಾ ಶಾನುಭಾಗ್ ಮತ್ತು […]
ನಿಮ್ಮ ಈ ಹವ್ಯಾಸಗಳೇ ಜೀವಕ್ಕೆ ಮಾರಕವಾಗಬಹುದು ಜೋಕೆ!
ವಯಸ್ಸು ಜಾಸ್ತಿಯಾಗುತ್ತಿದ್ದಂತೆಯೇ ಹುಮ್ಮಸ್ಸೂ ಕುಸಿಯತೊಡಗುತ್ತದೆ. ಯೌವ್ವನದಲ್ಲಿರುವ ಉಲ್ಲಾಸ ಕ್ರಮೇಣ ಮರೆಯಾಗುತ್ತದೆ.ಉಲ್ಲಾಸ ಕಡಿಮೆಯಾದಂತೆ ಆರೋಗ್ಯದಲ್ಲಿಯೂ ಏರು ಪೇರಾಗುತ್ತದೆ. ಹೀಗಾಗಲು ಪ್ರಮುಖ ಕಾರಣ ನಮ್ಮ ಜೀವನಶೈಲಿ ಮತ್ತು ಕೆಲವೊಂದು ಹವ್ಯಾಸಗಳು ಎಂದರೆ ನೀವು ಒಪ್ಪಿಕೊಳ್ಳಲೇಬೇಕು.ಯಾವೆಲ್ಲಾ ಹವ್ಯಾಸಗಳಿಂದ ಆರೋಗ್ಯ ಏರುಪೇರಾಗುತ್ತದೆ ಎಂದು ತಿಳಿದುಕೊಳ್ಳೋಣ ಬನ್ನಿ. ಕೆಟ್ಟ ಜೀವನಶೈಲಿ, ಕೆಲವೊಂದು ಅಭ್ಯಾಸಗಳು ವ್ಯಕ್ತಿ ವಯಸ್ಸಾಗಿ ಕಾಣುವಂತೆ ಮಾಡುತ್ತದೆ ಎಂದು ವಿಜ್ಞಾನ ಹೇಳುತ್ತದೆ. ಎಲ್ಲರೂ ತಾವೂ ಯಾವಾಗಲೂ ಯಂಗ್ ಆಗಿ ಕಾಣಬೇಕೆಂದೇ ಇಷ್ಟಪಡುತ್ತಾರೆ. ಯಾವ ಹವ್ಯಾಸಗಳು ನಮಗೆ ಹೆಚ್ಚು ವಯಸ್ಸಾದಂತೆ ಕಾಣುವುದು ಎಂಬುದನ್ನು ಅರಿತುಕೊಂಡು […]
ಹಿರಿಯ ನಿರ್ದೇಶಕ ಕೆವಿ ರಾಜು ಇನ್ನಿಲ್ಲ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆವಿ ರಾಜು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ. ಅನಾರೋಗ್ಯದ ಕಾರಣ ಕೆಲವು ದಿನಗಳಿಂದ ಮನೆಯಲ್ಲಿಯೇ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. ಕೆವಿ ರಾಜು ಅವರು ಚಿತ್ರರಂಗದಲ್ಲಿ ನಿರ್ದೇಶಕ, ಬರಹಗಾರ ಮತ್ತು ಚಿತ್ರಕಥೆಗಾರರಾಗಿ ಗುರುತಿಸಿಕೊಂಡಿದ್ದರು. ಖ್ಯಾತ ನಿರ್ದೇಶಕ ಕೆವಿ ಜಯರಾಮ್ ಅವರ ಸಹೋದರರಾಗಿದ್ದ ಕೆವಿ ರಾಜು, 1982 ರಲ್ಲಿ ‘ಬಾಡದ ಹೂ’ ಚಿತ್ರದಲ್ಲಿ ತಮ್ಮ ಸಹೋದರನಿಗೆ ಸಹಾಯಕ ನಿರ್ದೇಶಕರಾಗುವ […]