ಉಡುಪಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕ ಹೃದಯಾಘಾತದಿಂದ ಮೃತ್ಯು
ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕರೋರ್ವರು ಕರ್ತವ್ಯದಲ್ಲಿದ್ದಾಗಲೇ ಬಸ್ ನಲ್ಲಿ ಹೃದಯಾಘಾತವಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್ ನ ಮಲಯಮಾರುತ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕೆಎಸ್‌ಆರ್‌ಟಿಸಿ ನಿರ್ವಾಹಕ ಸಖರಾಯಪಟ್ಟಣ ಬಳಿ ಕುನ್ನಾಳು ಗ್ರಾಮದ ನಿವಾಸಿ ವಿಜಯ ಕುಮಾರ್ (42) ಎಂದು ಗುರುತಿಸಲಾಗಿದೆ. ಬಸ್ ಚಿಕ್ಕಮಗಳೂರು ನಗರ ನಿಲ್ದಾಣದಿಂದ ಬೆಳಿಗ್ಗೆ 6 ಗಂಟೆಗೆ ಉಡುಪಿಗೆ ಬಸ್ ಹೊರಟಿತ್ತು. ಕೊಟ್ಟಿಗೆಹಾರ ಚಾರ್ಮಾಡಿ ಘಾಟ್ ನ ಮಲಯಮಾರುತ ಬಳಿ ಸಾಗುವಾಗ ನಿರ್ವಾಹಕ ವಿಜಯ ಕುಮಾರ್ ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಚಾಲಕ ಮತ್ತು ಕೊಟ್ಟಿಗೆಹಾರ ನಿಲ್ದಾಣ […]
ಕುಂದಾಪುರ: ನ್ಯೂಯರ್ ಪಾರ್ಟಿಗೆ ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಬಂಧನ; 1 ಕೆ.ಜಿ. ಗಾಂಜಾ ವಶ
ಕುಂದಾಪುರ: ಹೊಸ ವರ್ಷದ ಪಾರ್ಟಿಗೆ ಗಾಂಜಾ ಸಾಗಿಸುತ್ತಿದ್ದ ಆರೋಪಿಯೋರ್ವನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 1 ಕೆ.ಜಿ ತೂಕದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಕುಂದಾಪುರ ವಿಠಲವಾಡಿ ಮೂಲದ ವಿಶ್ವಪ್ರಸನ್ನ ಗೋಡೆ (26) ಬಂಧಿತ ಆರೋಪಿ. ಈತ ಹೊಸ ವರ್ಷದಲ್ಲಿ ಮೋಜು ಮಸ್ತಿ ಮಾಡಲು ಹೈದರಾಬಾದ್‌ನಿಂದ ಕುಂದಾಪುರಕ್ಕೆ ಬಸ್ ಮೂಲಕವಾಗಿ ಗಾಂಜಾ ತರುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಕುಂದಾಪುರ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ನೇತೃತ್ವದ ಪೊಲೀಸರ ತಂಡಕ್ಕೆ ಖಚಿತ ಮಾಹಿತಿ ಲಭಿಸಿದೆ. ಇದರ ಆಧಾರದಲ್ಲಿ ಡಿ.24ರ ತಡರಾತ್ರಿ […]
5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಜ.23 ರಂದು ತಪ್ಪದೆ ಪೊಲಿಯೋ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ
ಉಡುಪಿ: ಜಿಲ್ಲೆಯ 0-5 ವ಼ರ್ಷದೊಳಗಿನ ಪ್ರತಿಯೊಂದು ಮಕ್ಕಳಿಗೂ ಪೊಲಿಯೋ ಲಸಿಕೆಗಳನ್ನು ತಪ್ಪದೇ ಹಾಕಿಸಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈ ಬಾರಿ ಪಲ್ಸ್ ಪೊಲಿಯೋ ಲಸಿಕೆಯನ್ನು ಜನವರಿ 23 ರಂದು ನೀಡಲಾಗುತ್ತಿದ್ದು, ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳನ್ನು ಲಸಿಕಾ ಕೇಂದ್ರಕ್ಕೆ ಕರೆದೊಯ್ದು ಲಸಿಕೆಯನ್ನು ತಪ್ಪದೇ ಹಾಕಿಸಬೇಕು. […]
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯನ್ನು ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
ಉಡುಪಿ: ಜಿಲ್ಲೆಯಲ್ಲಿ ಜನ ಸಾಮಾನ್ಯರಿಗೆ ಉತ್ತಮ ಗುಣಮಟ್ಟದ ಆಹಾರೋತ್ಪನ್ನಗಳು ಲಭ್ಯವಾಗುವಂತೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಆಹಾರ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಸಿದ್ಧ ಆಹಾರ ಉದ್ದಿಮೆಗಳನ್ನು ಪ್ರಾರಂಭಿಸುವ ಮುನ್ನ ಪ್ರತಿಯೊಬ್ಬರೂ ಸಕ್ಷಮ ಪ್ರಾಧಿಕಾರದಿಂದ ತಪ್ಪದೇ […]