ವೀಕೆಂಡ್ ಕರ್ಫ್ಯೂ: ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಬ್ರೇಕ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಹೇರಲಾಗಿರುವ ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ವೀಕೆಂಡ್ ಕರ್ಫ್ಯೂ ದಿನಗಳಲ್ಲಿ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಿದೆ. ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಶುಕ್ರವಾರ ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ ಸೋಮವಾರದಿಂದ ಶುಕ್ರವಾರದ ರಾತ್ರಿ 10 ಗಂಟೆವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇದೆ. ಆದರೆ ಈ ಅವಧಿಯಲ್ಲಿ ಮದ್ಯದಂಗಡಿಗಳಲ್ಲಿ ಶೇ. 50 […]
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಮಾರ್ಚ್ 28 ರಿಂದ ಏಪ್ರಿಲ್ 11 ರ ವರೆಗೆ ಪರೀಕ್ಷೆ ನಡೆಸಲು ನಿರ್ಧಾರಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಜನವರಿ 14 ರ ವರೆಗೂ ಅವಕಾಶ ನೀಡಲಾಗಿದೆ. ಈ ದಿನಾಂಕದೊಳಗೆ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದಲ್ಲಿ ವೇಳಾಪಟ್ಟಿಯೇ ಅಂತಿಮ ಎಂದು ತೀರ್ಮಾನಿಸಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ಮಾರ್ಚ್ 28- ಪ್ರಥಮ ಭಾಷೆ ಮಾರ್ಚ್ 30- ದ್ವಿತೀಯ ಭಾಷೆ […]
ಬ್ರಹ್ಮಾವರ: ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಉಡುಪಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಉಡುಪಿ ಜಿಲ್ಲೆ, ಗ್ಲೋಬಲ್ ಇನ್ ಸ್ಟಿಟ್ಯೂಟ್ ಫಾರ್ ಎಜುಕೇಶನ್ ಆ್ಯಂಡ್ ರಿಸರ್ಚ್ ಫೌಂಡೇಶನ್ ಹಾಗೂ ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಮತ್ತು ಮಾರಾಟಗಾರರ ಸಂಘ ಇವರ ಜಂಟಿ ಆಶ್ರಯದಲ್ಲಿ ಬ್ರಹ್ಮಾವರದ ಮದರ್ ಪ್ಯಾಲೇಸ್ ಹೋಟೆಲ್ ನ ಮಿನಿ ಹಾಲ್ ನಲ್ಲಿ ಗುರುವಾರ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು. ಉಡುಪಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಅಂಕಿತಾಧಿಕಾರಿ […]
ಜಿಲ್ಲೆಯಾದ್ಯಂತ ಕೋವಿಡ್ ಸಮುಚಿತ ವರ್ತನೆ ಪಾಲನೆ ಕಡ್ಡಾಯ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 19 ಹರಡುವುದನ್ನು ತಪ್ಪಿಸಲು ಅರ್ಹ ಪ್ರತಿಯೊಬ್ಬರೂ 2 ಡೋಸ್ ಲಸಿಕೆ ಪಡೆಯುವುದು ಹಾಗೂ ಕೋವಿಡ್ ಸಮುಚಿತ ವರ್ತನೆಗಳ ಪಾಲನೆ ಮಾಡುವುದರಿಂದ ನಿಯಂತ್ರಣ ಸಾದ್ಯವಾಗಲಿದ್ದು, ಜಿಲ್ಲೆಯಾದ್ಯಂತ ಕೋವಿಡ್ ಸಮುಚಿತ ವರ್ತನೆಗಳು ಕಡ್ಡಾಯವಾಗಿ ಪಾಲನೆಯಾಗುವಂತೆ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತು ನಡೆದ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ಸಮುಚಿತ ವರ್ತನೆಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ,ಕೈ […]