ಮಣಿಪಾಲ: ಕರ್ಫ್ಯೂ ಅವಧಿಯಲ್ಲೂ ರಾತ್ರಿ 12 ರವರೆಗೆ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಯಕ್ಷಗಾನ ಕಲಾವಿದರ ಪ್ರತಿಭಟನೆ
ಉಡುಪಿ: ಕರ್ಫ್ಯೂ ಅವಧಿಯಲ್ಲಿಯೂ ರಾತ್ರಿ 12 ರವರೆಗೆ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ವೃತ್ತಿಪರ, ಹವ್ಯಾಸಿ ಯಕ್ಷಗಾನ ಕಲಾವಿದರು ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಯಕ್ಷಗಾನ ಮೇಳಗಳಲ್ಲಿ ವೃತ್ತಿಪರ ಕಲಾವಿದರಾಗಿ ಹಾಗೂ ನೇಪಥ್ಯ ಕೆಲಸಗಾರರಾಗಿ ದುಡಿಯುತ್ತಿದ್ದೇವೆ. ಸದ್ಯ ರಾಜ್ಯದಲ್ಲಿ ವಿಧಿಸಿರುವ ಕರ್ಪ್ಯೂವಿನಿಂದ ನಮ್ಮ ಜೀವನವೇ ಅತಂತ್ರ ಸ್ಥಿತಿಯಲ್ಲಿದೆ […]
ರಾಜ್ಯದಲ್ಲಿ ಒಂದೇ ದಿನ 107 ಹೊಸ ಒಮಿಕ್ರಾನ್ ಸೋಂಕು ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಸ್ಪೋಟಗೊಂಡಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 107 ಹೊಸ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 333ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ಕೆ. ಸುಧಾಕರ್ ಅವರು ಟ್ವೀಟ್ ಮಾಡಿದ್ದು, ಜನವರಿ 6ರಂದು ದಾಖಲಾದ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಪ್ರಕಟಿಸಿದ್ದಾರೆ.
ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಮೃತ್ಯುಂಜಯ ಜಪ, ಪೂಜೆ
ಉಡುಪಿ: ಜ.5ರಂದು ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಬೇಟಿ ಸಂದರ್ಭದಲ್ಲಿ ನಿಗದಿತ ಭದ್ರತಾ ಸುರಕ್ಷಾ ಕ್ರಮಗಳನ್ನು ಕೈಗೊಳ್ಳದೇ ಕೀಳು ರಾಜಕೀಯ ಪ್ರದರ್ಶಿಸಿರುವ ಪಂಜಾಬಿನ ಕಾಂಗ್ರೆಸ್ ಸರಕಾರದ ನಡೆಯನ್ನು ಉಡುಪಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸಿದೆ ಹಾಗೂ ತಪ್ಪಿತಸ್ಥರ ವಿರುದ್ಧ ಉಗ್ರ ಕ್ರಮವನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದೆ. ಈ ವಿಲಕ್ಷಣ ಸನ್ನಿವೇಶದಲ್ಲಿ ಪ್ರಧಾನಿ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಉಡುಪಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಮೃತ್ಯುಂಜಯ ಜಪ ಮತ್ತು ವಿಶೇಷ […]
ಮಣಿಪಾಲ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸುಲಿಗೆ
ಮಣಿಪಾಲ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿರುವ ಘಟನೆ ಕುರ್ಲಾ- ಕಯಾಕುಲಂ ನೇತ್ರಾವತಿ ಎಕ್ಸ್ ಪ್ರೆಸ್ ನಲ್ಲಿ ನಡೆದಿದೆ. ಕೇರಳದ ಪೊದಿಯಮ್ಮ ಡೆನಿಲ್ ಎಂಬವರು ಗಂಡ ಹಾಗೂ ಮಗನೊಂದಿಗೆ ಡಿ. 15ರಂದು ಕೇರಳದ ಕಯಾಕುಲಂಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಡಿ. 16ರಂದು 2.30 ಮುಂಜಾನೆ ರೈಲು ಉಡುಪಿ ರೈಲ್ವೇ ನಿಲ್ದಾಣಕ್ಕೆ ತಲುಪಿದಾಗ ಸುಮಾರು 30 ವರ್ಷ ಪ್ರಾಯದ ಯುವಕ ಪಿರ್ಯಾದಿದಾರರ ವ್ಯಾನಿಟಿ ಬ್ಯಾಗ್ ಅನ್ನು ಸುಲಿಗೆ ಮಾಡಿಕೊಂಡು, ರೈಲಿನ ಕೋಚಿನ ಎಡ ಭಾಗದ ಬಾಗಿಲಿನಿಂದ […]