ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಕೂಟ “ಅಟಲ್ ಟ್ರೋಫಿ 2021” ಚಾಲನೆ
ಉಡುಪಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ನಗರ ಬಿಜೆಪಿ ನಗರ ಯುವ ಮೋರ್ಚಾ ಮತ್ತು ವಾಲಿಬಾಲ್ ಫ್ರೆಂಡ್ಸ್ ಹನುಮಂತನಗರ ನಿಟ್ಟೂರು ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಕೂಟ “ಅಟಲ್ ಟ್ರೋಫಿ 2021” ಆಯೋಜಿಸಲಾಯಿತು. ಪಂದ್ಯಕೂಟಕ್ಕೆ ಚಾಲನೆ ನೀಡಿ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ […]
ಹಸಿರೇ ಉಸಿರು ತಂಡವನ್ನು ಭೇಟಿ ಮಾಡಿದ ಸಚಿವ ವಿ. ಸುನಿಲ್ ಕುಮಾರ್
ಕಾರ್ಕಳ: ಸ್ವಚ್ಛತೆ ಎಂಬುದು ಕೆಲಸವಲ್ಲ ನಮ್ಮ ಕರ್ತವ್ಯ ಎಂದು ಪ್ರತಿ ಭಾನುವಾರದಂದು ತಮ್ಮೂರಿನ ದುರ್ಗ ಗ್ರಾಮದ “ಹಸಿರೇ ಉಸಿರು” ತಂಡವು ಈ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದೆ. ಸ್ವಚ್ಛ ಊರು ಸ್ವಚ್ಛ ಗ್ರಾಮ ಎಂಬ ಧ್ಯೇಯದೊಂದಿಗೆ 91ನೇ ವಾರದ ಅಭಿಯಾನವು ಡಿ. 26 ರಂದು ತೆಳ್ಳಾರು ಪಲಾಯಿ ಬಾಕ್ಯಾರು ಶಾಲಾ ಆವರಣದಲ್ಲಿ ನಡೆಯಿತು. ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಭೇಟಿ ನೀಡಿ ಈ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ತಂಡವು ಶಾಲಾ ಸುತ್ತಮುತ್ತ, […]
ಸುರತ್ಕಲ್: ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು
ಮಂಗಳೂರು: ಸುರತ್ಕಲ್ ಎನ್‌ಐಟಿಕೆಯಲ್ಲಿ ಬಿಇ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ದ್ವಿತೀಯ ವರ್ಷದ ಎಂಜಿನಿಯರಿಂಗ್ ವ್ಯಾಸಂಗ್ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಬಿಹಾರ ರಾಜ್ಯದ ಪಾಟ್ನಾ ನಗರದ ಸೌರವ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ‘ಶೈಕ್ಷಣಿಕ ಸಾಲ ಪಡೆದು ಬಿಇ ವ್ಯಾಸಂಗ ಮಾಡುತ್ತಿದ್ದು, ಓದು ಮುಗಿಯುವವರೆಗೆ ಸಾಲ ಹೆಚ್ಚಾಗುವ ಭಯ ಹಾಗೂ ಉದ್ಯೋಗ ಸಿಗದೇ ಇದ್ದರೆ ಹೇಗೆ ಎಂಬ ಆತಂಕದಿಂದ ಆತ್ಮಹತ್ಯೆ ಮಾಡಿಕೊಂಡಿದ್ದೇನೆ. ನನ್ನ […]
ಕಾರ್ಕಳ: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಆಸ್ಪತ್ರೆಯಲ್ಲಿ ಮೃತ್ಯು
ಕಾರ್ಕಳ: ಮಲ್ಲಿಗೆ ಗಿಡಕ್ಕೆ ಹಾಕುವ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸೂಡ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಸೂಡ ಗ್ರಾಮದ ಕುದ್ರೆಬೆಟ್ಟು ನಿವಾಸಿ ಜೆಸಿಂತಾ ಪಿರೇರಾ ಅವರ ಮಗ ಜೋನ್ಸನ್ ಪಿರೇರಾ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಇದೇ ಕಾರಣಕ್ಕೆ ಜೀವನದಲ್ಲಿ ಮನನೊಂದು ಡಿ. 18ರಂದು ಮಲ್ಲಿಗೆ ಗಿಡಕ್ಕೆ ಹಾಕುವ ಕೀಟನಾಶಕವನ್ನು ಸೇವಿಸಿದ್ದನು. ಅಸ್ವಸ್ಥಗೊಂಡಿದ್ದ ಜೋನ್ಸನ್ ನನ್ನು ಮನೆಯವರು ಉಡುಪಿ ಟಿಎಂಎ ಪೈ […]
ಡಿ. 28ರಿಂದ ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ: ಸಚಿವ ಡಾ. ಸುಧಾಕರ್
ಬೆಂಗಳೂರು: ಒಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡಿಸೆಂಬರ್ 28ರಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆ ವರೆಗೂ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಇರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಿತು. ಸಭೆಯ ಬಳಿಕ ಮಾಧ್ಯಮಗಳಿಗೆ ಡಾ. ಕೆ ಸುಧಾಕರ್ ಮಾಹಿತಿ ನೀಡಿದರು. ಸಾರ್ವಜನಿಕ ಸ್ಥಳಗಳಲ್ಲಿ […]