ಪಡಿತರ ಮೂಲಕ ಕುಚ್ಚಿಗೆ ಅಕ್ಕಿ ವಿತರಣೆಗೆ ಕೇಂದ್ರ ಅನುಮತಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಪಡಿತರ ಮೂಲಕ ಕುಚ್ಚಿಗೆ ಅಕ್ಕಿ ವಿತರಣೆ ಮಾಡಲು ಕೇಂದ್ರ ಅನುಮತಿ ನೀಡಿದೆ ಎಂದು ಸಮಾಜ ಕಲ್ಯಾಣ ಹಿಂದುಳಿದ ವರ್ಗದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎರಡು ಜಿಲ್ಲೆಗಳಿಗೆ ಒಂದು ಲಕ್ಷ ಕ್ವಿಂಟಾಲ್ ಅಕ್ಕಿ ಬಿಡುಗಡೆಯಾಗುತ್ತದೆ. ಎಂ4, ಜಯಾ ತಳಿಯ ಅಕ್ಕಿಯನ್ನು ಖರೀದಿ ಮಾಡಿ ಪಡಿತರದಾರರಿಗೆ ವಿತರಣೆ ಮಾಡಲು ಸೂಕ್ತ ವ್ಯವಸ್ಥೆ ಮಾಡಲಾಗುವುದು. ಈಗಾಗಲೇ ವಿವಿಧಕಡೆಯಿಂದ ಭತ್ತ ಖರೀದಿ ಮಾಡಲಾಗಿದೆ ಎಂದು […]
ಹೆಬ್ರಿ: ಹೆತ್ತ ತಾಯಿಗೆ ಜೀವ ಬೆದರಿಕೆ ಹಾಕಿದ ಪಾಪಿ ಮಗ..!
ಹೆಬ್ರಿ: ಪಾಪಿ ಮಗನೊಬ್ಬ ಹೆತ್ತುಹೊತ್ತು ಸಾಕಿ ಸಲಹಿದ ತಾಯಿಗೆ ಜಾಗದ ವಿಚಾರಕ್ಕೆ ಸಂಬಂಧಿಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ಹೆಬ್ರಿ ತಾಲೂಕಿನ ಚಾರ ಗ್ರಾಮದ ಹಂದಿಕಲ್ಲು ಎಂಬಲ್ಲಿ ನಡೆದಿದೆ. ಚಾರ ಗ್ರಾಮದ ಹಂದಿಕಲ್ಲು ಸುಲೋಚನಾ ಶೆಟ್ಟಿ ಅವರು ಜ. 7ರಂದು ಮಧ್ಯಾಹ್ನ ತಮ್ಮ ಮನೆಯ ಬಳಿಯ ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಸುಲೋಚನಾ ಅವರ ಮಗ ಸುಭೋದ ಶೆಟ್ಟಿ ಎಂಬಾತ ಜಾಗದ ವಿಚಾರದಲ್ಲಿ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ […]
ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ನಿರಾಕರಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೊಂದಾಯಿಸಿರುವ ಖಾಸಗಿ ಆಸ್ಪತ್ರೆಗಳು ಜಿಲ್ಲಾಡಳಿತದ ಮೂಲಕ ಕಳುಹಿಸುವ ಕೋವಿಡ್ ಸೋಂಕಿತರಿಗೆ ಚಿಕಿತ್ಸೆಗೆ ಬೆಡ್ ಗಳನ್ನು ನೀಡಲು ನಿರಾಕರಿಸಿದಲ್ಲಿ ಅಂತಹ ಅಸ್ಪತ್ರೆಗಳು ವಿರುದ್ದ ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ತಿಳಿಸಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆಗಳು ಸರ್ಕಾರದ ನಿರ್ದೇಶನದಂತೆ ತಮ್ಮಲ್ಲಿನ ಎಲ್ಲಾ ಮಾದರಿಯ ಬೆಡ್ ಗಳಲ್ಲಿ ನಿಗಧಿತ ಸಂಖ್ಯೆ […]